ಹೆಚ್ಚುವರಿ ಹಣ ಸಂಗ್ರಹಿಸಿದರೆ ಕ್ರಮ


Team Udayavani, Apr 8, 2020, 1:36 PM IST

kolar-tdy-2

ಮಾಲೂರು: ಮಾರಕ ಕೋವಿಡ್ 19 ಸೋಂಕಿನಿಂದ ರಾಷ್ಟ್ರ ಮತ್ತು ರಾಜ್ಯದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದ್ದು, ಇಂತಹ ಪರಿಸ್ಥಿತಿಯ ಲಾಭ ಪಡೆಯದೇ ನ್ಯಾಯಬೆಲೆ ಅಂಗಡಿ ಮಾಲೀಕರು ಅರ್ಹರಿಗೆ ಪಡಿತರ ಧಾನ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ. ಗೋಪಾಲಯ್ಯ ಸೂಚಿಸಿದರು.

ಪಟ್ಟಣದ ಹೊರ ವಲಯದ ದ್ಯಾಪ ಸಂದ್ರದ ಬಳಿಯಲ್ಲಿ ಅದಾನಿ ಗೋಧಿ ಸಂಸ್ಕ ರಣ ಘಟಕಕ್ಕೆ ಭೇಟಿ ನೀಡಿ ಪಡಿತರ ಧಾನ್ಯಗಳ ಗೋಧಿ ಸಂಸ್ಕರಿಸುವ ಬಗ್ಗೆ ಹಾಗೂ ಚೀಲಗಳಿಗೆ ತುಂಬುವ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು. ನ್ಯಾಯ ಬೆಲೆ ಅಂಗಡಿ ಮಾಲೀಕರು ಗ್ರಾಹಕರಿಂದ ಹೆಚ್ಚುವರಿಯಾಗಿ 10-20 ರೂ. ಸಂಗ್ರಹಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರ ಮೇಲೆ ಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದರು.

ತೂಕ ಪರಿಶೀಲನೆ: ಬಡ ಜನತೆಯ ಆಹಾರ ಭದ್ರತೆಗಾಗಿ ಸರ್ಕಾರ ನೀಡುತ್ತಿರುವ ಪಡಿತರ ಧಾನ್ಯ ಬಡ ಜನರ ಉಪಯೋಗಕ್ಕೆ ಯೋಗ್ಯವಾಗಿರಬೇಕು. ಆ ನಿಟ್ಟಿನಲ್ಲಿ ಸಂಸ್ಕರಣೆ ಮತ್ತು ಚೀಲ ತುಂಬುವ ಕಾರ್ಯದ ಜೊತೆಗೆ ನಿಗದಿತ ತೂಕ ಪರಿಶೀಲಿಸುತ್ತಿರುವುದಾಗಿ ತಿಳಿಸಿದರು.

10 ಜಿಲ್ಲೆಗೆ ಗೋಧಿ ಪೂರೈಕೆ: ರಾಜ್ಯದ 10 ಜಿಲ್ಲೆಗಳಿಗೆ ಇಲ್ಲಿಂದಲೇ 8300 ಮೆಟ್ರಿಕ್‌ ಟನ್‌ ಸಂಸ್ಕರಿಸಿದ ಗೋಧಿ ಸರಬರಾಜು ಮಾಡುತ್ತಿದ್ದು, ಇದುವರೆಗೂ 5 ಸಾವಿರ ಮೆಟ್ರಿಕ್‌ ಟನ್‌ ಗೋಧಿ ಸರಬರಾಜು ಮಾಡಲಾಗಿದ್ದು, ಉಳಿದ 3300 ಮೇ. ಟನ್‌ ಗೋಧಿ ಒಂದು ದಿನದಲ್ಲಿ ಪೂರೈಕೆಯಾಗುತ್ತದೆ ಎಂದರು.

ಓಟಿಪಿ ಇಲ್ಲದೆ ಧಾನ್ಯ ವಿತರಿಸುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ನ್ಯಾಯಾಬೆಲೆ ಅಂಗಡಿಗಳಿಗೆ ಮಾಹಿತಿ ರವಾನೆಯಾಗಿದೆ. ಅದರಂತೆ ವಿತರಣೆ ಆಗಲಿದೆ. ಲಾಕ್‌ಡೌನ್‌ ಮುಂದುವರಿಯುತ್ತದೆಯೇ ಎಂಬ ಪ್ರಶ್ನೆಗೆ ಈ ಬಗ್ಗೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಪರಿಸ್ಥಿತಿಯ ಅವಲೋಕನದ ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ವಿ.ಮಂಜುಳಾ, ಆಹಾರ ಇಲಾಖೆಯ ಆಯುಕ್ತರಾದ ಶಂಮ್ಲ ಇಕ್ಬಾಲ್‌, ಉಪನಿದೇರ್ಶಕ ನಾಗರಾಜು ಕೆಳಗಿನಮನೆ, ವ್ಯವಸ್ಥಾಪಕ ಶಿವಣ್ಣ, ತಹಶೀಲ್ದಾರ್‌ ಮಂಜುನಾಥ್‌, ಆಹಾರ ನಿರೀಕ್ಷಕ ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.