ಉತ್ತರಾ ಖಂಡಕ್ಕೆ ಜಿ.ಪಂ.ತಂಡ ಭೇಟಿ: ಆಡಳಿತ ವ್ಯವಸ್ಥೆ ಮಾಹಿತಿ ವಿನಿಮಯ
Team Udayavani, Jun 8, 2018, 6:50 AM IST
ಮಡಿಕೇರಿ: ಉತ್ತರಾಖಂಡ ರಾಜ್ಯದ ಟೆಚ್ರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ತಂಡದ ನಿಯೋಗವು ಬುಧವಾರ ಕೊಡಗು ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರನ್ನು ಭೇಟಿ ಮಾಡಿ ಇಲ್ಲಿನ ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಿಯೋಗಕ್ಕೆ ಮಾಹಿತಿ ನೀಡಿದ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆಯನ್ನು ಅಳವಡಿಸಿಕೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 1988 ರಲ್ಲಿ ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆ ಆರಂಭವಾಗಿದ್ದು, 1993ರಲ್ಲಿ ತಿದ್ದುಪಡಿಯಾಗಿದ್ದು, ಪ್ರಸ್ತುತ ಜಿ.ಪಂ., ತಾ.ಪಂ. ಮತ್ತು ಗ್ರಾ.ಪಂ.ಗಳು ಹೀಗೆ ಮೂರು ಹಂತದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಆಡಳಿತ ವಿಕೇಂದ್ರೀಕರಣ ದಿಂದ ಗ್ರಾ.ಪಂ.ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಜಿ.ಪಂ. ಸಿಇಒ ಮಾಹಿತಿ ನೀಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಪ್ರಮುಖವಾಗಿ ಗ್ರಾಮೀಣ ಕುಡಿಯುವ ನೀರು ಪೂರೈಕೆ, ಗ್ರಾಮೀಣ ರಸ್ತೆ ಅಭಿವೃದ್ಧಿ, ವಿದ್ಯುತ್ ಬೀದಿ ದೀಪ ಅಳವಡಿಸುವುದು, ವಸತಿ, ಶೌಚಾಲಯ ನಿರ್ಮಾಣ, ಸ್ವತ್ಛ ಭಾರತ್ ಅಭಿಯಾನ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿಸುವುದು, ಘನ ತ್ಯಾಜ್ಯ ಸಮರ್ಪಕ ವಿಲೇವಾರಿ, ಗ್ರಾಮಸಭೆ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಸತಿ ಸೇರಿದಂತೆ ನಾನಾ ಇಲಾಖೆಗಳ ಸೌಲಭ್ಯಗಳನ್ನು ಒದಗಿಸುವುದು ಹೀಗೆ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿ.ಪಂ. ಸಿಇಒ ಅವರು ಹೇಳಿದರು.
ಜಿ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪಶುಪಾಲನೆ ಹೀಗೆ 35 ಕ್ಕೂ ಹೆಚ್ಚು ಇಲಾಖೆ ಬರಲಿವೆ. ಇವುಗಳ ಪ್ರಗತಿ ಪರಿಶೀಲನೆಯು ಜಿ.ಪಂ.ಅಧ್ಯಕ್ಷರ ಅಧ್ಯಕ್ಷತೆಯಲ್ಲಿ, ಉಪಾಧ್ಯಕ್ಷರು, ಸ್ಥಾಯೀ ಸಮಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ನಡೆಯಲಿದೆ. ಮೂರು ತಿಂಗಳಿಗೊಮ್ಮೆ ತ್ತೈಮಾಸಿಕ ಸಭೆಯು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಸದರ ಅಧ್ಯಕ್ಷತೆಯಲ್ಲಿ ಸಭೆ ನಡೆಯ ಲಿದೆ ಎಂದು ಪ್ರಶಾಂತ್ ಕುಮಾರ್ ಮಿಶ್ರ ಅವರು ವಿವರಿಸಿದರು.
ಗ್ರಾ.ಪಂ. ಹಂತದಲ್ಲಿ ಆಸ್ತಿ ತೆರಿಗೆ, ವ್ಯಾಪಾರ ಪರವಾನಗಿ ಮತ್ತಿತರ ಪರವಾನಗಿ ನೀಡುವುದು ಹಾಗೂ ತೆರಿಗೆಯನ್ನು ಸಂಗ್ರಹಿಸುವ ಕಾರ್ಯ ನಡೆಯಲಿದೆ ಎಂದು ಜಿ.ಪಂ.ಸಿಇಒ ಅವರು ತಿಳಿಸಿದರು.
ಜಿಲ್ಲೆಯು ಭೂ ವಿಸ್ತೀರ್ಣದಲ್ಲಿ ದೊಡ್ಡದಿದ್ದು, ಜನಸಂಖ್ಯೆಯಲ್ಲಿ ಕಡಿಮೆ ಹೊಂದಿದೆ. ಜಿಲ್ಲೆಯಲ್ಲಿ ಕೃಷಿಯನ್ನು ಅಲವಂಬಿಸಿದ್ದು, ಕಾಫಿ, ಏಲಕ್ಕಿ, ಕರಿಮೆಣಸು, ಕಿತ್ತಳೆ, ಜತೆಗೆ ಭತ್ತ ಪ್ರಮುಖ ಬೆಳೆಯಾಗಿದೆ ಎಂದು ಅವರು ಹೇಳಿದರು.
ಕೊಡಗು ಸೇನಾ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಪವಿತ್ರ ಜೀವನದಿ ಕಾವೇರಿಯು ತಲಕಾವೇರಿಯಲ್ಲಿ ಹುಟ್ಟುತ್ತದೆ. ಜಿಲ್ಲೆಯು ಪ್ರವಾಸೋದ್ಯಮಕ್ಕೆ ತನ್ನದೇ ಆದ ಸ್ಥಾನ ನೀಡಿದೆ ಎಂದು ಜಿ.ಪಂ.ಸಿಇಒ ಅವರು ಮಾಹಿತಿ ನೀಡಿದರು.
ಉತ್ತರಾಖಂಡ ರಾಜ್ಯದ ಟೆಚ್ರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸೋನ ಸಜ್ವಾನ್ ಮತ್ತು ಉಪಾಧ್ಯಕ್ಷರಾದ ಶ್ಯಾಂ ಸಿಂಗ್ ಮತ್ತು ಸದಸ್ಯರು ಜಿ.ಪಂ.ಗೆ ಅನುದಾನ ಬಿಡುಗಡೆ, ಕ್ರಿಯಾಯೋಜನೆ ತಯಾರಿಕೆ, ಆಡಳಿತ ವ್ಯವಸ್ಥೆ ಮತ್ತಿತರ ಬಗ್ಗೆ ಹಲವು ಮಾಹಿತಿ ಪಡೆದರು.ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಉಪ ಕಾರ್ಯದರ್ಶಿ ಬಾಬು, ತಾ.ಪಂ. ಸಹಾಯಕ ನಿರ್ದೇಶಕರಾದ ಜೀವನ್ ಕುಮಾರ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.