“ಅಪೌಷ್ಟಿಕತೆ ನಿವಾರಿಸಲು ಸ್ಥಳೀಯ ಆಹಾರ ಬಳಸಿ’
ರಾಷ್ಟ್ರೀಯ ಆರೋಗ್ಯ ಅಭಿಯಾನ
Team Udayavani, Sep 21, 2019, 5:45 AM IST
ಮಡಿಕೇರಿ: ಸ್ಥಳೀಯವಾಗಿ ಸಿಗುವಂತಹ ಉತ್ತಮ ಪೌಷ್ಟಿಕ ಆಹಾರ ಬಳಸುವುದರಿಂದ ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಲೋಕೇಶ್ ಅವರು ಮಾತನಾಡಿ ತಾಯಂದಿರ ಮತ್ತು ಮಕ್ಕಳ ಉತ್ತಮ ಆರೋಗ್ಯದಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.
ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ್ ಅವರು ಮಾತನಾಡಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ತಾಯಂದಿರು ಮತ್ತು ಮಕ್ಕಳಿಗಾಗಿ ಸಮತೋಲಿತ ಪೋಷಕಾಂಶ ನೀಡುವ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆಯು ಕಾರ್ಯೋನ್ಮುಖವಾಗಿದ್ದು, ಅದಕ್ಕಾಗಿ ವಿಶೇಷ ಘಟಕವನ್ನು ಸ್ಥಾಪಿಸಲಾಗಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.ಮಕ್ಕಳ ವಿಭಾಗದ ಮುಖ್ಯಸ್ಥಡಾ.ಪುರುಷೋತ್ತಮ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಮೇರಿ ನಾಣಯ್ಯ, ವೈದ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಕ್ಕಳ ವಿಭಾಗದ ಡಾ.ವೀರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಡಾ.ಅಚ್ಚುತಾ ಸ್ವಾಗತಿಸಿದರು.
ಉತ್ತಮ ಆಹಾರ ಅವಶ್ಯ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ಶಾಸ್ತ್ರದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್ ಅವರು ಮಾತನಾಡಿ ಉತ್ತಮ ಆರೋಗ್ಯ ಹೊಂದಲು ಉತ್ತಮ ಆಹಾರ ಅವಶ್ಯವಾಗಿದೆ. ಹಿಂದಿನ ಕಾಲದಲ್ಲಿ ಜನರು ಉತ್ತಮ ಆರೋಗ್ಯ ಹೊಂದಿರುತ್ತಿದ್ದರು. ಇದಕ್ಕೆ ಮುಖ್ಯ ಕಾರಣ ರಾಸಾಯನಿಕ ಇಲ್ಲದ ಆಹಾರ ಪದಾರ್ಥಗಳನ್ನು ಯಥೇತ್ಛವಾಗಿ ಬಳಸುತ್ತಿದ್ದರು. ಆದರೆ ಇಂದಿನ ಕಾಲ ಘಟ್ಟದಲ್ಲಿ ರಾಸಾಯನಿಕ ಆಹಾರ ಪದಾರ್ಥಗಳ ಬಳಕೆಯಿಂದ ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಆದ್ದರಿಂದ ಆಹಾರ ಬಗ್ಗೆ ಗಮನಹರಿಸುವುದು ಅಗತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.