ಗಿಡ-ಮರ ಪೋಷಣೆ ಪ್ರತಿಯೊಬ್ಬರ ನಿತ್ಯ ಕಾಯಕವಾಗಲಿ
ಮಾನವ ಜಾಗೃತನಾಗಿ ಹಸಿರು ಕ್ರಾಂತಿಗೆ ಮುಂದಾಗಲಿ
Team Udayavani, Jun 10, 2019, 5:18 PM IST
ಕೂಡ್ಲಿಗಿ: ಚಿಕ್ಕಜೋಗಿಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ನಿವೃತ್ತ ಮುಖ್ಯಗುರು ಸಿ.ಬಿ.ತಿಪ್ಪೆಸ್ವಾಮಿ ಚಾಲನೆ ನೀಡಿದರು.
ಕೂಡ್ಲಿಗಿ: ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ಮರ, ಗಿಡಗಳಿಗೆ ನೀರು ಹಾಕಿ ಪೋಷಿಸುವ ಕಾರ್ಯ ನಿತ್ಯ ನಿರಂತರವಾಗಿರಬೇಕು ಎಂದು ನಿವೃತ್ತ ಮುಖ್ಯಗುರು ಸಿ.ಬಿ.ತಿಪ್ಪೆಸ್ವಾಮಿ ಹೇಳಿದರು.
ಚಿಕ್ಕಜೋಗಿಹಳ್ಳಿಯ ಸರಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಟ್ಟು ಅವರು ಮಾತನಾಡಿದರು. ಪರಿಸರ ಸಮತೋಲನ ಕಾಪಾಡಲು ಹೆಚ್ಚು ಸಸಿಗಳನ್ನು ನೆಡಬೇಕು. ಅವುಗಳನ್ನು ಪಾಲನೆ, ಪೋಷಣೆ ಮಾಡಿ ಗಿಡಗಳಾದ ಮೇಲೆ ಸಂರಕ್ಷಣೆ ಮಾಡಬೇಕು. ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆ ಆಗುತ್ತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಇಂಥ ಕಾರ್ಯಕ್ರಮಗಳು ಶಾಲೆಯಲ್ಲಿ ನಡೆಯುವುದರಿಂದ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ಪರಿಸರ ವಿಷಯ ಕುರಿತು ಶಾಲೆ ಮುಖ್ಯಗುರು ಪಿ.ಶೆಖರಪ್ಪ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಪರಿಸರದ ಅಗತ್ಯತೆ, ಕಾಳಜಿ, ಅರಿವನ್ನು ಹೊಂದಿರುವುದರ ಜೊತೆಗೆ ಪರಿಸರಕ್ಕೆ ತಾನು ನೀಡುತ್ತಿರುವ ಕೊಡುಗೆಯಾದರೂ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತರಾಗಬೇಕು. ನಮಗಿರುವ ಒಂದೇ ಒಂದು ಭೂಮಿ ಉಳಿಸಿಕೊಳ್ಳಲು ಹಿಂದೆಂದೂ ಇಲ್ಲದ ಕಾಳಜಿ ಈಗ ಬಾಯಲ್ಲಿ ಮಾತ್ರ ಪಠಣ ಮಾಡಿದರೆ ಸಾಲದು. ಇನ್ನಾದರೂ ಮನುಷ್ಯ ಜಾಗೃತನಾಗಿ ಪರಿಸರ ಸಂರಕ್ಷಣೆಗಾಗಿ ಕ್ರಮಗಳನ್ನು ಕೈಗೊಂಡು ಹಸಿರು ಕ್ರಾಂತಿ ಮಾಡಬೇಕಿದೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಭರತೇಶಕುಮಾರ, ಮುತ್ತುರಾಜ್, ವಿಶ್ವನಾಥ, ಗೋಪಲಾನಾಯ್ಕ, ಅಂಬಿಕ, ಬಸವರಾಜ್,ಬಿರಯ್ಯ, ಹನುಮೇಶ, ಜಗನ್ನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.