ಸ್ವಾತಂತ್ರ್ಯದ ಅಮೃತ ಮಹೋತ್ಸವ: ಕ್ರಿಯಾ ಯೋಜನೆ ಸಿದ್ಧಪಡಿಸಿ
Team Udayavani, Mar 13, 2021, 4:45 PM IST
ಕೊಪ್ಪಳ: ದೇಶ ಸ್ವತಂತ್ರ್ಯಗೊಂಡು 75 ವರ್ಷಗಳನ್ನುಆಚರಿಸುತ್ತಿರುವ ಸ್ಮರಣಾರ್ಥವಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ಕುರಿತು ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಎಲ್ಲ ಇಲಾಖೆಗಳು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಿ ಎಂದು ಎಡಿಸಿ ಎಂ.ಪಿ.ಮಾರುತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳಕುರಿತು ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶ ಸ್ವತಂತ್ರವಾಗಿ 75 ವರ್ಷಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ 75ಸಂಖ್ಯೆಯನ್ನು ಸಾಂಕೇತಿಕವಾಗಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ, ಪಪೂ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತವ್ಯಾಪ್ತಿಯಲ್ಲಿ ರೂಪಿಸಬಹುದಾದ ಕಾರ್ಯಕ್ರಮಗಳು,ಆಯೋಜಿಸಬೇಕಾದ ಸ್ಪರ್ಧೆಗಳು, ಜಾಥಾ, ವಾಕಥಾನ್,ಸೈಕಲ್ ಜಾಥಾ, ಪ್ರಬಂಧ ಸ್ಪರ್ಧೆ, ಕಿರುಚಿತ್ರ, ಕಿರುನಾಟಕಗಳು, ಮುಂತಾದ ಕಾರ್ಯಕ್ರಮಗಳನ್ನುಆಯೋಜಿಸಬೇಕು. ಪ್ರತಿ ವಾರ ಒಂದೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯ ಹೋರಾಟದ ಬಗ್ಗೆ ಪರಿಚಯ, ಮೌಲ್ಯಗಳ ಬಗ್ಗೆಅರಿವು ಮೂಡಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು.ವಿದ್ಯಾರ್ಥಿಗಳಲ್ಲಿ ಸ್ವಾತಂತ್ರÂದ ಬಗ್ಗೆ ಜ್ಞಾನ ಹೆಚ್ಚಿಸಬೇಕು.ಇದಕ್ಕಾಗಿ ಅವರಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು,ಶಾಲಾ ಕಾಲೇಜು ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ವಿಶ್ವ ಗುರು ಭಾರತ, ಭಾರತದ ಶ್ರೀಮಂತ ಸಂಸ್ಕೃತಿಮತ್ತು ಪರಂಪರೆ, ಅನೇಕತೆಯಲ್ಲಿ ಏಕತೆ, ಭಾರತದಪ್ರಗತಿ, ಸ್ವಾತಂತ್ರ್ಯದ ನಂತರ, ಆತ್ಮ ನಿರ್ಭರ ಭಾರತ, ನಾವು ಭಾರತದ ಜನರು ಈ ವಿಷಯಗಳ ಕುರಿತುಅಥವಾ ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆಸಂಬಂಧಿ ಸಿದ ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳ, ಸ್ವಾತಂತ್ರ್ಯ ಹೋರಾಟಗಾರರು ಮುಂತಾದವುಗಳ ಬಗ್ಗೆಯೂ ಕಿರು ಚಿತ್ರ, ಕಿರು ನಾಟಕ ರಚಿಸಿ ಪ್ರಸ್ತುತಪಡಿಸಬಹುದು ಎಂದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿಶರಣಬಸವರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಡಿಡಿಪಿಯು ಡಿ.ಬಿ.ಗಡೇದ, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಬಿ. ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ ಸೇರಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.