ಬೋರ್‌ವೆಲ್‌ ತಡೆಗೋಡೆ ಪರಿಶೀಲನೆ

ಮಡೇರಹಳ್ಳಿ ಕೆರೆಗೆ ಕೆ.ಸಿ.ವ್ಯಾಲಿ ನೀರು; ಎಂಟು ಕೊಳವೆ ಬಾವಿಗಳಿಗೆ ತಡೆಗೋಡೆ: ಜಿಲ್ಲಾಧಿಕಾರಿ

Team Udayavani, Nov 14, 2019, 5:50 PM IST

14-November-26

ಕೋಲಾರ: ಕೆ.ಸಿ. ವ್ಯಾಲಿ ಯೋಜನೆಯ ನೀರು ನಗರ ಹೊರವಲಯದ ಮಡೇರಹಳ್ಳಿ ಕೆರೆಗೆ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನಗರಸಭೆಗೆ ಸೇರಿದ ಅಲ್ಲಿನ ಕೊಳವೆ ಬಾವಿಗಳಿಗೆ ನೇರವಾಗಿ ಕೆಸಿವ್ಯಾಲಿ ನೀರು ಸೇರದಂತೆ ನಗರಸಭೆಯಿಂದ ತಡೆಗೋಡೆ ನಿರ್ಮಿಸಲಾಗುತ್ತಿದ್ದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಭೇಟಿ ನೀಡಿ ಪರಿಶೀಲಿಸಿದರು.

ಕೋಲಾರ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮಡೇರಹಳ್ಳಿ, ಅಮ್ಮೇ ರಹಳ್ಳಿ ಹಾಗೂ ಕೋಲಾರಮ್ಮ ಕೆರೆಗೆ ಭೇಟಿ ನೀಡಿದ್ದರು. ಈ ಕೆರೆಗಳಿಂದಲೇ ನಗರಕ್ಕೆ ನೀರು ಸರಬರಾಜಾಗುತ್ತಿರುವುದರಿಂದ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಬೋರ್‌ವೆಲ್‌ಗ‌ಳ ಸುತ್ತಲೂ ತಡೆ ಗೋಡೆ ನಿರ್ಮಿಸ ಲಾಗುತ್ತಿದ್ದು, ಅವುಗಳ ಕಾಮಗಾರಿ ಪರಿಶೀಲಿಸಿದರು.

ಬೋರ್‌ವೆಲ್‌ಗೆ ನೇರವಾಗಿ ನೀರು ಸೇರಲ್ಲ: ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕೆಸಿ ವ್ಯಾಲಿ ನೀರು ಮಡೇರಹಳ್ಳಿ ಕೆರೆಗೂ ಬರುತ್ತಿದೆ. ನಗರಸಭೆಗೆ ಪ್ರಮುಖ ವಾಗಿ ಮಡೇರಹಳ್ಳಿ, ಅಮ್ಮೇರಹಳ್ಳಿ, ಕೋಲಾ ರಮ್ಮ ಕೆರೆಯಲ್ಲಿ ಬೋರ್‌ವೆಲ್‌ಗ‌ಳಿವೆ. ಬೋರ್‌ವೆಲ್‌ಗ‌ಳಿಗೆ ನೇರವಾಗಿ ಕೆಸಿ ವ್ಯಾಲಿ ನೀರು ಹರಿಯದಂತೆ ಕ್ರಮವಹಿಸಿ ನಗರಸಭೆಯಿಂದ ಬೋರ್‌ವೆಲ್‌ಗ‌ಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

8 ಬೋರ್‌ವೆಲ್‌ಗ‌ಳು ಕಾರ್ಯನಿರ್ವಹಣೆ: ಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋರ್‌ ವೆಲ್‌ಗ‌ಳಿಗೆ ಇದೀಗ ತಡೆಗೋಡೆ ನಿರ್ಮಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೆರೆಯಂಗಳದಲ್ಲಿರುವ ಕೊಳವೆಬಾವಿ ಗಳನ್ನೂ ಸ್ಥಳಾಂತರಿಸಲಾಗುವುದು. ಸದ್ಯ ಮಡೇರಹಳ್ಳಿ ಕೆರೆಯಲ್ಲಿ 8 ಬೋರ್‌ ವೆಲ್‌ಗ‌ಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.

ನೀರು ಕಲುಷಿತವಾಗಲ್ಲ: ಮಡೇರಹಳ್ಳಿ ಕೆರೆಗೆ ಪೂರ್ತಿಯಾಗಿ ಕೆಸಿ ವ್ಯಾಲಿ ನೀರು ಹರಿಸುವುದಿಲ್ಲ. ಕೋಲಾರ ನಗರಕ್ಕೆ ಕುಡಿ ಯು ವುದಕ್ಕಾಗಿ ನೀರು ಬಳಕೆ ಮಾಡಿ ಕೊಳ್ಳುವುದರಿಂದ ಹೆಚ್ಚಿನ ನೀರು ಹರಿಸುವುದಿಲ್ಲ ಎಂದ ಅವರು, ಬೋರ್‌ವೆಲ್‌ಗ‌ಳಿಗೆ ಹೆಚ್ಚುವರಿ ಪೈಪುಗಳನ್ನು ಹಾಕಿ ಎತ್ತರ ದಲ್ಲಿ ಇರಿಸಲಾಗುವುದು. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಲು ಬಿಡಲ್ಲ ಎಂದರು. ನಗರಸಭೆ ಆಯುಕ್ತ ಶಿವಪ್ರಕಾಶ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.