![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Mar 31, 2024, 11:10 PM IST
ಮಡಿಕೇರಿ: 2010ರಲ್ಲಿ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್ ಕೋರ್ಟ್‌ಗೆ ಸಿಬಿಐ ಕೊಟ್ಟ ಹೇಳಿಕೆ ಯನ್ನು ಆಧರಿಸಿ ಅಮಿತ್ ಶಾ ಅವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ಹೇಳಿದ್ದೇನೆಯೇ ಹೊರತು ಅದು ನನ್ನ ಸ್ವಂತ ಸೃಷ್ಟಿಯಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ವಿರಾಜಪೇಟೆಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿಬಿಐ ಕೊಟ್ಟ ಹೇಳಿಕೆಯನ್ನು ನಾನು ಪುನರುಚ್ಚರಿಸಿದ್ದೇನೆ. ಹಾಗಾಗಿ ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೆ ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣ ಆಯೋಗ ನೋಟಿಸ್ ನೀಡಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದರು.
ಪ್ರಧಾನಿ ಮೋದಿ ಆಡಳಿತದಿಂದ ದೇಶ 25 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಕೊಟ್ಟ ಯಾವುದೇ ಭರವಸೆಗಳನ್ನು ಅವರು ಈಡೇರಿಸಿಲ್ಲ. ಕಪ್ಪು ಹಣದ ವಿಚಾರದಲ್ಲೂ ಮೋದಿ ಎಡವಿದ್ದಾರೆ ಎಂದು ಟೀಕಿಸಿದರು.
You seem to have an Ad Blocker on.
To continue reading, please turn it off or whitelist Udayavani.