ಗೋಣಿಕೊಪ್ಪಲು: ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಸದಸ್ಯರ ಒಮ್ಮತ


Team Udayavani, Aug 2, 2019, 5:27 AM IST

30-GKL-02

ಗೋಣಿಕೊಪ್ಪಲು: ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಸದಸ್ಯರು ಒಮ್ಮತ ತೀರ್ಮಾನ ಕೈಗೊಂಡಿದ್ದಾರೆ. ಪ್ರತಿ ವಾರ್ಡಿನ ಮನೆ ಮನೆಗಳಿಗೆ ಕಸ ಸಂಗ್ರಹಿಸಲು ವಾಹನಗಳನ್ನು ಕಳುಹಿಸಿಕೊಡಲಾಗುವುದು. ಜನರು ಹಸಿ ಹಾಗೂ ಒಣ ಕಸಗಳನ್ನು ವಿಂಗಡಿಸಿ ನೀಡುವ ಮೂಲಕ ಕಸ ಸಮಸ್ಯೆಗೆ ಸ್ಪಂದಿಸಬೇಕೆಂದು ಗೋಣಿಕೊಪ್ಪಲು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ್‌ ಮನವಿ ಮಾಡಿದರು.

ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ ಅಧ್ಯಕ್ಷತೆಯಲ್ಲಿ ಪಂಚಾಯತಿ ಹಳೆಯ ಕಟ್ಟಡ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಕಸ ವಿಚಾರವಾಗಿ ತೆಗೆದುಕೊಂಡ ನಿಲುವುಗಳೇನು ಎಂಬ ಗ್ರಾಮಸ್ಥರ ಪ್ರಶ್ನೆಗೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಈ ವಿಚಾರವನ್ನು ಸಭೆಗೆ ತಿಳಿಸಿದರು.

ಕಸ ಸಮಸ್ಯೆ ಬಗೆಹರಿಯಲು ವರ್ತಕರು ಸಹ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕೈಜೋಡಿಸಬೇಕಾಗಿದೆ. ಪ್ಲಾಸ್ಟಿಕ್‌ ತ್ಯಾಜ್ಯ ವಸ್ತುಗಳನ್ನು ಅಂಗಡಿಗಳಲ್ಲಿ ಮಾರಟ ಮಾಡದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಪಂಚಾಯಿತಿ ಜಾಗೃತಿ ಮೂಡಿಸಲಿದೆ. ಎಂದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಗ್ರಾ.ಪಂ. ಸದಸ್ಯ ಬಿ.ಎನ್‌. ಪ್ರಕಾಶ್‌ ಅವರು ಕಸ ಸಮಸ್ಯೆ ಬಗೆಹರಿಯುವುದು ಪಂಚಾಯಿತಿ ದೊಡ್ಡ ಸವಾಲಾಗಿದೆ. ಇದಕ್ಕೆ ಸ್ಪಂದಿಸದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಯಾವುದೇ ಸದಸ್ಯರು ಆರೋಪದ ಪರವಾಗಿ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.

ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಅವರು ಸಭೆಯಲ್ಲಿ ಕಸ ಸಮಸ್ಯೆಗೆ ಸದಸ್ಯರ ಹೊಂದಾಣಿಕೆಯ ಕೊರತೆಯೇ ಮುಖ್ಯ ಕಾರಣ. ಯಾವುದೇ ರಾಜಕೀಯ, ವೈಯಕ್ತಿಕ ದುರುದ್ದೇಶ ಇಟ್ಟುಕೊಳ್ಳದೇ ಕಸ ಸಮಸ್ಯೆಗೆ ಸರ್ವ ಸದಸ್ಯರು ಸ್ಪಂದಿಸಬೇಕೆಂದು ಸಲಹೆ ನೀಡಿದರು.

ಗ್ರಾಮಸ್ಥ ಜಗದೀಶ್‌ ಅವರು ಮಾತನಾಡಿ ಸಂಘ ಸಂಸ್ಥೆಗಳನ್ನು ಚೇಂಬರ್‌ ಆಫ್ ಕಾಮರ್ಸ್‌ಗಳ ಸಲಹೆ ಸೂಚನೆಗಳನ್ನು ಪಡೆದುಕೊಂಡು ಕಸ ಸಮಸ್ಯೆಯ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ತಾ.ಪಂ. ಮಾಜಿ ಅಧ್ಯಕ್ಷ ರಾಣಿ ನಾರಾಯಣ್‌ ಅವರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಮತ್ತು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿರುವ ಅಂಗಡಿ ಮಳಿಗೆಗೆ ಮೆಟ್ಟಿಲು ಅಳವಡಿಸಲು ಮುಂದಾಗಬೇಕು ಎಂದು ಹೇಳಿದರು.

