ವಿದ್ಯೆ ಮಕ್ಕಳ ಭವಿಷ್ಯದ ಬುನಾದಿ: ಪೌರಾಯುಕ್ತ ರಮೇಶ್
ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಪರಿಕರ ವಿತರಣೆ
Team Udayavani, Jul 30, 2019, 5:38 AM IST
ಮಡಿಕೇರಿ: ಮಡಿಕೇರಿ ಜು.29 ವಿದ್ಯೆ ಎಂಬುವುದು ಮಕ್ಕಳ ಭವಿಷ್ಯದ ಬುನಾದಿಯಾಗಿದ್ದು, ಯಾರೂ ಕದಿಯಲಾಗದ ಸ್ವತ್ತು ಎಂದು ಮಡಿಕೇರಿ ನಗರಸಭಾ ಪೌರಾಯುಕ್ತ ಎಂ.ಎನ್. ರಮೇಶ್ ಹೇಳಿದರು.
ಮಡಿಕೇರಿಯ ಕ್ಲಬ್ ಮಹೇಂದ್ರ ಪ್ರಾಯೋಜಕತ್ವದಲ್ಲಿ ಮಾನವೀಯ ಸ್ನೇಹಿತರ ಒಕ್ಕೂಟ ಮತ್ತು ಮಡಿಕೇರಿ ಹಿತರಕ್ಷಣಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕೂರ್ಗ್ ಕಮ್ಯುನಿಟಿ ಹಾಲ್‌ನಲ್ಲಿ ನಡೆದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪೋಷಕರು ಮನಸ್ಸು ಮಾಡಿದರೆ ಮಕ್ಕಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ನೀಡಬಹುದು. ಇಂಜಿನಿಯರ್, ಡಾಕ್ಟರ್, ವಿಜ್ಞಾನಿಗಳಾಗುವ ಎಲ್ಲಾ ಅವಕಾಶಗಳು ಇಂದಿನ ವಿದ್ಯಾರ್ಥಿಗಳಿಗಿದ್ದು, ಮಕ್ಕಳ ಭವಿಷ್ಯ ಪೋಷಕರ ನಿರ್ಧಾರದಲ್ಲಡಗಿದೆ ಎಂದರು.
ವಿದ್ಯಾರ್ಜನೆಯ ಸಂದರ್ಭ ಮಕ್ಕಳನ್ನು ಮೊಬೈಲ್ ಸಂಪರ್ಕದಿಂದ ದೂರವಿರಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಮನೆಯಲ್ಲಿ ನಿರ್ದಿಷ್ಟ ಸಮಯವನ್ನು ಮೀಸಲಾಗಿಟ್ಟು ಶೈಕ್ಷಣಿಕ ಚಟುವಟಿಕೆಗೆ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು. ತಾವು ಪತ್ರಿಕಾ ರಂಗದಲ್ಲೂ ಕಾರ್ಯ ನಿರ್ವಹಿಸಿದ್ದು, ಸಂಘಟನೆಗಳ ಮೂಲಕ ಸಮಾಜ ಸೇವೆ ಮಾಡಿರುವುದಾಗಿ ರಮೇಶ್ ನೆನಪಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪತ್ರಕರ್ತ ಎಂ.ಇ.ಮಹಮ್ಮದ್ ಮಾನವೀಯ ಸ್ನೇಹಿತರ ಒಕ್ಕೂಟದಂತಹ ಜಾತ್ಯತೀತ, ನಿಸ್ವಾರ್ಥ ಸಂಘಟನೆಗಳನ್ನು ಜನರು ಪೋ›ತ್ಸಾಹಿಸಬೇಕೆಂದರು.
ಮಡಿಕೇರಿ ಹಿತರಕ್ಷಣಾ ವೇದಿಕೆಯ ರವೀಗೌಡ ಹಾಗೂ ಕ್ಲಬ್ ಮಹೇಂದ್ರದ ಹೆಚ್‌ಆರ್ ವ್ಯವಸ್ಥಾಪಕ ಕಾರ್ತಿಕೇಯನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಆಯ್ದ 41 ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಕೊಡೆ ಹಾಗೂ ರೈನ್ ಕೋಟ್‌ಗಳನ್ನು ವಿತರಿಸಲಾಯಿತು.
ಒಕ್ಕೂಟದ ವಕ್ತಾರ ಮೈಕಲ್ ವೇಗಸ್ ಪ್ರಾಸ್ತಾವಿಕವಾಗಿ ಮಾತನಾಡಿ ಕ್ಲಬ್ ಮಹೇಂದ್ರ ಸಂಸ್ಥೆಯ ಉದಾರ ಕೊಡುಗೆಯನ್ನು ಸ್ಮರಿಸಿದರು.
ಕ್ಲಬ್‌ನ ಮುಖ್ಯ ವ್ಯವಸ್ಥಾಪಕ ದಾಸ್ ನವೀನ್ ನೊರೋನ ಉಪಸ್ಥಿತರಿದ್ದರು.ಕುಮಾರಿ ಸೇಜಲ್ ವಿನ್ಸೆಂಟ್ ಪ್ರಾರ್ಥಿಸಿ, ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯದರ್ಶಿ ಸುಕುಮಾರ್ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.