ಜಿಲ್ಲೆ ರೈತರ ಕೈಗೆಟುಕದ ಬಜೆಟ್


Team Udayavani, Feb 2, 2019, 7:09 AM IST

jille.jpg

ರೈತರು, ಮಧ್ಯಮ ವರ್ಗದವರು, ಬಡವರು, ದೀನ ದಲಿತರು, ಮಹಿಳೆಯರು, ವಿದ್ಯಾರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಜೆಟ್ಮಂಡನೆಯಾಗಲಿದೆ ಎಂಬ ನಿರೀಕ್ಷೆ ಹೊಂದಿದ್ದ ಜಿಲ್ಲೆಯ ಜನ ಬಜೆಟ್ ಮಂಡನೆ ಬಳಿಕ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಜೆಟ್ ಈ ಬಾರಿ ರೈತರ, ಮಧ್ಯಮ ವರ್ಗ, ಬಡವರು, ವಿದ್ಯಾರ್ಥಿಗಳ ಹಾಗೂ ದಲಿತರ ನಿರೀಕ್ಷೆ ಹುಸಿಗೊಳಿಸಿದೆ. ಯುಪಿಎ ಸರ್ಕಾರದ ಹಳೆಯ ಯೋಜನೆಗಳಿಗೆ ಹೊಸ ಹೆಸರನ್ನು ಸೂಚಿಸಿದೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ವಿಶ್ಲೇಷಿಸುತ್ತಿದ್ದಾರೆ.

ಕೋಲಾರ: ಚುನಾವಣಾ ಸನಿಹದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಕೋಲಾರ ಜಿಲ್ಲೆಯ ವಿಚಾರದಲ್ಲಿ ಯಾವುದೇ ವಿಶೇಷ ಘೋಷಣೆಗಳಿಲ್ಲದ ರೈತರ ಕೈಗೆಟುಕದ ಬಜೆಟ್ ಎಂದು ಜಿಲ್ಲೆಯ ಜನ ಅಭಿಪ್ರಾಯ ಪಟ್ಟಿದ್ದಾರೆ.

ರೈಲ್ವೆ ಯೋಜನೆಗಳಿಲ್ಲ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಯೋಜನೆಗಳಿಗೆ ಸುಮಾರು 65 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಆದರೆ, ಕರ್ನಾಟಕ ಹಾಗೂ ಕೋಲಾರ ಜಿಲ್ಲೆಯ ರೈಲ್ವೆ ಬೇಡಿಕೆಗಳ ಕುರಿ ತಂತೆ ಚಕಾರವೆತ್ತಿಲ್ಲ. ಇದು ಹಲವು ದಶಕಗಳಿಂದ ರೈಲ್ವೆ ಬೇಡಿಕೆಗಳ ಈಡೇರಿಕೆ ನಿರೀಕ್ಷೆಯಲ್ಲಿರುವ ಜಿಲ್ಲೆಯನ್ನು ನಿರಾಸೆಯಲ್ಲಿ ಮುಳುಗುವಂತೆ ಮಾಡಿದೆ. 5 ವರ್ಷಗಳ ಹಿಂದೆ ಘೋಷಿಸಿದ್ದ ರೈಲ್ವೆ ಕೋಚ್ ತಯಾರಿಕಾ ಘಟಕದ ಬಗ್ಗೆ ಯಾವುದೇ ಚಕಾರವೆತ್ತಿಲ್ಲ.

ಗೋಕುಲ ಆಯೋಗ: ದೇಶದ ಪಶು ಸಂಪತ್ತನ್ನು ಹೆಚ್ಚಿಸುವ ಸಲುವಾಗಿ ರಾಷ್ಟ್ರೀಯ ಕಾಮಧೇನು ಆಯೋಗ ಸ್ಥಾಪಿಸಲು ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪಶು ಸಂಪತ್ತು ಹೇರಳವಾಗಿರುವ ಹೈನೋದ್ಯಮ ಕ್ರಾಂತಿ ತನಡೆದಿ ರುವ ಕೋಲಾರ ಜಿಲ್ಲೆಗೆ ಇದರಿಂದ ಅನುಕೂಲ ವಾಗಬಹುದೆಂಬ ನಿರೀಕ್ಷೆ ಇದೆ.

