ದಂಡಾಧಿಕಾರಿ ವಿರುದ್ಧ ಅಸಮಾಧಾನ ತಾ. ಪಂ.ಸಭೆಗೆೆ ಬಹಿಷ್ಕಾರ


Team Udayavani, Jun 13, 2019, 6:10 AM IST

dandadikari

ಗೋಣಿಕೊಪ್ಪಲು: ತಾಲ್ಲೂಕು ದಂಡಾಧಿಕಾರಿ ತಾ.ಪಂ. ಸಾಮಾನ್ಯ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಸಾಮಾನ್ಯ ಸಭೆಯನ್ನೇ ಬಹಿಷ್ಕರಿಸಿ ಸರ್ವ ಸದಸ್ಯರು ಹೊರನಡೆದ ಘಟನೆ ವಿರಾಜಪೇಟೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.

ತಹಶೀಲ್ದಾರ್‌ ಸಾಮನ್ಯ ಸಭೆಗಳಿಗೆ ನಿರಂತರ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳು ಕುಂಠಿತಗೊಳ್ಳುತ್ತಿದೆ. ಮಳೆಗಾಲದ ‌ ಕ್ರಮವಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಬೇಕಾಗಿತ್ತು. ಆದರೆ ಸಮಸ್ಯೆ ಬಗೆಹರಿಸಲು ಮುಖ್ಯವಾಗಿ ಬೇಕಾದ ತಹಶೀಲ್ದಾರ್‌ರವರ ಗೈರಿನಿಂದ ಸಭೆಯ ಪ್ರಾಮುಖ್ಯತೆ ಕಳೆದುಕೊಳ್ಳುತ್ತದೆ. ಹೀಗಾಗಿ ಸಾಮಾನ್ಯ ಸಭೆಗೆ ತಹಶೀಲ್ದಾರ್‌ ಹಾಜರಾಗಲೇ ಬೇಕು ಸದಸ್ಯರು ಎಂದು ಒತ್ತಾಯಿಸಿದರು. ಪೊನ್ನಂಪೇಟೆ ಸಾಮಾರ್ಥ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ಕಂದಾಯ ಇಲಾಖೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಬಹಳಷ್ಟು ಸದಸ್ಯರಿಗೆ ಪ್ರಶ್ನಿಸಬೇಕಾಗಿತ್ತು. ಅಲ್ಲದೆ ಕಳೆದ ಬಾರಿಯ ಅತೀವೃಷ್ಟಿಯಿಂದ ಉಂಟಾದ ಮಳೆಹಾನಿ ಪರಿಹಾರ, ಪಡಿತರ ಚೀಟಿ ವಿತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿತು. ಆದರೆ ಸಮಸ್ಯೆ ಬಗೆಹರಿಸಲು ತಾಲೂಕು ದಂಡಾಧಿಕಾರಿಗಳೇ ಗೈರಾಗಿರುವುದರಿಂದ ಅಸಮಾಧಾನ ಗೊಂಡ ತಾ.ಪಂ. ಸದಸ್ಯರು ಸಭೆಯನ್ನು ಮುಂದೂಡುವಂತೆ ಅಧ್ಯಕ್ಷರಲ್ಲಿ ಮನವಿ ಸಲ್ಲಿಸಿದರು. ತಕ್ಷಣವೇ ಇದಕ್ಕೆ ಸ್ಪಂದಿಸಿದ ಅಧ್ಯ ಕ್ಷರು ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ತಹಶೀಲ್ದಾರ್‌ರವರಿಗೆ ಸಭೆಗೆ ಹಾಜರಾಗವಂತೆ ತಿಳಿಸಲು ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಘಟನೆಯಿಂದ ಮತ್ತಷ್ಟು ಅಸಮಾಧಾನಗೊಂಡ ಸದಸ್ಯರು ಸಭೆಯನ್ನು ಮುಂದೂಡು ವಂತೆ ಒತ್ತಾಯಿಸಿದರು. ಕಾರ್ಯನಿರ್ವಹಣಾಧಿಕಾರಿ ಜಯಣ್ಣನವರು ಜಿಲ್ಲಾ ಉಪವಿಭಾಗಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು. ಆದರೂ ತಹಶೀಲ್ದಾರ್‌ ಸಭೆ ಹಾಜರಾಗˆˆದ ಕಾರಣ ಸಭೆಯನ್ನು ಸರ್ವ ಸದಸ್ಯರು ಬಹಿಷ್ಕರಿಸಿದರು.

ಸದಸ್ಯರಾದ ಕುಟ್ಟಂಡ ಅಜಿತ್‌ ಕರುಂಬಯ್ಯ, ಮಾಲೇಟ್ಟಿರ ಪ್ರಶಾಂತ್‌, ಪಲ್ವಿನ್‌ ಪೂಣಚ್ಚ ಸೇರಿದಂತೆ ಹಲವು ಸದಸ್ಯರಉ ತಹಶೀಲ್ದಾರ್‌ರವರವಿರುದ್ದ ಅಸಮಾದಾನ ವ್ಯಕ್ತಪಡಿಸಿದರು. ಸಭೆ ಪ್ರಾರಂಭದ ಮೊದಲು ಎರಡನೇ ಸಲ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಹಾಗೂ ಅವರ ಸರ್ಕಾರಕ್ಕೆ ಅಭಿನಂದಿಸಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.