ಸರ್ಕಾರಿ ಕಚೇರಿಯೇ ಮದ್ಯ ಸೇವನೆ ಅಡ್ಡೆ

ಮಾರ್ಕಂಡೇಯ ಡ್ಯಾಂ ಬಳಿಯ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಮದ್ಯ ಸೇವನೆ

Team Udayavani, Jun 28, 2019, 8:28 AM IST

kolar-tdy-1..

ಬಂಗಾರಪೇಟೆ: ಪ್ರತಿ ದಿನ ಮದ್ಯ ಸೇವನೆ ಮಾಡಲು ಸರ್ಕಾರಿ ಕಚೇರಿಯನ್ನೇ ಅಧಿಕಾರಿಗಳು ಅಡ್ಡೆಯನ್ನಾಗಿ ಮಾಡಿಕೊಂಡಿರುವ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಲೂಕಿನ ಮಾರ್ಕಂಡೇಯ ಡ್ಯಾಂ ಬಳಿಯ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ನಿತ್ಯ ಅಧಿಕಾರಿಗಳು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.

ಊಟದ ಪಕ್ಕದಲ್ಲೇ ಮದ್ಯದ ಬಾಟಲ್: ಮೀನುಗಾರಿಕೆ ಇಲಾಖೆ ವಿಭಾಗೀಯ ಉಪನಿರ್ದೇಶಕ ಮಹೇಶ್‌, ಹಿರಿಯ ಸಹಾಯಕ ನಿರ್ದೇಶಕ ಪೆದ್ದಣ್ಣ ಹಾಗೂ ಬೂದಿಕೋಟೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್‌ ಮದ್ಯ ಸೇವನೆ ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳ ನಡೆ ಸ್ಥಳೀಯರಿಗೆ ಅಸಹ್ಯ ಹುಟ್ಟಿಸಿದ್ದು ಊಟ ಮಾಡುವ ಪಕ್ಕದಲ್ಲಿಯೇ ಮದ್ಯಸೇವನೆ ಮಾಡಿರುವ ಖಾಲಿ ಬಾಟಲ್ಗಳೂ ರಾರಾಜಿಸುತ್ತಿವೆ.

10 ಮಂದಿ ಸಿಬ್ಬಂದಿ ನೇಮಕ: ತಾಲೂಕಿನ ಮಾಲೂರು ಗಡಿಭಾಗದ ಮಾರ್ಕಂಡೇಯ ಡ್ಯಾಂ ಬಳಿ ಸರ್ಕಾರ ಮೀನು ಮರಿ ಸಾಕಾಣಿಕೆ ಕೇಂದ್ರ ಆರಂಭಿಸಿದೆ. ಡ್ಯಾಂ ಬಳಿ ಮೀನು ಮರಿ ಸಾಕಾಣಿಕೆ ಕೇಂದ್ರ ಸ್ಥಾಪಿಸಿ ಸಹಾಯಕ ನಿರ್ದೇಶಕರ ಹುದ್ದೆ ಸೇರಿದಂತೆ ಸುಮಾರು 10 ಜನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ದೊಡ್ಡ ಮೀನುಗಳ ಸಾಗಣೆ: ಕಳೆದ 10 ವರ್ಷಗಳಿಂದ ಬರ ಇರುವುದರಿಂದ ನೀರಿಲ್ಲದೇ ಮೀನು ಮರಿ ಸಾಕಾಣಿಕೆಯನ್ನು ಕಡಿಮೆ ಮಾಡಲಾಗಿದೆ. ಡ್ಯಾಂನಲ್ಲಿರುವ ನೀರನ್ನು ಪಂಪ್‌ ಮೋಟಾರ್‌ ಮೂಲಕ ನೀರು ಹಾಯಿಸಿ ಸುಮಾರು 10 ತೊಟ್ಟಿಗಳಲ್ಲಿ ಮೀನು ಮರಿ ಸಾಕಾಣಿಕೆ ಮಾಡುತ್ತಿದ್ದಾರೆ. ಇದರ ಜೊತೆಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಿಬ್ಬಂದಿ ದೊಡ್ಡ ಮೀನುಗಳನ್ನೂ ಸಾಕಾಣಿಕೆ ಮಾಡಿ ಪಾರ್ಟಿಗಳಿಗೆ ಉಪಯೋಗಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.

ಸಿಬ್ಬಂದಿ ಮೇಲೆ ಒತ್ತಡ: ವಿಭಾಗೀಯ ಮೀನುಗಾರಿಕೆ ಉಪನಿರ್ದೇಶಕ ಮಹೇಶ್‌ ಕೋಲಾರ ಜಿಲ್ಲೆಯ ಮೀನುಗಾರಿಕೆ ಇಲಾಖೆ ಕೇಂದ್ರಗಳ ಮೇಲೆ ಪರಿಶೀಲನೆ ಮಾಡುವ ಉದ್ದೇಶದಿಂದ ಮದ್ಯದ ಪಾರ್ಟಿ ಆಯೋಜಿಸಲು ಅಧಿಕಾರಿ ಸಿಬ್ಬಂದಿ ಮೇಲೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ.

ಬೇಸತ್ತ ಸಿಬ್ಬಂದಿಯಿಂದ ವಿಡಿಯೋ:ಇದರಿಂದ ಬೇಸತ್ತ ಸಿಬ್ಬಂದಿಯೊಬ್ಬರು ಇವರ ಜೊತೆಯಲ್ಲಿದ್ದುಕೊಂಡು ಗುಂಡು-ತುಂಡು ಪಾರ್ಟಿಯನ್ನು ವಿಡಿಯೋ ಮಾಡಿದ್ದು ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ.

ಬೂದಿಕೋಟೆ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಪಾರ್ಟಿ ಮಾಡಿಲ್ಲ. ಮೀನುಗಾರಿಕೆ ಕ್ವಾಟ್ರಸ್‌ನಲ್ಲಿ ನಮ್ಮ ಇಲಾಖೆ ಮೀನುಗಾರಿಕೆ ಉಪನಿರ್ದೇಶಕ ಮಹೇಶ್‌ ಬಂದಿದ್ದರು. ಅವರಿಗೆ ಊಟ ಹಾಕಿದ್ದೇವೆಯೇ ಹೊರತು ಯಾವುದೇ ಪಾರ್ಟಿ ಮಾಡಿಲ್ಲ. ಊಟ ಮಾಡುವ ಜಾಗದಲ್ಲಿ ಮದ್ಯ ಸೇವನೆ ಮಾಡಿರುವ ಬಾಟಲ್ ಇರುವ ಬಗ್ಗೆ ಕಾಣಿಸಿಲ್ಲ. ಹೆಚ್ಚಿನ ಮಾಹಿತಿಯನ್ನು ಮಹೇಶ್‌ ಸಾಹೇಬ್ರ ಬಳಿಯೇ ಕೇಳಿ. ● ಸತೀಶ್‌, ಎಡಿ, ಬೂದಿಕೋಟೆ ಮೀನು ಸಾಕಾಣಿಕೆ ಕೇಂದ್ರ
● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.