ಆದರೆ, ಪಶುಪಾಲನೆ ಹಾಗೂ ಮೀನುಗಾರಿಕೆ ಅಭಿವೃದ್ಧಿಗೆ ಕೇವಲ 700 ಕೋಟಿ ರೂ.ಗಳನ್ನು ಮಾತ್ರವೇ ಮೀಸಲಿಟ್ಟಿರುವುದನ್ನು ಗಮನಿಸಿದರೆ, ಕೇಂದ್ರ ಸರ್ಕಾರಕ್ಕೆ ಗೋವುಗಳ ಸಂರಕ್ಷಣೆ ವಿಚಾರ ದಲ್ಲಿ ಗೋಪಾಲಕರಿಗೆ ನೆರವಾಗುವ ದೃಷ್ಟಿಯಲ್ಲಿ ಗೋಕುಲ ಆಯೋಗದಿಂದ ಪ್ರಯೋಜನವಾಗದು ಎಂದೇ ಭಾವಿಸಲಾಗುತ್ತಿದೆ.

ನರೇಗಾಗೆ 60 ಸಾವಿರ ಕೋಟಿ ರೂ.: ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ 60 ಸಾವಿರ ಕೋಟಿ ರೂ.ಗಳನ್ನು ಮೀಸಲಾಗಿಟ್ಟಿದೆ. ಇದರಿಂದ ಕರ್ನಾಟಕ ರಾಜ್ಯದಲ್ಲಿ ನರೇಗಾ ಅನು ಷ್ಠಾನದಲ್ಲಿ ಮೊದಲ ಸ್ಥಾನದಲ್ಲಿರುವ ಕೋಲಾರ ಜಿಲ್ಲೆಗೆ ಮತ್ತಷ್ಟು ಪ್ರಯೋಜನವಾಗಲಿದೆ. ಇದೇ ವೇಗದಲ್ಲಿ ಕೋಲಾರ ಜಿಲ್ಲೆ ನರೇಗಾ ಅನುಷ್ಠಾನಕ್ಕೆ ಮುಂದಾದರೆ ಬಜೆಟ್‌ನಲ್ಲಿ ಘೋಷಿಸಿರುವ 60 ಸಾವಿರ ಕೋಟಿ ರೂ.ಗಳಿಂದ ಹೆಚ್ಚಿನ ಪ್ರಯೋಜನ ವಾಗಲಿದೆ.

ಪರಿಶಿಷ್ಟ ಅನುದಾನ ಹೆಚ್ಚಳ: ದೇಶದಲ್ಲಿಯೇ ಅತಿ ಹೆಚ್ಚು ಪರಿಶಿಷ್ಟರು ಕೋಲಾರ ಜಿಲ್ಲೆಯಲ್ಲಿ ವಾಸ ಮಾಡುತ್ತಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ 76 ಸಾವಿರ ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕ್ಕಾಗಿ 50 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿ ಸಿದೆ. ಈ ಅನುದಾನದಲ್ಲಿ ರೂಪಿಸುವ ಯೋಜನೆ ಗಳ ಪ್ರಯೋಜನ ಕೋಲಾರ ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡದವರಿಗೆ ದಕ್ಕುವ ಸಾಧ್ಯತೆಗಳಿವೆ.

ಪಿಂಚಣಿ ಯೋಜನೆ: ಅಸಂಘಟಿತ ಕಾರ್ಮಿಕರು ಪ್ರತಿ ತಿಂಗಳು 100 ರೂ. ಪಾವತಿಸಿದರೆ 60 ವರ್ಷದ ಬಳಿಕ ಪ್ರತಿ ತಿಂಗಳು 3 ಸಾವಿರ ರೂ.ಗಳ ಪಿಂಚಣಿ ಪಡೆಯಬಹುದು ಎನ್ನುವ ಪ್ರಧಾನ ಮಂತ್ರಿ ಶ್ರಮಯೋಗಿ ಮಂದಾನ್‌ ಪಿಂಚಣಿ ಯೋಜನೆಯನ್ನು ಘೋಷಿಸಲಾಗಿದೆ. ಆದರೆ, ದಿನಗೂಲಿ ಮಾಡುವ ಅಸಂಘಟಿತ ಕಾರ್ಮಿಕರು ಪ್ರತಿ ತಿಂಗಳು 100 ರೂ. ಪಾವತಿಸುವುದಕ್ಕೆ ಕಟ್ಟು ಬೀಳುವುದು ಕಷ್ಟದ ಕೆಲಸವೆಂದು ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರ ಅಭಿಪ್ರಾಯವಾಗಿದೆ.

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.