ಯಡೂರು: ಸರಕಾರಿ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಸಪ್ತಾಹ ಆಚರಣೆ
Team Udayavani, Feb 26, 2019, 1:00 AM IST
ಸೋಮವಾರಪೇಟೆ: ಇಲ್ಲಿಗೆ ಸಮೀಪದ ಯಡೂರಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಹಾಗು ಲಯನ್ಸ್ ಸಂಸ್ಥೆಯ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ನಡೆಯಿತು.
ಕಾರ್ಯಕ್ರಮಕ್ಕೆ ಡಿವೈಎಸ್‌ಪಿ ಮುರಳೀಧರ್ ಚಾಲನೆ ನೀಡಿದರು. ನಂತರ ಮಾತನಾಡಿ, ಶಾಲಾ, ಕಾಲೇಜು ವಾಹನಗಳ ಚಾಲಕರಿಗೆ ಸರ್ವೋತ್ಛ ನ್ಯಾಯಾಲಯ ಕೆಲವು ಕಟ್ಟು ಪಾಡುಗಳನ್ನು ಮಾಡಿದೆ. ಚಾಲಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭಾರಿ ವಾಹನ ಚಾಲನೆ ಮಾಡುವವರು ಕನಿಷ್ಟ 5 ವರ್ಷಗಳ ಚಾಲನಾ ಅನುಭವ ಹೊಂದಿರಬೇಕು. ಸಮವಸ್ತ್ರ ಧರಿಸಿ ವಾಹನ ಚಾಲನೆ ಮಾಡಬೇಕು. ನಿಗಧಿತ ಸಂಖ್ಯೆ ವಿದ್ಯಾರ್ಥಿಗಳನ್ನು ಮಾತ್ರ ವಾಹನದಲ್ಲಿರಬೇಕು. ವೇಗದ ಚಾಲನೆ ಮಾಡಬಾರದು, ವಾಹನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗು ಪೋಷಕರ ಮಾಹಿತಿಯನ್ನು ವಾಹನದಲ್ಲಿ ಅಳವಡಿಸಿರಬೇಕೆಂದರು.
ಲಯನ್ಸ್ ಸಂಸ್ಥೆ ಅಧ್ಯಕ್ಷ ಯೋಗೇಶ್, ಕಾಲೇಜಿನ ಪ್ರಾಂಶುಪಾಲ ಪೊ›| ಶ್ರೀಧರ್, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ಕುಶಾಲನಗರದ ಟ್ರಾಫಿಕ್ ಇನ್ಸೆಪೆಕ್ಟರ್ ಸೋಮೇಗೌಡ ಲಯನ್ಸ್ ಪದಾಧಿಕಾರಿಗಳಾದ ಎ.ಆರ್. ಮುತ್ತಣ್ಣ, ಮಂಜುನಾಥ್ ಚೌಟ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.