ಜನಸಾಮಾನ್ಯರ ಪಡಿತರ ವ್ಯವಸ್ಥೆ ನ್ಯೂನತೆ ಸರಿಪಡಿಸಲು ಆಗ್ರಹ
Team Udayavani, Jan 31, 2020, 2:09 AM IST
ಮಡಿಕೇರಿ: ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನಗರದಲ್ಲಿ ಪತ್ರಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಹಾರ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಜನಸಾಮಾನ್ಯರಿಗೆ ವಂಚನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇ.ರಾ.ದುರ್ಗಾಪ್ರಸಾದ್, ನಕಲಿ ರೇಷನ್ ಕಾರ್ಡ್‌ಗಳ ಸೃಷ್ಟಿಗೆ ಸರ್ಕಾರ ಮತ್ತು ಮೇಲಧಿಕಾರಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣವೆಂದು ಆರೋಪಿಸಿದರು.
ನಕಲಿ ಕಾರ್ಡ್‌ಗಳನ್ನು ಪತ್ತೆ ಹಚ್ಚುವ ನೆಪದಲ್ಲಿ ಬಡವರು, ಕೂಲಿ ಕಾರ್ಮಿಕರು ಹಾಗೂ ಶೋಷಿತ ವರ್ಗಕ್ಕೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ಈ ಪ್ರಯತ್ನದ ಹಿಂದೆ ಪಡಿತರ ವ್ಯವಸ್ಥೆಯನ್ನೇ ಸ್ಥಗಿತಗೊಳಿಸುವ ಹುನ್ನಾರ ಅಡಗಿದೆ ಎನ್ನುವ ಸಂಶಯ ಮೂಡುತ್ತಿದೆ ಎಂದು ಆರೋಪಿಸಿದರು.
ಎಪಿಎಲ್ ಮತ್ತು ಬಿಪಿಎಲ್ ಫಲಾನುಭವಿಗಳನ್ನು ಆಯ್ಕೆ ಮಾಡುವ ಕ್ರಮವೇ ಅವೈಜ್ಞಾನಿಕವಾಗಿದೆ ಎಂದು ಅಭಿಪ್ರಾಯಪಟ್ಟ ದುರ್ಗಾಪ್ರಸಾದ್, ಸಾಕಷ್ಟು ಅರ್ಹರನ್ನು ಪಡಿತರ ವ್ಯವಸ್ಥೆಯಿಂದ ದೂರವಿಟ್ಟು ವಂಚಿಸಲಾಗಿದೆ, ಇದು ಕೂಡ ವಂಚನೆಯ ಒಂದು ರೂಪವಾಗಿದೆ ಎಂದು ಟೀಕಿಸಿದರು.
ಪಾರದರ್ಶಕತೆಯನ್ನು ಸೃಷ್ಟಿಸುವ ಹೆಸರಿನಲ್ಲಿ ಸರಕಾರ ದಿನಕ್ಕೊಂದು ನಿಯಮ ರೂಪಿಸುತ್ತಿದ್ದು, ಈಗ ಹೆಬ್ಬೆರಳಿನ ಮುದ್ರೆ ಕೊಡಬೇಕಾದ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿಂದ ಜನಸಾಮಾನ್ಯರಿಗೆ ಸಮಸ್ಯೆಗಳೇ ಹೆಚ್ಚಿದ್ದು, ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು, ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೇ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸರಕಾರ ಈ ನಿಯಮದ ಅನುಷ್ಠಾನವನ್ನು ಸರಳೀಕರಿಸಿ ಜನಸಾಮಾನ್ಯರಿಗೆ ಸಹಾಯವಾಗುವಂತೆ ವ್ಯವಸ್ಥೆಯನ್ನು ರೂಪಿಸಬೇಕು ಎಂದು ದುರ್ಗಾಪ್ರಸಾದ್ ಒತ್ತಾಯಿಸಿದರು.
ವ್ಯವಸ್ಥೆ ಸರಳಗೊಳಿಸಿ
ಪಡಿತರ ವ್ಯವಸ್ಥೆಯನ್ನು ಸರಳೀಕರಿಸಬೇಕು, ತಿಂಗಳ ಮೊದಲ ಹತ್ತು ದಿನ ಮಾತ್ರ ಇರುವ ಕಾರ್ಯಕ್ರಮವನ್ನು ಇಡೀ ತಿಂಗಳಿಗೆ ವಿಸ್ತರಿಸಬೇಕು, ಎಪಿಎಲ್, ಬಿಪಿಎಲ್ ಮಾನದಂಡವನ್ನು ರದ್ದುಗೊಳಿಸಿ ಎಲ್ಲರಿಗೂ ಅನ್ವಯವಾಗುವ ಸಾರ್ವತ್ರಿಕ ಪಡಿತರ ವ್ಯವಸ್ಥೆಯನ್ನು ಜಾರಿಗೆ ತರಬೇಕು, ಸರಕಾರದ ನಿಯಮದಂತೆ ಅಂಗಡಿಗಳನ್ನು ತೆರೆದಿಡುವಂತಗಬೇಕು, ಸರಕಾರದಿಂದ ನೀಡುವ ಎಲ್ಲಾ ಸರಕುಗಳು ಎಲ್ಲಾ ಪಡಿತರ ಅಂಗಡಿಗಳಲ್ಲಿ ಏಕರೂಪದಲ್ಲಿ ಸಿಗುವಂತಾಗಬೇಕು, ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಪಡಿತರ ಪ್ರಮಾಣವನ್ನು ಹೆಚ್ಚಿಸಬೇಕು, ನಿತ್ಯೋಪಯೋಗಿ ವಸ್ತುಗಳಾದ ಸಕ್ಕರೆ, ಬೇಳೆ, ಸೀಮೆ ಎಣ್ಣೆ, ತಾಳೆ ಎಣ್ಣೆ, ಸೋಪು ಪಡಿತರ ವ್ಯವಸ್ಥೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.