ಅಕ್ರಮ ಗಣಿ ತಡೆಯಲು ಅಧಿಕಾರಿಗಳು ವಿಫಲ: ಸಂಸದ

ರಾಜಕಾರಣಿಗಳೊಂದಿಗೆ ಶಾಮೀಲಾದ ಅಧಿಕಾರಿಗಳಿಗೆ ತಕ್ಕ ಶಾಸ್ತಿ

Team Udayavani, Aug 14, 2019, 3:41 PM IST

kolara-tdy-2

ಕೋಲಾರದ ಪ್ರವಾಸಿ ಮಂದಿರದಲ್ಲಿ ಮಾಲೂರು ತಾಲೂಕು ಅಧಿಕಾರಿಗಳೊಂದಿಗೆ ಸಂಸದ ಎಸ್‌.ಮುನಿಸ್ವಾಮಿ ಅಭಿವೃದ್ಧಿ ಕಾರ್ಯದ ಕುರಿತು ಮಾಹಿತಿ ಪಡೆದರು.

ಕೋಲಾರ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮಿತಿಮೀರಿ ನಡೆಯುತ್ತಿದ್ದು ಮಾಲೂರು ತಾಲೂಕಿನಲ್ಲಿ ಬೆಟ್ಟ ಗುಡ್ಡಗಳನ್ನೇ ಕರಗಿಸುತ್ತಿರುವ ರಾಜಕಾರಣಿಗಳಿಗೆ ಬೆಂಬಲ ನೀಡಿರುವ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡುವುದಾಗಿ ಸಂಸದ ಎಸ್‌.ಮುನಿಸ್ವಾಮಿ ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ತಡೆಯಲು ಅಧಿಕಾರಿಗಳು ವಿಫಲರಾಗಿದ್ದಾರೆ. ಕೆಲವು ರಾಜಕಾರಣಿಗಳೊಂದಿಗೆ ಶಾಮೀಲಾಗಿ ರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದರು.

ಅನುಮತಿ ಇಲ್ಲದೆ ಜಲ್ಲಿ ಕ್ರಷರ್‌ ನಡೆಸುವವರಿಗೆ 90 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ ಇದುವರೆಗೂ ಈ ಹಣವನ್ನು ಸರ್ಕಾರಕ್ಕೆ ಪಾವತಿ ಮಾಡಿಲ್ಲ ಎಂದು ದೂರಿದರು.

ಮಾಲೂರು ತಾಲೂಕಿನಲ್ಲಿ 22 ಜಲ್ಲಿ ಕ್ರಷರ್‌ಗಳಿದ್ದು 2 ಮಾತ್ರ ಬಹಳ ದಿನಗಳಿಂದ ಇವೆ. ಉಳಿದವು ಅಕ್ರಮ. ಅನುಮತಿ ಇಲ್ಲದೆ ಜಲ್ಲಿ ಕ್ರಷರ್‌ ನಡೆಸುವವರಿಗೆ 90 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ ಇದುವರೆಗೂ ಈ ಹಣವನ್ನು ಸರ್ಕಾರಕ್ಕೆ ಪಾವತಿ ಮಾಡಿಲ್ಲ. ಅಧಿಕಾರಿಗಳು ಇವರ ಕೈಗೊಂಬೆಯಾಗಿದ್ದು ದಂಡ ವಸೂಲಿ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಮಾಲೂರು ಶಾಸಕ ಕೆ.ನಂಜೇಗೌಡರ ಹೆಸರು ಹೇಳದೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದ ಅವರು, ಒಂದೇ ಕುಟುಂಬದ ಐದಾರು ಜನ ಜಲ್ಲಿ ಕ್ರಷರ್‌ ವ್ಯಾಪಾರ ನಡೆಸುತ್ತಿದ್ದಾರೆ. ಅದನ್ನು ಕೇಳದೆ ಅಧಿಕಾರಿಗಳು ಮೌನವಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ವಿಭಾಗಾಧಿಕಾರಿಗಳಿಗೂ ದೂರು ನೀಡಲಾಗಿದೆ ಎಂದರು.

ಅಕ್ರಮ ಜಲ್ಲಿ ಕ್ರಷರ್‌ಗಳಿಗೆ ಹಾಕಿರುವ ದಂಡ ಮತ್ತು ತೆರಿಗೆ ಪಾವತಿ ಮಾಡದವರು ಮಾ.31 ರೊಳಗೆ ಪಾವತಿ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಅಧಿಕಾರಿಗಳು ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ಕಿಡಿಕಾರಿದರು.

ಗಣಿ ಅಧಿಕಾರಿ ಷಣ್ಮುಗಂ ತರಾಟೆ: ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಷಣ್ಮುಗಂ ಅವರನ್ನು ತರಾಟೆಗೆ ತೆಗೆದುಕೊಂಡ ಸಂಸದ ಮುನಿಸ್ವಾಮಿ, ಮಾಲೂ ರಿನಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಮೌನವಾ ಗಿರುವುದು ಏಕೆ ಎಂದು ಪ್ರಶ್ನಿಸಿದರು.

