ರೈತರ ಸಾಲಮನ್ನಾ ಮಾಡಲು ತೆರಾಲು ಗ್ರಾಮಸ್ಥರು ಆಗ್ರಹ
Team Udayavani, Sep 1, 2018, 6:50 AM IST
ಮಡಿಕೇರಿ: ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವ ಕೊಡಗಿನ ನೈಜ ಸಂತ್ರಸ್ತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದರೊಂದಿಗೆ ಬೆಳೆ ನಾಶವಾಗಿ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರ ಸಾಲ ಮನ್ನಾ ಮಾಡಬೇಕೆಂದು ದಕ್ಷಿಣ ಕೊಡಗಿನ ಗಡಿ ಗ್ರಾಮವಾದ ತೆರಾಲುವಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುನಾಣಿ ಗ್ರಾಮ ಪಂಚಾಯತ್ ಸದಸ್ಯ ಬಿ.ಎಂ.ಗಿರೀಶ್ ಪೆಮ್ಮಯ್ಯ, ಕೇರಳದ ವಯನಾಡು ಜಿಲ್ಲೆಯ ಗಡಿಯಲ್ಲಿ, ಬೆಟ್ಟ ಗುಡ್ಡಗಳಿಂದ ಆವೃತ್ತವಾದ ಪ್ರದೇಶದಲ್ಲಿರುವ ತೆರಾಲು ಗ್ರಾಮದಲ್ಲಿ ಈ ಬಾರಿ 350 ಇಂಚಿಗೂ ಅಧಿಕ ಮಳೆಯಾಗಿ ಕೃಷಿ ಫಸಲು ಮತ್ತು ಕಾಫಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಹೆಚ್ಚುವರಿ ಅಕ್ಕಿ, ಸೀಮೆಎಣ್ಣೆಗೆ ಕುಡಿಯ ಜನಾಂಗ ಬೇಡಿಕೆ
ಮಡಿಕೇರಿ: ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟದ ತಪ್ಪಲಲ್ಲಿ ವಾಸಿಸುವ ಕುಡಿಯ ಜನಾಂಗದವರು ಕಳೆದ ಎರಡು ತಿಂಗಳಿಂದ ಕೂಲಿ ಕೆಲಸವಿಲ್ಲದೆ, ಪೌಷ್ಠಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಅತಿವೃಷ್ಟಿಯಿಂದ ಮುಂದಿನ ಎರಡು ತಿಂಗಳು ಕೂಲಿ ಕೆಲಸ ದೊರೆಯುವುದು ಕಷ್ಟವಾಗಿದೆ.
ಹೀಗಾಗಿ, ಸರಕಾರ ಕುಡಿಯ ಜನಾಂಗದ ಕುಟುಂಬಗಳಿಗೆ ಮಾಸಿಕ 25 ಕೆ.ಜಿ.ಅಕ್ಕಿ ಹಾಗೂ 5 ಲೀಟರ್ ಸೀಮೆ
ಎಣ್ಣೆಯನ್ನು ಒದಗಿಸಬೇಕು ಎಂದು ಬುಡಕಟ್ಟು ಕೃಷಿಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಕುಡಿಯರ ಎ.ಮುತ್ತಪ್ಪ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಕೊಡಗಿನ ಬೆಳೆಗಾರರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಹಕಾರ ಸಂಸ್ಥೆ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಎಲ್ಲ ವಿಧದ ಸಾಲಗಳನ್ನು ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
IRACON: ಸಂಧಿವಾತ ಸಮಸ್ಯೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ ಶರಣಪ್ರಕಾಶ್ ಪಾಟೀಲ್
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.