ಗ್ರಾಮೀಣ ಜನರಿಗೆ ಸಾರಿಗೆ ವ್ಯವಸ್ಥೆ ಅಗತ್ಯ: ಬೋಪಯ್ಯ
Team Udayavani, Jul 11, 2017, 1:05 AM IST
ಮಡಿಕೇರಿ: ಗ್ರಾಮೀಣ ಜನರ ಶೈಕ್ಷಣಿಕ ಮತ್ತು ಸಾಮಾಜಿಕ ಬದುಕು ಹಸನಾಗಬೇಕಾದರೆ ಗ್ರಾಮ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಾರಿಗೆ ವ್ಯವಸ್ಥೆ ಅಗತ್ಯವೆಂದು ಶಾಸಕರಾದ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.
ಹೆಸರುವಾಸಿ ಪ್ರವಾಸಿತಾಣ ಮಾಂದಲ್ ಪಟ್ಟಿ- ದೇವಸ್ತೂರು-ಮಡಿಕೇರಿ ಮಾರ್ಗ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.
ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಕಾಲೂರು, ಮಾಂದಲ್‌ಪಟ್ಟಿ ಗ್ರಾಮಗಳು ಹಿಂದೆ ಕುಗ್ರಾಮವಾ ಗಿತ್ತು, ಈಗ ರಸ್ತೆ, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯ ಪಡೆದು ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಿವೆ. ಆ ದಿಸೆಯಲ್ಲಿ ನೂತನ ವಾಗಿ ಬಸ್ ಸಂಪರ್ಕವನ್ನು ಮಾಂದಲ್‌ಪಟ್ಟಿಗೆ ಕಲ್ಪಿಸಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಅವರು ಹೇಳಿದರು.
ಹಿಂದೆ ಬಸ್ ಸಂಪರ್ಕವಿಲ್ಲದೆ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ನಡೆದೇ ಹೊತ್ತು ತರುತ್ತಿದ್ದರು, ಮಕ್ಕಳು ಶಾಲೆಗೆ ನಡೆದುಕೊಂಡು ಹೋಗಬೇಕಿತ್ತು, ಸುರಕ್ಷಿತ ರಸ್ತೆ ಹಾಗೂ ವಿದ್ಯುತ್ ಸಂಪರ್ಕವಿಲ್ಲದೆ, ಇಲ್ಲಿನ ನಾಗರಿಕರು ಮತ್ತು ಮಕ್ಕಳು ತುಂಬಾ ತೊಂದರೆ ಅನುಭವಿಸಿದ್ದಾರೆ ಎಂದು ತಮ್ಮ ಚಿಕ್ಕಂದಿನ ದಿನವನ್ನು ಕೆ.ಜಿ.ಬೋಪಯ್ಯ ಸ್ಮರಿಸಿದರು.
ಮಾಂದಲ್ ಪಟ್ಟಿಯಿಂದ ಹಮ್ಮಿಯಾಲ 6 ಕಿ.ಮೀ. ವರೆಗೂ ಬಸ್ ಸಂಪರ್ಕ ಕಲ್ಪಿಸಬೇಕಿದೆ. ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಜಿ. ಬೋಪಯ್ಯ ತಿಳಿಸಿದರು.
ಸದ್ಯ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಯಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಹಲವು ರಸ್ತೆ ಗುಂಡಿ ಬಿದ್ದಿದ್ದು, ಇದನ್ನು ಸರಿಪಡಿಸಲು ಸಂಬಂಧ ಪಟ್ಟವರ ಜತೆ ಚರ್ಚಿಸಲಾಗುವುದು. ಜತೆಗೆ ವಿವಿಧ ಯೋಜನೆಯಡಿ ಅನುದಾನ ಬಿಡುಗಡೆಗೆ ಪ್ರಯತ್ನಿ ಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಮಾತನಾಡಿ, ಕಾಲೂರು, ಮುಕ್ಕೊಡ್ಲು, ಹಮ್ಮಿಯಾಲ ಭಾಗದ ಮಕ್ಕಳು ಮತ್ತು ಸಾರ್ವಜನಿಕರ ಅನುಕೂ ಲಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರ ಪ್ರಯೋ ಜನ ಪಡೆಯಬೇಕು. ಬಸ್ ಸಂಚಾರಕ್ಕೆ ಯಾವುದೇ ರೀತಿಯ ತಡೆ ಉಂಟುಮಾಡದೆ ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸಹಕರಿಸಬೇಕು ಎಂದರು.
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಜನರ ಅನುಕೂಲಕ್ಕಾಗಿ ಬಸ್ ಸಂಪರ್ಕ ಕಲ್ಪಿಸ ಲಾಗಿದೆ. ಗ್ರಾಮಸ್ಥರು, ಜನಪ್ರತಿನಿಧಿಗಳು ಎಲ್ಲರ ಸಹಕಾರ
ದಿಂದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಬಸ್ ವೇಳಾಪಟ್ಟಿ ಇಂತಿದೆ;
ಕೆ.ಎಸ್.ಆರ್.ಸಿ. ಮಡಿಕೇರಿ ಘಟಕದ ಇನ್ ಸ್ಪೆಕ್ಟರ್ ಈರಪ್ಪ ಅವರು ಮಾತನಾಡಿ ಮಾಂದಲ್ ಪಟ್ಟಿಗೆ ಬಸ್ ಸಂಪರ್ಕವು ಪ್ರತಿನಿತ್ಯ ಮಡಿಕೇರಿಯಿಂದ ಬೆಳಗ್ಗೆ 7 ಗಂಟೆಗೆ ಹೊರಟು, ಬೆಳಗ್ಗೆ 8.15 ಗಂಟೆಗೆ ಮಾಂದಲ್ ಪಟ್ಟಿ ತಲುಪಲಿದೆ.
ಬಳಿಕ ಬೆಳಗ್ಗೆ 8.30 ಗಂಟೆಗೆ ಮಾಂದಲ್‌ಪಟ್ಟಿ ಯಿಂದ ಮಡಿಕೇರಿಗೆ ತೆರಳಲಿದೆ. ಹಾಗೆಯೇ ಸಂಜೆ 4 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 5.30 ಗಂಟೆಗೆ ಮಾಂದಲ್ ಪಟ್ಟಿ ತಲುಪಿ ವಾಪಸ್ ಮಡಿಕೇರಿಗೆ ಹೋಗಲಿದೆ ಎಂದು ಅವರು ಮಾಹಿತಿ ನೀಡಿದರು.
ಜಿ.ಪಂ.ಸದಸ್ಯರಾದ ಯಲದಾಳು ಪದ್ಮಾವತಿ, ತಾ.ಪಂ.ಸದಸ್ಯರಾದ ಮುದ್ದಂಡ ರಾಯ್ ತಮ್ಮಯ್ಯ, ಗಾಳಿಬೀಡು ಗ್ರಾ.ಪಂ. ಅಧ್ಯಕ್ಷರಾದ ಸುಭಾಷ್ ಸೋಮಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್. ತಮ್ಮಯ್ಯ, ಎ.ಟಿ. ಮಾದಪ್ಪ, ಸಿ.ಎಂ. ತಿಮ್ಮಯ್ಯ, ಪುಷ್ಪ ಪೂಣಚ್ಚ, ಕನ್ನಂಡ ಪೆಮ್ಮಯ್ಯ, ಕಾಲೂರು ನಾಗೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.