ನಿರಂತರ ಮಳೆಯಿಂದ ರಸ್ತೆಗಳಿಗೆ ಹಾನಿ: ವಿರಾಜಪೇಟೆ- ಮಾಕುಟ್ಟ ಸಂಚಾರ ಸ್ಥಗಿತ
Team Udayavani, Aug 5, 2019, 12:20 PM IST
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಭಾಗ ಕುಸಿದಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಥಳ ಪರಿಶೀಲನೆ ನಡೆಸಿದರು. ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಹಾಗೂ ಸ್ಥಳೀಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.
ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಸಹಕರಿಸುವಂತೆ ಮನ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.