ಪ್ಯಾಕ್ಸ್‌ ಸಂಘಗಳಿಗೆ 100 ಕಂಪ್ಯೂಟರ್‌


Team Udayavani, Jul 10, 2020, 6:55 AM IST

pax-sangha

ಕೋಲಾರ: ಮೀಟರ್‌ ಬಡ್ಡಿ ಶೋಷಣೆ ತಪ್ಪಿಸಿ ಸಮಾಜದ ಕಟ್ಟಕಡೆಯ ಪ್ರತಿ ರೈತನಿಗೂ ಸಾಲ ತಲುಪಿಸಿದಾಗ ಮಾತ್ರ ಸಹಕಾರ ಆಂದೋ ಲನ ಯಶಸ್ವಿಯಾಗಲು ಸಾಧ್ಯ ಎಂದು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದ ದಿ.ನಾಗಯ್ಯರೆಡ್ಡಿ ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಅಪೆಕ್ಸ್‌ ಬ್ಯಾಂಕ್‌ ಕೊಡುಗೆಯಾಗಿ ನೀಡಿದ ಕಂಪ್ಯೂಟರ್‌ಗಳನ್ನು 100 ಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ  ವಿತರಿಸುವ ಹಾಗೂ ಮೈಕ್ರೋ ಎಟಿಎಂಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹಾಗೂ ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ನೀಲಕಂಠೇಗೌಡ ಮನವಿಗೆ  ಸ್ಪಂದಿಸಿ ಮತ್ತೆ 100 ಕಂಪ್ಯೂಟರ್‌ ಒದಗಿಸುವ ಭರವಸೆ ನೀಡಿದರು.

ವೃಥಾ ಆರೋಪ ಸಲ್ಲದು: ಶಾಸಕ ಕೆ. ಶ್ರೀನಿವಾಸಗೌಡ ಮಾತನಾಡಿ, ಸಹಕಾರ ಬ್ಯಾಂಕಿನ ವಿರುದಟಛಿ ವೃಥಾ ಆರೋಪ ಸಲ್ಲದು, ತಪ್ಪಾಗಿದ್ದರೆ ನೇರವಾಗಿ ಬಂದು ಕೇಳಬೇಕು, ಮುಳುಗಿ ಹೋಗಿದ್ದ ಬ್ಯಾಂಕ್‌ ಇಂದು ಇಷ್ಟೊಂದು  ಅಭಿವೃದ್ಧಿ ಹೊಂದಿದೆ. ಇದನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲೂ ಇದೆ ಎಂದು ಹೇಳಿದರು.

ಸುಳ್ಳುದೂರಿಗೆ ಸ್ಪಂದನೆ ಅಗತ್ಯವಿಲ್ಲ: ಮೈಕ್ರೊ ಎಟಿಎಂಗೆ ಚಾಲನೆ ನೀಡಿದ ಶಾಸಕಿ ಹಾಗೂ ಬ್ಯಾಂಕ್‌ ನಿರ್ದೇಶಕಿ ರೂಪಕಲಾ, ಭದ್ರತೆ ಇಲ್ಲದೇ ಸಾಲ ನೀಡಿ ತಾಯಂದಿರ ಬದುಕಿಗೆ ನೆರವಾಗುತ್ತಿರುವ ಬ್ಯಾಂಕಿನ ವಿರುದ ಬರುವ ಸುಳ್ಳು  ದೂರುಗಳಿಗೆ ಸ್ಪಂದನೆ ಅಗತ್ಯವಿಲ್ಲ ಎಂದು ಹೇಳಿದರು. ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ಶ್ರೀಕಂಠೇಗೌಡ, ಸಹಕಾರ ವ್ಯವಸ್ಥೆ ಸರಿಪಡಿಸಲು ಎಲ್ಲರೂ ಕೈಜೋಡಿಸಬೇಕು,

ಸರ್ಕಾರಿ ಇಲಾಖೆಗಳ ಹಣ ಡಿಸಿಸಿ ಬ್ಯಾಂಕಿನಲ್ಲಿಡಲು ಸರ್ಕಾರದ ಮೇಲೆ ಒತ್ತಡ ತರಬೇಕು, ಎಂಪಿಸಿಎಸ್‌ಗಳ ವೈಯಕ್ತಿಕ ಖಾತೆ ಸೊಸೈಟಿ, ಡಿಸಿಸಿ ಬ್ಯಾಂಕಿನಲ್ಲಿ ತೆರೆಯುವಂತೆ ಮಾಡಬೇಕು  ಎಂದು ವಿವರಿಸಿದರು. ನಬಾರ್ಡ್‌ ಎಜಿಎಂ ನಟರಾಜನ್‌, ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕ್‌ ಇಂದು  ಮಾದರಿಯಾಗಿದೆ, ಇದಕ್ಕೆ ಕಾರಣರಾದ ಆಡಳಿತ ಮಂಡಳಿ ಸದಸ್ಯರು ಅಭಿನಂದನಾರ್ಹರು ಎಂದು ಹೇಳಿದರು.

ವ್ಯವಸ್ಥಾಪಕ ಹುಸೇನ್‌ ದೊಡ್ಡಮನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಎಜಿಎಂ ಶಿವಕುಮಾರ್‌ ಬ್ಯಾಂಕ್‌ ಬೆಳೆದು ಬಂದ  ಕುರಿತ ಮಾಹಿತಿ ಒದಗಿಸಿದರು. ಅಪೆಕ್ಸ್‌ ಬ್ಯಾಂಕ್‌ ಎಂಡಿ ವೆಂಕಟಸ್ವಾಮಿ, ಅಪೆಕ್ಸ್‌ನ ನಾಗಣ್ಣ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ನಾಗರಾಜ್‌, ನಿರ್ದೇಶಕರಾದ ಎಂ.ಎಲ್‌. ಅನಿಲ್‌ಕುಮಾರ್‌, ನಾಗನಾಳ ಸೋಮಣ್ಣ, ನಾರಾಯಣರೆಡ್ಡಿ, ಕೆ.ವಿ.ದಯಾನಂದ್‌,  ಯಲವಾರ ಸೊಣ್ಣೇಗೌಡ, ಹನುಮಂತರೆಡ್ಡಿ, ವೆಂಕಟಶಿವಾರೆಡ್ಡಿ, ವೆಂಕಟರೆಡ್ಡಿ, ಚನ್ನರಾ  ಯಪ್ಪ, ನಾಗಿರೆಡ್ಡಿ, ಗೋವಿಂದರಾಜು, ಎಂ.ಡಿ.ರವಿ, ಎಜಿಎಂಗಳಾದ ಬೈರೇಗೌಡ, ನಾಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.