ಶಿಥಿಲ ಟ್ಯಾಂಕ್‌ ತೆರವಿಗಿಲ್ಲ ಕ್ರಮ

ಕೋನಸಾಗರ ಗ್ರಾಮದ ಓವರ್‌ಹೆಡ್‌ ಟ್ಯಾಂಕ್‌ನಿಂದ ಅಪಾಯ ಭೀತಿ

Team Udayavani, May 19, 2019, 12:14 PM IST

19-May-14

ಕೊಂಡ್ಲಹಳ್ಳಿ: ಸಂಪೂರ್ಣ ಶಿಥಿಲಗೊಂಡಿರುವ ಕೋನಸಾಗರ ಗ್ರಾಮದ ನೀರಿನ ಟ್ಯಾಂಕ್‌.

ಕೊಂಡ್ಲಹಳ್ಳಿ: ಸಮೀಪದ ಕೋನಸಾಗರ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಗೊಂಡಿದ್ದು, ಅಪಾಯದ ಭೀತಿ ಸೃಷ್ಟಿಸಿದೆ.

ಸುಮಾರು 15 ವರ್ಷಗಳ ಹಿಂದೆ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರು ಪೂರೈಕೆ ಸಲುವಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿದೆ. ಟ್ಯಾಂಕ್‌ನ ಕಂಬಗಳು ಹಾಗೂ ಸಿಮೆಂಟ್ ಕಳಚಿ ಬೀಳುತ್ತಿದ್ದು, ಕಬ್ಬಿಣದ ಸರಳುಗಳು ಹೊರ ಚಾಚಿವೆ.

ನೀರು ಸಂಗ್ರಹದ ತಳಪಾಯ ಸೇರಿ ಎಲ್ಲವೂ ಹಾಳಾಗಿವೆ. ಟ್ಯಾಂಕ್‌ನ ಮೇಲ್ಪದರ ಕಳಚಿ ಹೋಗಿ ಕಬ್ಬಿಣ, ಇಟ್ಟಿಗೆಗಳು ಹೊರಗೆ ಬಂದಿವೆ. ಇದರಿಂದಾಗಿ ನೀರು ಸೋರಿ ಹೋಗಿ ಪೋಲಾಗುತ್ತಿದೆ. ಜೋರಾಗಿ ಗಾಳಿ ಬೀಸಿದರೆ ಸಿಮೆಂಟ್ ಪದರಗಳು ಅಕ್ಕಪಕ್ಕದ ಮನೆಯಂಗಳಕ್ಕೆ ಬೀಳುತ್ತಿರುತ್ತವೆ.

ಈ ಟ್ಯಾಂಕ್‌ನಿಂದ ಅಪಾಯ ಗ್ಯಾರಂಟಿ. ನಾವು ಮತ್ತು ನಮ್ಮ ಮಕ್ಕಳು ಇಲ್ಲಿ ಓಡಾಡುವುದಕ್ಕೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಟ್ಯಾಂಕ್‌ ದುಸ್ಥಿತಿ ಬಗ್ಗೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಗಮನ ನೀಡುತ್ತಿಲ್ಲ. ಏನಾದರೂ ಅಪಾಯವಾದ ಮೇಲೆಯೇ ಅವರ ಗಮನಕ್ಕೆ ಬರಬೇಕೇನೋ ಎಂಬುದು ಗ್ರಾಮಸ್ಥರಾದ ಪಾಲಣ್ಣ, ಕರಿಮಾರಣ್ಣ, ಕುಮಾರ್‌ ಆರೋಪ.

ಕುಡಿಯುವ ನೀರಿನ ಟ್ಯಾಂಕ್‌ ಸ್ವಚ್ಛಗೊಳಿಸದೆ ವರ್ಷಗಳೇ ಕಳೆದಿವೆ. ಈ ಟ್ಯಾಂಕ್‌ನಿಂದ ಪೂರೈಕೆಯಾಗುವ ನೀರು ಅಶುದ್ಧವಾಗಿರುತ್ತದೆ. ಗ್ರಾಮ ಪಂಚಾಯತ್‌ದವರು ಈ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ. ಇನ್ನಾದರೂ ಶಿಥಿಲಗೊಂಡಿರುವ ಟ್ಯಾಂಕ್‌ ತೆರವುಗೊಳಿಸಲು ಸಂಬಂಧಿಸಿದವರು ಕೂಡಲೇ ಕಾರ್ಯಪ್ರವೃತ್ತರಾಗಬೇಕಿದೆ.

ಈ ನೀರಿನ ಟ್ಯಾಂಕ್‌ ಅನ್ನು ಗ್ರಾಮ ಪಂಚಾಯತ್‌ನವರು ನೆಲಸಮ ಮಾಡಬೇಕು. ಅದು ನಮ್ಮ ಜವಾಬ್ದಾರಿಯಲ್ಲ. ಗ್ರಾಮದಲ್ಲಿ ಹೊಸದಾಗಿ ಒಂದು ಲಕ್ಷ ಲೀಟರ್‌ ಸಾಮರ್ಥ್ಯದ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರಸ್ತಾವನೆ ಮಾಡಲಾಗುವುದು.
ಸುಕುಮಾರ್‌,
ಕ‌ುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ದೇಶಕ.

ನಾನು ಹೊಸದಾಗಿ ಇಲ್ಲಿಗೆ ಬಂದಿದ್ದೇನೆ. ನೀರಿನ ಟ್ಯಾಂಕ್‌ ಇರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಟ್ಯಾಂಕ್‌ ಸ್ವಚ್ಛಗೊಳಿಸುವಂತೆ ಗ್ರಾಪಂ ಸಿಬ್ಬಂದಿಗಳಿಗೆ ಸೂಚಿಸುತ್ತೇನೆ.
•ಸರ್ವೇಶ್‌,
ಕೋನಸಾಗರ ಗ್ರಾಪಂ ಗ್ರೇಡ್‌-1 ಕಾರ್ಯದರ್ಶಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.