ಯೋಜನಾ ಪ್ರಾಧಿಕಾರಕ್ಕೆ ಸದಸ್ಯರ ನೇಮಕ
Team Udayavani, Feb 1, 2020, 3:48 PM IST
ಮಾಲೂರು: ತಾಲೂಕು ನಗರ ಹಾಗೂ ಗ್ರಾಮೀಣ ಯೋಜನಾ ಪ್ರಾಧಿಕಾರಕ್ಕೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವ ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಶುಕ್ರವಾರ ಪದಗ್ರಹಣ ಮಾಡಿದರು.
ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಸ್ತಿ ಸತೀಶ್ ಆರಾಧ್ಯ ಅವರನ್ನು ಕಳೆದ ನ.4ರಂದು ಅಯ್ಕೆ ಮಾಡಿದ್ದ ಸರ್ಕಾರ, ಪ್ರಸ್ತುತ ನಗರ ಬಿಜೆಪಿ ಅಧ್ಯಕ್ಷ ಎಂ.ಸಿ.ರವಿ, ಸಿದ್ದನಹಳ್ಳಿ ಪ್ರಭಾಕರ್ ಹಾಗೂ ತಾಪಂ ಮಾಜಿ ಸದಸ್ಯೆ ಅಮರಾವತಿ ಅವರನ್ನುಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಪ್ರಾಧಿಕಾರದ ಕಚೇರಿಯಲ್ಲಿ ಪದಗ್ರಹಣ ಮಾಡಿದ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಅಧ್ಯಕ್ಷ ಸತೀಶ್ ಆರಾಧ್ಯ, ತಮ್ಮ ಶಿಫಾರಸ್ಸಿನ ಮೇರೆಗೆ ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಸಭೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಬೇಕಾಗಿದೆ. ಪ್ರಾಧಿಕಾರದಿಂದ ಅನೇಕ ಸಾರ್ವಜನಿಕ ಕೆಲಸಗಳು ಬಾಕಿ ಇದ್ದು, ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಪ್ರಾಧಿಕಾರದ ಮೀಸಲು ಹಣದಲ್ಲಿ ಕೆರೆಯ ಅಭಿವೃದ್ಧಿಗೆ ಹಿಂದೆ ಇದ್ದ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆಯು ಕುಂಟಿತವಾಗಿದೆ. ವಸತಿಸಂಕೀರ್ಣಗಳ ಅಭಿವೃದ್ಧಿ, ಭೂಪರಿವರ್ತನೆ ಕಡತಗಳ ವಿಲೇವಾರಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಪುರಸಭೆ ಸದಸ್ಯರಾದ ಭಾನುತೇಜ್, ಸಿಎಂಸಿ ಮುನಿರಾಜು, ಮಾಜಿ ಸದಸ್ಯೆಶ್ರೀವಳ್ಳಿರಮೇಶ್, ದೊಡ್ಡಿ ರಾಜಪ್ಪ, ಎಎಲ್‌ಕೆ ಕುಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.