15 ಗ್ರಾಪಂಗಳಿಗೆ ತಲಾ 10 ಲಕ್ಷ ರೂ.
Team Udayavani, Sep 29, 2019, 2:28 PM IST
ಬೇತಮಂಗಲ: ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಪಂ ಅನ್ನು ಮಾದರಿ ಮಾಡಲು ಒತ್ತು ನೀಡುವುದಾಗಿ ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು.
ಗ್ರಾಮದಲ್ಲಿನ ಕಚೇರಿಯಲ್ಲಿ ವಿವಿಧ ಗ್ರಾಪಂಗಳ ಸದಸ್ಯರು ಮತ್ತು ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣಾಭಿವೃದ್ಧಿಗೆ 1.5 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದೆ. 15 ಗ್ರಾಪಂಗಳು ತಲಾ 10 ಲಕ್ಷ ರೂ. ಬಿಡುಗಡೆ ಮಾಡಿದ್ದು, ಅಗತ್ಯ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಬೇತಮಂಗಲ ಗ್ರಾಮದಲ್ಲಿ ಸೂಕ್ತ ಬಸ್ ನಿಲ್ದಾಣ, ಪೊಲೀಸ್ ಠಾಣೆ ಕಟ್ಟಡ, ವಾಹನ ನಿಲುಗಡೆಗೆ ಸ್ಥಳ, ಪಾಲಾರ್ ಕೆರೆಯ ದುರಸ್ತಿ, ಹಳೇ ಮದ್ರಾಸ್ ರಸ್ತೆ ಒತ್ತುವರಿ ತೆರವು ಮಾಡಿ ಅಭಿವೃದ್ಧಿ ಮಾಡುವುದು ಸೇರಿ ಇನ್ನೂ ಹಲವು ಕಾರ್ಯಕ್ರಮ ಶೀಘ್ರದಲ್ಲೇ ಪರಿಹಾರ ಮಾಡಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಶಾಸಕರಲ್ಲಿ ಮನವಿ ಮಾಡಿದರು.
ಶಾಸಕಿ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಕಂದಾಯ ಅಧಿಕಾರಿ ಮಂಜುನಾಥ್ ಮತ್ತು ಗ್ರಾಮದ ಹಿರಿಯರ ಜೊತೆ ಚರ್ಚಿಸಿ ಕೂಡಲೇ ಸರ್ಕಾರಿ ಜಾಗ ಗುರುತಿಸುವಂತೆ ತಿಳಿಸಿದರು. ಆದಷ್ಟೂ ಬೇಗ ಕಾಮಗಾರಿ ಕೈಗೆತ್ತಿಕೊಂಡು ಮಾದರಿ ಗ್ರಾಪಂ ಮಾಡುವುದಾಗಿ ಭರವಸೆ ನೀಡಿದರು.
ಜಿಪಂ ಮಾಜಿ ಸದಸ್ಯ ಅ.ಮು. ಲಕ್ಷ್ಮೀನಾರಾಯಣ್, ಗ್ರಾಪಂ ಅಧ್ಯಕ್ಷ ಕಿರಣ್ ಕುಮಾರ್, ಮಾಜಿ ಅಧ್ಯಕ್ಷ ದುರ್ಗಾ ಪ್ರಸಾದ್, ಪ್ರಸನ್ನ, ಟಿ.ಗೊಲ್ಲಹಳ್ಳಿ ಅಧ್ಯಕ್ಷೆ ಮಂಜುಳಾ, ಪಾಪಣ್ಣ, ಗ್ರಾಪಂ ಸದಸ್ಯರಾದ ಮಂಜುನಾಥ್, ವಿನು, ವಿವಿಧ ಗ್ರಾಪಂಗಳ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.