ಅಮೃತ್‌ ಸಿಟಿ ಉಳಿಕೆ ಕಾಮಗಾರಿಗೆ ಸಿಗದ ಒಪ್ಪಿಗೆ


Team Udayavani, Jan 11, 2023, 3:27 PM IST

tdy-18

ಕೋಲಾರ: ನಗರಸಭೆ ಸಾಮಾನ್ಯ ಸಭೆಗೆ ಗೈರಾದ ಅಧಿಕಾರಿಗಳು,ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು, ಸಭೆಗೆ ಬಾರದವರಿಗೆ ನೋಟಿಸ್‌ ನೀಡುವಂತೆ ಒಕ್ಕೊರಲಿನಿಂದ ಆಗ್ರಹಿಸಿದ ಘಟನೆ ನಡೆಯಿತು.

ನಗರಸಭೆ ಕಚೇರಿಯಲ್ಲಿ ಅಧ್ಯಕ್ಷೆ ಶ್ವೇತಾ ಶಬರೀಶ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪವಾಗುತ್ತಿದ್ದಂತೆಯೇ ಬೇಸರ ವ್ಯಕ್ತಪಡಿಸಿದ ಸದಸ್ಯರು, ಸಭೆಗೆ ಗೌರವ ನೀಡದ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಸಭೆಯಲ್ಲಿ ಅಮೃತ್‌ಸಿಟಿ ಯೋಜನೆಯಡಿ ಬಂದಿ ರುವ 70 ಕೋಟಿ ಅನುದಾನದಡಿ ಶೇ.20 ಕಾಮಗಾರಿ ಮಾಡಿಲ್ಲ. ಆದರೂ ಉಳಿದ ಕಾಮಗಾರಿಗಳಿಗೆ ಅನುಮೋದನೆ ನೀಡುವಂತೆ ಸಭೆಯಲ್ಲಿ ವಿಚಾರ ಬಂದಿದ್ದು, ಯಾವುದೇ ಕಾರಣಕ್ಕೂ ಅನುಮೋದನೆ ನೀಡಬಾರದು ಎಂದು ನಗರಸಭೆ ಸದಸ್ಯರು ಸರ್ವಾನುಮತದಿಂದ ತೀರ್ಮಾನ ಕೈಗೊಂಡರು. ಸದಸ್ಯ ಬಿ.ಎಂ.ಮುಬಾರಕ್‌, ಕಳಪೆ ವಸ್ತುಗಳನ್ನು ಬಳಸಿ ಕಾಮಗಾರಿಗಳನ್ನು ನಡೆಸಲಾಗಿದ್ದು, ಮೂರೇ ದಿನಕ್ಕೆ ಹಾಳಾಗುತ್ತಿದೆ. ಇದರ ಬಗ್ಗೆ ಸಾರ್ವಜನಿಕರು ಆಯಾ ವಾರ್ಡ್‌ಗಳ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಮೃತ್‌ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರಸಭೆ ಸದಸ್ಯ ಸೂರಿ ಮಾತನಾಡಿ, ವಿಶ್ವ ಯೋಗ ದಿನಾಚರಣೆಗೆ 20ಲೀಟರ್‌ ಸಾಮರ್ಥ್ಯದ 1000 ಕ್ಯಾನ್‌ ಸರಬರಾಜು ಮಾಡಿರುವುದಕ್ಕೆ ಸಂಬಂಧಿಸಿದಂತೆ 85 ಸಾವಿರ ಬಿಲ್‌ ಪಾವತಿಗಾಗಿ ಅನುಮೋದನೆಗೆ ಬಂದಿದ್ದು, 40 ಸಾವಿರ ರೂ ಆಗುವುದಕ್ಕೆ 85 ಸಾವಿರ ಬಿಲ್‌ ಕೊಟ್ಟಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ಸರಬರಾಜುದಾರರಿಂದಲೇ ಹಣ ವಸೂಲಿ ಮಾಡಬೇಕೆಂದು ಪಟ್ಟುಹಿಡಿದರು.

