23ರ ನಂತರ ಕೆಲ ಜನಪ್ರತಿನಿಧಿಗಳ ತಲೆತಂಡ ಖಚಿತ

ಯಾರು ಏನೇ ಹೇಳಿದ್ರೂ ಕೈ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಗೆಲ್ತಾರೆ: ಮಾಜಿ ಉಪಾಧ್ಯಕ್ಷ ಜಿ.ರಾಮಲಿಂಗಾರೆಡ್ಡಿ ಭವಿಷ್ಯ

Team Udayavani, May 12, 2019, 11:54 AM IST

kolar-tdy-10..

ಮುಳಬಾಗಿಲು ನಗರದಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಉಪಾಧ್ಯಕ್ಷ ಜಿ. ರಾಮಲಿಂಗಾರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಳಬಾಗಿಲು: ಯಾರು ಏನೇ ಹೇಳಿದರೂ ಲೋಕಸಭೆ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರ ಗೆಲುವು ಶತ ಸಿದ್ಧವೆಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಉಪಾಧ್ಯಕ್ಷ ಜಿ.ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆಲವು ಮುಖಂಡರು ಪಕ್ಷ ವಿರೋಧಿ ಚಟುವಟಿಕಗಳಲ್ಲಿ ತೊಡಗಿದ್ದು, ಅವರ ವಿರುದ್ಧ ಈಗಾಗಲೇ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ. ಅದೇ ರೀತಿ ಕೆಲವು ಜನಪ್ರತಿನಿಧಿಗಳ ವಿರುದ್ಧವೂ ಕೆಪಿಸಿಸಿ ಮಟ್ಟದಲ್ಲಿ ಪಟ್ಟಿ ಸಿದ್ಧಗೊಂಡಿದ್ದು, ಮೇ 23ರ ನಂತರ ಅವರ ತಲೆ ದಂಡವಾಗಲಿದೆ ಎಂದು ಎಚ್ಚರಿಸಿದರು.

ಕೊತ್ತೂರ್‌ ಮಂಜುನಾಥ್‌ ಹೇಳಿಕೆಗೆ ಟಾಂಗ್‌: ಜೆಡಿಎಸ್‌ ಮುಖಂಡರು ಮೈತ್ರಿ ಧರ್ಮದಂತೆ ಉತ್ತಮವಾಗಿಯೇ ಕೆಲಸ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದರೂ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ಗೆ ಮತ ಹಾಕಿರುವುದರಿಂದ ಯಾರು ಏನೇ ಹೇಳಿಕೊಂಡರೂ ಕೆಎಚ್ಎಂ ಗೆಲುವಿಗೆ ಯಾವುದೇ ಅಡ್ಡಿಯಿಲ್ಲವೆನ್ನುವ ಮೂಲಕ ಇತ್ತೀಚಿಗೆ ಹೇಳಿಕೆ ನೀಡಿದ್ದ ಕೊತ್ತೂರ್‌ಗೆ ಹೆಸರು ಹೇಳದೇ ಟಾಂಗ್‌ ನೀಡಿದರು.

ಸ್ಪೀಕರ್‌ ವಿರುದ್ಧ ಕಿಡಿ: ಕೆ.ಸಿ.ವ್ಯಾಲಿ ಯೋಜನೆ ಅವಳಿ ಜಿಲ್ಲೆಗಳಿಗೆ ತರಲು ಎಸ್‌.ಎಂ.ಕೃಷ್ಣ ಸಿಎಂ ಆಗಿದ್ದಾಗ ಸಂಸದ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಎಂ.ವಿ.ವೆಂಕಟಪ್ಪ, ಕೃಷ್ಣಬೈರೇಗೌಡ, ಶಿವಶಂಕರ್‌ರೆಡ್ಡಿ, ಆಲಂಗೂರು ಶ್ರೀನಿವಾಸ್‌, ವಿ.ಮುನಿಯಪ್ಪ, ವಿ.ಆರ್‌.ಸುದರ್ಶನ್‌, ವೆಂಕಟಶಿವಾರೆಡ್ಡಿ, ನಾರಾಯಣಸ್ವಾಮಿ, ಸುಧಾಕರ್‌ ಸೇರಿ ಹಲವು ಮುಖಂಡರ ನಿಯೋಗ ತೆರಳಿ ಸರ್ಕಾರದ ಮೇಲೆ ಒತ್ತಡ ತಂದು ಯೋಜನೆ ಅನುಷ್ಠಾನಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಆದರೆ, ಸ್ಪಿಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಈ ಯೋಜನೆ ತಾವೊಬ್ಬರೇ ತಂದಿರುವುದಾಗಿ ಹೇಳಿಕೊಳ್ಳುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಮುಖಂಡರು ಶ್ರಮಿಸಲಿ: ಅದೇ ರೀತಿ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಿಶ್ರ ಸರ್ಕಾರದ ಮೈತ್ರಿ ಧರ್ಮದಂತೆ ತಾಲೂಕಿನ ಅಭ್ಯರ್ಥಿಯಾಗಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್‌ ಅವರನ್ನು ಕಣಕ್ಕಿಳಿಸಲಾಗಿದೆ. ಎರಡೂ ಪಕ್ಷಗಳ ಮುಖಂಡರೂ ಶ್ರಮಿಸುವ ಮೂಲಕ ಅವರನ್ನು ಗೆಲ್ಲಿಸಲಾಗುವುದು ಎಂದರು.

ಕಿಸಾನ್‌ಕೇತ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್‌ಚಂದ್ರಗೌಡ, ರಾಜ್ಯ ಕಾಂಗ್ರೆಸ್‌ನ ಐ.ಟಿ.ಸೆಲ್ ಪ್ರಧಾನ ಕಾರ್ಯದರ್ಶಿ ಕಾರ್ಗಿಲ್ ವೆಂಕಟೇಶ್‌, ಹಿರಿಯ ವಕೀಲರಾದ ಬಷೀರ್‌, ಅಕ್ಮಲ್ಬೇಗ್‌, ವೆಂಕಟಮುನಿರೆಡ್ಡಿ, ಚೆಲ್ಲಪಲ್ಲಿ ಕೃಷ್ಣಾರೆಡ್ಡಿ ಹಲವರಿದ್ದರು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.