“ದೂರದೃಷ್ಟಿಯ ಚಿಂತನೆ ಕೆಂಪೇಗೌಡರಲ್ಲಿತ್ತು’
ಕೆಂಪೇಗೌಡರ ಜಯಂತ್ಯುತ್ಸವ
Team Udayavani, Jun 29, 2019, 5:17 AM IST
ಮಡಿಕೇರಿ:ನಾಡಪ್ರಭು ಕೆಂಪೇಗೌಡ ಅವರು ಸ್ವಾರ್ಥ ಜೀವನವನ್ನು ಬಿಟ್ಟು ಸಮಾಜಮುಖೀಯಾಗಿ ಯೋಚಿ ಸಿದರ ಫಲವಾಗಿ ಬೆಂಗಳೂರು ಬೃಹತ್ತಾಗಿ ಬೆಳೆದಿದೆ. ಬೆಂಗಳೂರನ್ನು ಕಟ್ಟಿ ಬೆಳೆಸಿದ ಕೆಂಪೇಗೌಡ ಅವರ ದೂರದೃಷ್ಟಿಯ ಅಗಾಧ ಚಿಂತನೆಯ ಫಲವಾಗಿ ಇಂದು ಉದ್ಯೋಗ, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಹೀಗೆ ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಹೆಸರು ಮಾಡಿದೆ ಎಂದು ಅವರು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಶ್ಲಾಘಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ವೀಣಾ ಅಚ್ಚಯ್ಯ ಹೇಳಿದರು.
ಕೊಡಗು-ಹಾಸನ ಜಿಲ್ಲೆಗಳ ಆದಿಚುಂ ಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಬಸವೇಶ್ವರರು, ಕನಕದಾಸರು, ಪುರಂದರ ದಾಸರು, ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ ಹೀಗೆ ಹಲವು ದಾರ್ಶನಿಕರ ಆದರ್ಶಗಳ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಮತ್ತು ಅವರ ಆದರ್ಶಗಳನ್ನು ಅಳವ ಡಿಸಿಕೊಳ್ಳುವಂತಾಗಬೇಕು ಎಂದರು.
ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಆದರ್ಶ ಆಡಳಿತಗಾರರಲ್ಲಿ ಒಬ್ಬರಾಗಿದ್ದ ಕೆಂಪೇಗೌಡರು ಕೆರೆ ಕಟ್ಟೆಗಳನ್ನು ನಿರ್ಮಿಸಿ ಅಭಿವೃದ್ಧಿಯತ್ತ ಗಮನ ಹರಿಸಿದರು. ಇದರ ಫಲವಾಗಿಯೇ ಬೆಂಗಳೂರು ಜಗತ್ ಪ್ರಸಿದ್ಧಿಯಾಗಿದೆ ಎಂದರು.
ಜಿ.ಪಂ.ಸದಸ್ಯರಾದ ದೀಪಕ್, ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀ ನಿವಾಸ್, ಪ್ರಮುಖರಾದ ಹೊಸೂರು ಸತೀಶ್ ಕುಮಾರ್ ಇದ್ದರು.
ಕುಶಾಲನಗರ ಒಕ್ಕಲಿಗ ಯುವ ವೇದಿಕೆಯ ಎಂ.ಡಿ.ಕೃಷ್ಣಪ್ಪ ಅವರು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭವನ ನಿರ್ಮಾಣಕ್ಕೆ ಜಾಗ ನೀಡುವಂತಾಗಬೇಕು. ನಗರದ ಯಾವುದಾದರೂ ವೃತ್ತಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ಹೆಸರಿಡಬೇಕೆಂದು ಮನವಿ ಮಾಡಿದರು.
ರಾಮನಗರದ ಸಿದ್ದರಾಜು ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಸ್ವಾಗತಿಸಿದರು. ಎಚ್.ಜಿ. ಕುಮಾರ್ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.
ಕೆರೆಗಳ ನಿರ್ಮಾಣ
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಅವರು ಮಾತನಾಡಿ ವಿಜಯನಗರ ಸಾಮ್ರಾಜ್ಯದಂತೆ ಬೆಂಗಳೂರು ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಕೆಂಪೇಗೌಡರು ಶ್ರಮಿಸಿದ್ದರು. ಭವಿಷ್ಯದಲ್ಲಿ ಬೆಂಗಳೂರು ಹೇಗಿರಬೇಕು ಎಂಬ ಬಗ್ಗೆ ಯೋಚಿಸಿದ್ದರು ಎಂದು ಅವರು ತಿಳಿಸಿದರು.
ಬೆಂಗಳೂರನ್ನು ಮಾದರಿ ನಗರವಾಗಿ ದೂರದೃಷ್ಟಿಯಿಂದ ನಿರ್ಮಿಸಿದ ಹಿರಿಮೆ ಕೆಂಪೇಗೌಡರದ್ದಾಗಿದೆ. ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಲವು ಕೆರೆಗಳನ್ನು ನಿರ್ಮಿಸಿ ನೀರಾವರಿಗೂ ಸಹ ಹೆಚ್ಚಿನ ಒತ್ತು ನೀಡಿದ್ದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.