ವಾಹನ ಚಾಲಕರ ಸಂಘದ ಉಪಾಧ್ಯಕ್ಷ ಶರತ್‌ ಕಾಂತ್‌ ಮಾತನಾಡಿ ರುದ್ರಭೂಮಿ ಮುಂದೆ ಕಸ ಹಾಕುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪಟ್ಟಣದಲ್ಲಿ ಗಾಂಜಾ ವ್ಯಸನಕ್ಕೆ ಯುವಕರು ಬಲಿಯಾಗುತ್ತಿದ್ದಾರೆ. ಪೊಲೀಸ್‌ ಇಲಾಖೆ ಈ ಬಗ್ಗೆ ಗಮನ ಹರಿಸುವಂತೆ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಗಳಿಲ್ಲ. ಹಾವು ಕಚ್ಚಿದರೆ ಔಷಧಿಗಳು ಇಲ್ಲ. ಈ ಬಗ್ಗೆ ಗಮನ ಹರಿಸಿ ಜನರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಯುವಕರು ವಾಹನಗಳಿಗೆ ಪರವಾನಾಗೆ ಹೊಂದಿಲ್ಲದಿದ್ದರೂ ಕರ್ಕಶ ಶಬ್ದಗಳ ಸೈಲೆಂಸರ್‌ ಬಳಸಿಕೊಂಡು ಶಬ್ದ ಮಾಲಿನ್ಯ ಮಾಡುತ್ತಿದ್ದಾರೆ. ಇದರಿಂದ ರೋಗಿಗಳಿಗೆ, ವಯಸ್ಕರಿಗೆ ಕಿರಿ ಕಿರಿಯಾಗುತ್ತಿದೆ ಎಂದು ಪರಶುರಾಮ್‌ ಸಭೆಗೆ ಮಾಹಿತಿ ನೀಡಿದರು.

ಆಟೋ ಚಾಲಕರ ಸಂಘದ ಉಪಾಧ್ಯಕ್ಷ ಜಿಮ್ಮ ಸುಬ್ಬಯ್ಯ ಅವರು ಏಕಮುಖ ಸಂಚಾರದಿಂದ ಆಟೋ ಚಾಲಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಿಂದ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.

ಸಭೆಯಲ್ಲಿ ಪಂಚಾಯಿತಿ ನೂಡೆಲ್‌ ಅಧಿಕಾರಿ ಮಹೆದೇವ ಮತ್ತು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

124 ಅಂಗಡಿಗಳ ವ್ಯಾಪಾರಿಗಳು ಅತಂತ್ರ
ಟೆಂಡರ್‌ ಪ್ರಕ್ರಿಯೆಯ ನಿರ್ಧಾರದಿಂದ ಪಂಚಾಯಿತಿಗೆ ಸಂಬಂಧಪಟ್ಟ 124 ಅಂಗಡಿಗಳ ವ್ಯಾಪಾರಸ್ಥರು ಅತಂತ್ರ ಸ್ಥಿತಿಗೆ ಒಳಪಡುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳದೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕೆಂದು ವರ್ತಕರು ಸಭೆಯಲ್ಲಿ ತಮ್ಮ ಮನವಿಯನ್ನು ಇಟ್ಟರು. ಗ್ರಾ.ಪಂ. ಸದಸ್ಯ ಕೆ.ಪಿ. ಬೋಪಣ್ಣ ಟೆಂಡರ್‌ ಕ್ರಿಯೆ ನಡೆಸುವ ಬಗ್ಗೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವ ಬಗ್ಗೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು. ವ್ಯಾಪಾರಸ್ಥರಿಗೆ ಯಾವುದೇ ಹೊಡೆತ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು. ಪಂಚಾಯಿತಿ ಆಧಾಯ ಕ್ರೋಡಿಕರಣಕ್ಕೆ ಮಳಿಗೆಯ ಬಾಡಿಗೆಯನ್ನು ಹೆಚ್ಚಿಸುವ ಚಿಂತನೆ ಇದೆ. ಯಾರು ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೋ ಅವರಿಗೆ ನೀಡುವಂತೆ ಮತ್ತು ಒಬ್ಬರಿಗೆ ಒಂದೇ ಮಳಿಗೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು. ಮಳಿಗೆ ಪಡೆದುಕೊಂಡ ಮಾಲೀಕರು ತಮ್ಮ ಮಳಿಗೆಯನ್ನು ಬೇರೆಯವರಿಗೆ ಬಾಡಿಗೆ ನೀಡಿ ಹೆಚ್ಚು ಬಾಡಿಗೆ ಪಡೆದುಕೊಳ್ಳುತ್ತಿದ್ದಾರೆ. ಪಂಚಾಯಿತಿಗೆ ಕೇವಲ 1000ದಿಂದ 1500 ಮಾತ್ರ ಬಾಡಿಗೆ ನೀಡುತ್ತಿದ್ದಾರೆ. ಇದರಿಂದ ಪಂಚಾಯಿತಿಯ ಆರ್ಥಿಕ ಪರಿಸ್ಥಿತಿ ಎದುರಾಗಿದೆ ಎಂದರು.

ಟಾಪ್ ನ್ಯೂಸ್

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Woqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Woqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.