7 ದಶಕ ಕಳೆದರೂ ಸಂವಿಧಾನ ಆಶಯ ಇನ್ನೂ ಈಡೇರಿಲ್ಲ


Team Udayavani, Jan 20, 2017, 3:25 PM IST

War-3.jpg

ಮಾಲೂರು: ಶೋಷಿತ ಸಮುದಾಯ ಆಡಳಿತ ಚುಕ್ಕಾಣಿ ಹಿಡಿಯದ ಹೊರತು ಸಂವಿಧಾನದ ಆಶಯಗಳು ಈಡೇರಲು ಸಾಧ್ಯವಿಲ್ಲ ಎಂದು ಆರ್‌ಪಿಐ ಮತ್ತು ಸಮತಾ ಸೈನಿಕದಳದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಸಮತಾ ಸೈನಿಕದಳ ಆಯೋಜಿಸಿದ್ದ ಮಾಲೂರು ತಾಲೂಕು ಮತ್ತು ಪಟ್ಟಣದ ವಿವಿಧ ಘಟಕಗಳ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಅವರು ಮಾತನಾಡಿದರು. 

ಸಂವಿಧಾನ ಲೋಕಾರ್ಪಣೆಯಾಗಿ 7 ದಶಕ ಗಳು ಕಳೆದಿವೆಯಾದರೂ ಇಲ್ಲಿಯವರೆಗೂ ಅಧಿಕಾರ ಚುಕ್ಕಾಣಿ ಹಿಡಿದ ಸರ್ಕಾರಗಳು ದಲಿತ, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿ ಪಡಿಸುವ ಕಾರ್ಯವನ್ನು ಕೈಗೊಂಡಿಲ್ಲ. ರಾಜ್ಯದಲ್ಲಿನ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಗಳು ಹಾಗೂ ಅಲೆಮಾರಿ ಸಮುದಾಯಗಳು ಒಗ್ಗಟಿನಿಂದ ಹೋರಾಟ ರೂಪಿಸದ ಹೊರತು ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ಎಂದು ತಿಳಿಸಿದರು. 

ಕಾಂಗ್ರೆಸ್‌ ಪಕ್ಷ 60 ವರ್ಷಗಳಿಂದಲೂ ದಲಿತ, ಹಿಂದುಳಿದ ವರ್ಗ ಹಾಗೂ ಅಲೆಮಾರಿ ಸಮುದಾಯಗಳ ಜೊತೆಗೆ ಮಹಿಳೆಯರು ಮತ್ತು ವಿದ್ಯಾರ್ಥಿಗಳನ್ನು ದುಡಿಸಿಕೊಂಡು ಅಧಿಕಾರದ ಅಮಲಿನಲ್ಲಿ ರಾಜಕಾರಣ ನಡೆಸುತ್ತಿದೆಯೇ ಹೊರತು ಶೋಷಿತ ಸಮುದಾಯಗಳ ಅಭಿವೃದ್ಧಿ ಯನ್ನು ಕೈಗೊಳ್ಳಲು ವಿಫ‌ಲವಾಗಿದೆ ಎಂದು ದೂರಿದರು. 

ಆರ್‌ಪಿಐ ಪಕ್ಷ 60 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜಯಂತಿಯ ಅಂಗವಾಗಿ ಜ.30ರಂದು ಬೆಂಗಳೂರು ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಬೃಹತ್‌ ಸಮಾವೇಶವನ್ನು ಹಮ್ಮಿ ಕೊಳ್ಳಲಾಗಿದೆ. ತಾಲೂಕಿನ ಆರ್‌ಪಿಐ ಮತ್ತು ಎಸ್‌ಎಸ್‌ಡಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಎಸ್‌ಎಸ್‌ಡಿಯ ತಾಲೂಕು ಅಧ್ಯಕ್ಷ ಗೋವಿಂದ ಸ್ವಾಮಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನು ಮತ್ತು ಸಿದ್ಧಾಂತಗಳನ್ನು ಪ್ರತಿಪಾದಿ ಸುವ ಮೂಲಕ ಶೋಷಿತ ಸಮುದಾಯಗಳು ಅಧಿಕಾರತದ ಚುಕ್ಕಾಣಿ ಹಿಡಿಯುವ ಅನಿರ್ವಾಯವಿದೆ. ಸಂಘಟಿತ ಹೋರಾಟದ ಮೂಲಕ ಮಾತ್ರ ಇದು ಸಾಧ್ಯವಾಗಲಿದೆ. ದಲಿತ, ಹಿಂದುಳಿದ ಮತ್ತು ಕೆಳವರ್ಗದ ಸಮುದಾಯಗಳ ಆಶೋತ್ತರ ಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಆರ್‌ಪಿಐಯನ್ನು ಬೆಂಬಲಿಸುವುದು ಅನಿವಾರ್ಯ ಎಂದರು.

ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಶಾಖೆ ಗಳ ಮತ್ತು ನಗರ ಘಟಕದ ವಿವಿಧ ಶಾಖೆಗಳ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.  ಮುಖಂಡರಾದ ರಾಜಪ್ಪ, ಸಂತೋಷ್‌, ರಾಘವೇಂದ್ರ, ರಘು ನಾಥ್‌, ಲೋಕೇಶ್‌, ನಿದರಮಂಗಲ ವೆಂಕಟೇಶ್‌, ಭಾಸ್ಕರ್‌, ನಾಗೇಶ್‌, ಸೋಮು, ಸುನಿಲ್‌ ಕುಮಾರ್‌, ಪಾಪಯ್ಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.