ಮತದಾರರ ಪಟ್ಟಿ ; ಯುವ ಮತದಾರರ ಹೆಸರು ಸೇರ್ಪಡೆಗೆ ಸಹಕರಿಸಿ : ಎಡಿಸಿ
Team Udayavani, Feb 16, 2019, 12:50 AM IST
ಮಡಿಕೇರಿ: ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ “ಕ್ಯಾಂಪಸ್ ರಾಯಭಾರಿ’ಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಅವರು ಸಲಹೆ ನೀಡಿದ್ದಾರೆ.
ನಗರದ ಕೋಟೆ ಹಳೆ ಧಾನ ಸಭಾಂಗಣದಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸುತಿ(ಸ್ವೀಪ್) ವತಿಯಿಂದ ಗುರುವಾರ ಕ್ಯಾಂಪಸ್ ರಾಯಭಾರಿಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1-1-2019 ಕ್ಕೆ 18 ವರ್ಷ ಪೂರ್ಣಗೊಂಡವರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಪ್ರತಿ ಕಾಲೇಜಿನಿಂದ ಕ್ಯಾಂಪಸ್ ರಾಯಭಾರಿಗಳನ್ನು ನಿಯೋಜಿಸಿ, 18 ವರ್ಷ ಪೂರ್ಣಗೊಂಡ ಯುವಜನರು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂಬ ಉದ್ದೇಶದಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊ ಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ ತಮ್ಮ ತಮ್ಮ ಕಾಲೇಜು ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನ ಮಾಡಿದರು.
ಆನ್‌ಲೈನ್ ಮೂಲಕವೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು. ವಿಕಲಚೇತನ ಮತದಾರರನ್ನು ಮತ ಗಟ್ಟೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡುವುದು, ಮತಗಟ್ಟೆ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯ ನಿರ್ವಸುವಂತೆ ಅವರು ತಿಳಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಅವರು ಮಾತ ನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಕ್ಯಾಂಪಸ್ ರಾಯಭಾರಿಗಳು ಯುವ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಅವರು ತಿಳಿಸಿದರು.
ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ತರಬೇತಿದಾರರಾದ ಕೆ.ಜೆ.ದಿವಾಕರ ಅವರು ಮಾತಿ ನೀಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಂತಾಗಲು ನಮೂನೆ 6ನ್ನು ಭರ್ತಿ ಮಾಡಿ ನೀಡಬೇಕು. ನಮೂನೆ 7 ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದು, ನಮೂನೆ 8ರಲ್ಲಿ ಸರಿಪಡಿಸುವ ಕಾರ್ಯ ಮಾಡಬೇಕು. ಈ ಬಗ್ಗೆ ತಮ್ಮ ಕಾಲೇಜುಗಳಲ್ಲಿ ಮಾತಿ ನೀಡುವಂತೆ ಅವರು ತಿಳಿಸಿದರು.
ಪದ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಪೌರಾಯುಕ್ತರಾದ ಎಂ.ಎಲ್. ರಮೇಶ್, ಪ.ಪಂ.ಮುಖ್ಯಾಧಿ ಕಾರಿಗಳಾದ ಶ್ರೀಧರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.