ಭರ್ಜರಿ ಜಯ : ಜಿಲ್ಲಾ ಬಿಜೆಪಿ ವಿಜಯೋತ್ಸವ
Team Udayavani, Mar 13, 2017, 4:30 PM IST
ಮಡಿಕೇರಿ : ಉತ್ತರ ಪ್ರದೇಶ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಪ್ರಧಾನಿ ನರೇಂದ್ರಮೋದಿ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ದೇಶ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ದೇಶದ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಸದ್ಯದಲ್ಲಿಯೆ ರಾಷ್ಟ್ರ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಪ್ರಕಟಗೊಂಡ ವಿಧಾನ ಸಭಾ ಚುನಾವಣೆಯ ಫಲಿತಾಂಶ ದಲ್ಲಿ ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದೇ ಪ್ರಕಾರ ಮುಂಬರಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲು ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚಲಿದ್ದು, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾಂತಿ ಸತೀಶ್, ನಗರಾಧ್ಯಕ್ಷ ಮಹೇಶ್‌ಜೈನಿ, ಪ್ರಮುಖರಾದ ಅರುಣ್ ಕುಮಾರ್, ಜಗದೀಶ್, ಉಮೇಶ್ ಸುಬ್ರಮಣಿ, ರಾಜೇಶ್, ಸತೀಶ್, ಮನು ಮಂಜುನಾಥ್, ಪೊನ್ನಪ್ಪ, ಮಹಿಳಾ ಘಟಕದ ಪ್ರಮುಖರು, ನಗರಸಭೆೆಯ ಬಿಜೆಪಿ ಸದಸ್ಯರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.