ದುಷ್ಕರ್ಮಿಗಳ ಶೀಘ್ರ ಬಂಧನಕ್ಕೆ ಹಿಂದೂಪರ ಸಂಘಟನೆಗಳ ಆಗ್ರಹ
Team Udayavani, Sep 1, 2017, 6:25 AM IST
ಮಡಿಕೇರಿ: ಕಕ್ಕಬ್ಬೆಯ ನಟ್ಟು ಮಾಡು ಶ್ರೀ ಭಗವತೀ ದೇವಸ್ಥಾನದ ಸ್ವಾಗತ ಕಮಾನಿನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ದನದ ನಾಲ್ಕು ಕಾಲುಗಳನ್ನು ಚೀಲ ವೊಂದರಲ್ಲಿ ನೇತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಂಜೆ ರಸ್ತೆ ತಡೆ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದರು. ರಸ್ತೆ ತಡೆಯ ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿದ ಪ್ರತಿಭಟನಕಾರರು ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಆದಷ್ಟು ಶೀಘ್ರ ದುಷ್ಕೃತ್ಯವೆಸಗಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಜರಂಗದಳದ ಸಂಚಾಲಕ ಅಜಿತ್ ಕುಮಾರ್, ವಿಹಿಂಪದ ಪ್ರಮುಖ ಡಿ.ಹೆಚ್.ಮೇದಪ್ಪ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್, ಪ್ರಮುಖರಾದ ಮನು ಮಂಜುನಾಥ್, ಗಣೇಶ್ ಕಡಗದಾಳು ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್ ಶರ್ಮಾ ಅಭ್ಯಾಸ
Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!
Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.