ಟಿಪ್ಪು ಜಯಂತಿ: ಕೊಡಗಿನ ಎಲ್ಲಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣು
Team Udayavani, Nov 6, 2017, 8:20 AM IST
ಮಡಿಕೇರಿ: ರಾಜ್ಯ ಸರಕಾರದ ವತಿಯಿಂದ ನ.10 ರಂದು ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವೆಂದೇ ಪರಿಗಣಿಸಲ್ಪಟ್ಟಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕೊಡಗು ಜಿಲ್ಲಾ ಪೊಲೀಸರು ಸಜ್ಜಾಗಿದ್ದಾರೆ.
ದಕ್ಷಿಣ ವಲಯದ ಐಜಿಪಿ ವಿಫುಲ್ ಕುಮಾರ್ ಅವರು ಮಡಿಕೇರಿಗೆ ಭೇಟಿ ನೀಡಿ ಎಸ್‌ಪಿ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದರು. ಟಿಪ್ಪು ಜಯಂತಿ ಆಚರಣೆ ಸಂದರ್ಭ ಅಶಾಂತಿ ಮೂಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ಸೇರಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಮತ್ತೂಂದೆಡೆ ಎಸ್‌ಪಿ ರಾಜೇಂದ್ರಪ್ರಸಾದ್ ಅವರು, ಕೇರಳದ ಕಣ್ಣೂರು, ವಯನಾಡ್, ಕಾಸರಗೋಡು ಹಾಗೂ ಹಾಸನ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತಹ 10 ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ನ.10ರಂದು ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಕಾರಣ ತೀವ್ರ ನಿಗಾ ವಹಿಸಿರುವ ಕೊಡಗು ಪೊಲೀಸರು ಚೆಕ್ ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.
ಹೇಳಿದ್ರೂ ಹೆಸರು ಹಾಕಿದ್ದಕ್ಕೆ ಸಚಿವ ಅನಂತ್ ಹೆಗಡೆ ಗರಂ
ಚನ್ನಗಿರಿ (ದಾವಣಗೆರೆ): “ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಹೇಳಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರದಲ್ಲಿ ನನ್ನ ಹೆಸರು ಹಾಕಿದ್ದಾರೆ. ನನ್ನ ಮಾತನ್ನು ಲೆಕ್ಕಿಸದೇ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿದ್ದಕ್ಕೆ ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಿ’ ಎಂದು ಕೇಂದ್ರ ಸರ್ಕಾರದ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವ ಅನಂತ್‌ಕುಮಾರ್ ಹೆಗಡೆ ಕಿಡಿ ಕಾರಿದ್ದಾರೆ.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲ್ಲ ಎಂದು ಮೊದಲೇ ಹೇಳಿದ್ದೇನೆ. ಆದರೂ, ಬೆಳಗಾವಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿದ್ದಾರೆ. ಮುಂದೇನಾಗುತ್ತೆ ಎಂಬುದನ್ನು ಕಾದು ನೋಡಲಿ’ ಎಂದು ಆಯೋಜಕರಿಗೆ ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.