ಸದಸ್ಯ ಅಂಬರೀಶ್‌ ಮಾತನಾಡಿ, ನಗರದ ಬಹುತೇಕ ಕಡೆಗಳಲ್ಲಿ ಯುಜಿಡಿಯಲ್ಲಿ ಹುಳಗಳು ಕಂಡುಬರುತ್ತಿವೆ. ಈ ಬಗ್ಗೆ ನಗರಸಭೆ ಆರೋಗ್ಯ ನಿರೀಕ್ಷಕರ ಗಮನಕ್ಕೆ ಹಲವಾರು ಬಾರಿ ತಂದಿದ್ದರೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ನಗರದ ಟೇಕಲ್‌ ರಸ್ತೆಯಲ್ಲಿರುವ ಮಕ್ಕಳ ಉದ್ಯಾನ ವನಕ್ಕೆ ಅಂಬೇಡ್ಕರ್‌ ಹೆಸರಿಡುವಂತೆ ತೀರ್ಮಾನಿಸ ಲಾಗಿದೆ. ನಾಮಫಲಕ ಹಾಕಿ ಕಾರ್ಯಕ್ರಮ ಉದ್ಘಾಟ ನೆಗೆ ಯಾವುದೇ ಅಡೆತಡೆ ಇಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಧ್ವನಿಗೂಡಿಸಿದ ಸದಸ್ಯ ರಾಕೇಶ್‌, ಕಿತ್ತಾಟಗಳಿಲ್ಲದೆ ವ್ಯವಸ್ಥಿತವಾಗಿ ಕಾಯಕ್ರಮ ವನ್ನು ಉದ್ಯಾನವನದಲ್ಲೇ ನಡೆಸಬೇಕು, ಮಹಾನ್‌ ವ್ಯಕ್ತಿಗೆ ಅವಮಾನವಾಗ ಬಾರದು ಎಂದರು.

ಸದಸ್ಯ ಪ್ರಸಾದ್‌ಬಾಬು ಮಾತನಾಡಿ, ನಗರಸಭೆಯ ಹಿಂದಿನ ರಾಜ್ಯ ಸರಕಾರವು ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ 5 ಕೋಟಿರೂ ಅನುದಾನ ಬಿಡುಗಡೆ ಗೊಳಿಸಿತ್ತು. ಆದರೆ, ಈಗಿನ ಬಿಜೆಪಿ ಸರಕಾರ ವಾಪಸ್ಸು ಪಡೆದುಕೊಂಡಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಜತೆಗೆ ನಗರಸಭೆ ಸಿಬ್ಬಂದಿ ಮಾಡಬೇಕಿರುವ ಶೇ.75 ಕೆಲಸವನ್ನು ಸದಸ್ಯರು ಮಾಡುತ್ತಿದ್ದಾರೆ. ಸಮಸ್ಯೆ ಬಂದ ಕೂಡಲೇ ಪರಿಹಾರ ಮಾಡುವ ಜತೆಗೆ ಸಾರ್ವಜನಿಕರಿಗೆ ಗೌರವ ನೀಡುವ ಕೆಲಸಕ್ಕೆ ಸಿಬ್ಬಂದಿ ಮುಂದಾಗಬೇಕು ಎಂದು ಸೂಚಿಸಿದರು.

ನಗರಸಭೆ ವ್ಯಾಪ್ತಿಯಲ್ಲಿರುವ ಜಾಹಿತಾತು ಫಲಕಗಳ ಸಂಪೂರ್ಣ ಮಾಹಿತಿ ಪಡೆದು ಅವುಗಳಿಗೆ ಶುಲ್ಕ ನಿಗದಿ ಮಾಡಬೇಕು, ನಗರಸಭೆ ವಾಹನಗಳಿಗೆ ಜಿಪಿಎಸ್‌ ಅಳವಡಿಸಬೇಕು ಎಂದೂ ಒತ್ತಾಯಿಸಿದರು.

ಪಂಪ್‌ಹೌಸ್‌ ಗದ್ದಲ: ಸದಸ್ಯ ರಾಕೇಶ್‌ ಮಾತನಾಡಿ, ನಗರಸಭೆ ವ್ಯಾಪ್ತಿಗೆ ಬರುವ ಕೋಲಾರಮ್ಮ ಪಂಪ್‌ಹೌಸ್‌ನಲ್ಲಿ ಯಂತ್ರೋಪಕರಣಗಳ ಬಿಡಿ ಭಾಗಗಳ ವಿತರಣೆ ಯಲ್ಲಿ ಹಗಲು ದರೋಡೆ ನಡೆಯುತ್ತಿದ್ದು, ಪಂಪು ಮೋಟರ್‌ಗಳು, ಪೈಪುಗಳು, ಕೇಬಲ್‌ಗ‌ಳು ಎಷ್ಟಿವೆ ಎನ್ನುವ ಮಾಹಿತಿಯೇ ಇಲ್ಲ ಎಂದು ಆರೋಪಿಸಿದರು. ಇದಕ್ಕೆ ಧ್ವನಿಗೂಡಿಸಿದ ಬಿ.ಎಂ. ಮುಬಾರಕ್‌, ಜಿಲ್ಲಾದ್ಯಂತ ಕೆರೆಗಳು ತುಂಬಿದ್ದರೂ ನಗರಕ್ಕೆ ನೀರು ಕೊಡುವಂಥ ವಿಪುಲ ಅವಕಾಶ ಗಳಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಂಪ್‌ ಹೌಸ್‌ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಸಾರ್ವಜನಿಕರಿಗೆ ನೀರು ಕೊಡುವುದರಲ್ಲಿಯೂ ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.