ಕೋವಿಡ್ 19 ವೈರಸ್‌ ಶಂಕಿತರ ಮೇಲೆ ನಿಗಾ

ಪ್ರತ್ಯೇಕ ಕೊಠಡಿಯಲ್ಲಿರುವವರಿಗೆ ಸೌಲಭ್ಯ ಕಲ್ಪಿಸಲು ಸಲಹೆ

Team Udayavani, Mar 20, 2020, 6:09 AM IST

ಕೋವಿಡ್ 19 ವೈರಸ್‌ ಶಂಕಿತರ ಮೇಲೆ ನಿಗಾ

ಮಡಿಕೇರಿ: ಕೋವಿಡ್ 19 ವೈರಸ್‌ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನುºಕುಮಾರ್‌ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್‌ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ (ಐಸೋಲೇಷನ್‌) ಇರಿಸಿರುವ ಶಂಕಿತರಿಗೆ ದಿನಪತ್ರಿಕೆ, ಟಿವಿ, ವೈಫೈ ಸೇವೆ ಕಲ್ಪಿಸುವುದು ಹಾಗೂ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.

ಕೊರೊನಾ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ವೈರಸ್‌ ಆಗಿರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಲ್ಲಿ, ಇದನ್ನು ನಿಯಂತ್ರಣ ಮಾಡಬಹುದಾಗಿದೆ. ಸರ್ಕಾರ ಹೊರಡಿಸುವ ಸಲಹೆ, ಸೂಚನೆಗಳನ್ನು ಪಾಲಿಸಬೇಕಿದ್ದು, ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ವಿದೇಶದಿಂದ ಬರುವವರು, ಸೇರಿದಂತೆ ಶಂಕಿತರನ್ನು ಐಸೋಲೇಷನ್‌ ವಾರ್ಡ್‌ಗೆ ಸೇರಿಸಲಾಗುತ್ತದೆ. ಆ ಸಂದರ್ಭದಲ್ಲಿ ಶಂಕಿತರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು, ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು. ಬಸ್‌ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಬ್ಲೀಚಿಂಗ್‌ ಪೌಡರ್‌ ಸಿಂಪಡಿಸಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಜಿಲ್ಲೆಯ ಕರಿಕೆ, ಕುಟ್ಟ, ಮಾಕುಟ್ಟಗಳಲ್ಲಿ ಪೊಲೀಸ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಪಶುಪಾಲನಾ ಇಲಾಖೆ ವತಿಯಿಂದ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದರು.

ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು, ಶಂಕಿತರು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ. ಮೋಹನ್‌ ಅವರು ಮಾಹಿತಿ ನೀಡಿ ಕೊರೊನಾ ವೈರಸ್‌ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ 22 ಹಾಸಿಗೆಯ ಪ್ರತ್ಯೇಕ ವಾರ್ಡ್‌ ತೆರೆಯಲಾಗಿದೆ.

ತಾಲ್ಲೂಕು ಆಸ್ಪತ್ರೆಯಲ್ಲಿ 2 ಹಾಸಿಗೆಯ ಪ್ರತ್ಯೇಕ ವಾರ್ಡ್‌ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ‌ ಕಾರ್ಯಪ್ಪ ಅವರು ಕೋವಿಡ್‌ ಶಂಕಿತರಿಗೆ ಎಲ್ಲÉ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ ಅವರು ರಾಜ್ಯದಲ್ಲಿ ಹಕ್ಕಿಜ್ವರ ಕಂಡು ಬಂದಿರುವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು. ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕ ಲೋಕೇಶ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್‌, ಪೌರಾಯುಕ್ತ‌ ರಮೇಶ್‌, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.