3-4 ದಿನಗಳಲ್ಲಿ ಕ್ರಮ: ಅಕ್ರಮ ಗಣಿ ಈಗಾಗಲೇ ಕಾರ್ಯೋನ್ಮುಖವಾಗಿದ್ದು 3-4 ದಿನದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.

ಈಗಾಗಲೇ ದಂಡ ಪಾವತಿ ಮಾಡದವರ ಕ್ರಷರ್‌ಗಳಿಗೆ ವಿದ್ಯುತ್‌ ಕಡಿತಗೊಳಿಸಲಾಗಿದೆ. 2015 ರಿಂದ ಗಣಿಗಾರಿಕೆ ನಡೆಸುತ್ತಿದ್ದವರು ರಾಯಲ್ಟಿ ಕಟ್ಟುವಂತೆ ಸೂಚನೆ ನೀಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಷಣ್ಮುಗಂ ತಿಳಿಸಿದರು.

ಇಬ್ಬರ ನಡುವೆ ಮಾತಿನ ಚಕಮಕಿ:ಸಂಸದರು ಕೇಳಿದ ಕೆಲವು ಪ್ರಶ್ನೆಗಳಿಗೆ ನೇರ ಉತ್ತರ ಕೊಡಲು ಹಿಂಜರಿದ ಅಧಿಕಾರಿ ವಿರುದ್ಧ ಇದರಲ್ಲಿ ಕರ್ತವ್ಯವನ್ನು ಜವಾಬ್ದಾರಿ ಯುತವಾಗಿ ನಿರ್ವಹಿಸುತ್ತಿಲ್ಲ ಎಂದು ಗುಡುಗಿದರು.ಈ ವೇಳೆ ಸಂಸದ ಎಸ್‌.ಮುನಿಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನಡುವೆಯೂ ಮಾತಿನ ಚಕಮಕಿ ನಡೆಯಿತು.

ಇದಕ್ಕೂ ಮುಂಚೆ ನಡೆದ ಮಾಲೂರು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಬಗ್ಗೆ ವಿವರ ನೀಡಿದ ಸಂಸದರು, ಮಾಲೂರು ಶಾಸಕ ಕೆ.ನಂಜೇಗೌಡರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಾರೆ. ಸರ್ಕಾರಿ ಕಾರ್ಯ ಕ್ರಮಗಳನ್ನು ನಡೆಸುವಾಗ ಜಿಪಂ, ತಾಪಂ, ಗ್ರಾಪಂ, ಜನಪ್ರತಿನಿಧಿಗಳನ್ನು ನಿರ್ಲಕ್ಷ್ಯ ಮಾಡದೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿರುವುದಾಗಿಯೂ ತಿಳಿಸಿದರು.

ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಪಾತ ಮಾಡಬಾರದು ಜನಪ್ರತಿನಿಧಿಗಳು ಸಾರ್ವ ಜನಿಕರ ಸೇವಕರು ಎನ್ನುವುದನ್ನು ಮರೆಯುವಂತಿಲ್ಲ ಇದನ್ನು ನಂಜೇಗೌಡರು ಮರೆಯಬಾರದು ಎಂದರು.

ವಿವರ ನೀಡಿದ ಸಂಸದರು ಬಯಲು ಸೀಮೆ ಜಿಲ್ಲೆಯಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ಹರಿಸ ಬೇಕಾಗಿದೆ. ಕೃಷ್ಣ ನದಿ ನೀರಿನಲ್ಲಿ ನಮ್ಮ ಪಾಲೂ ಇದೆ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಕೀಳು ಆರೋಪ: ರಾಜ್ಯದಲ್ಲಿನ ನೆರೆ ಹಾವಳಿಗೆ ಕೇಂದ್ರ ಸರ್ಕಾರದ ನೀರಸ ಸ್ಪಂದನೆಗೆ ಕಾಂಗ್ರೆಸ್‌ ಆರೋಪದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ, ಕಾಂಗ್ರೆಸ್‌ ನಾಯಕರ ಆರೋಪ ಸರಿಯಲ್ಲ. ಅವರದ್ದು ಮೊಸರಿನಲ್ಲಿ ಕಲ್ಲು ಹುಡುಕುವ ಸ್ವಭಾವ ಎಂದು ಟೀಕಿಸಿದರು.

ಬಿಜೆಪಿ ಜಿಪಂ ಸದಸ್ಯ ಮಹೇಶ್‌, ಜಿಪಂ ಉಪಾಧ್ಯಕ್ಷೆ ಯಶೋಧಮ್ಮ, ಜಿಪಂ ಸದಸ್ಯ ಶ್ರೀನಿವಾಸ, ಶ್ರೀಕೃಷ್ಣ ಮತ್ತಿತರರಿದ್ದರು.

ಕೋಲಾರದ ಪ್ರವಾಸಿ ಮಂದಿರದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಸುದ್ದಿಗೋಷ್ಠಿ ನಡೆಸಿದರಲ್ಲದೇ ಮಾಲೂರು ತಾಲೂಕು ಅಧಿಕಾರಿಗಳೊಂದಿಗೆ ಮಾತನಾಡಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.