Bethamangala: ಬಾಲಕಿ ಪುಸಲಾಯಿಸಿ ಅತ್ಯಾಚಾರವೆಸಗಿದ ಕಾಮುಕರು!


Team Udayavani, Dec 30, 2023, 6:20 PM IST

Bethamangala: ಬಾಲಕಿ ಪುಸಲಾಯಿಸಿ ಅತ್ಯಾಚಾರವೆಸಗಿದ ಕಾಮುಕರು!

ಬೇತಮಂಗಲ: ಪಟ್ಟಣದ ಸಮೀಪದ ಟಿ. ಗೊಲ್ಲಹಳ್ಳಿ ಗ್ರಾಮದ ದಲಿತ ಅಪ್ರಾಪ್ತ ಬಾಲಕಿ ಮೇಲೆ ಅದೇ ಗ್ರಾಮದ ಐವರು ಕಾಮುಕರಿಂದ (ಗ್ಯಾಂಗ್‌ ರೇಪ್‌) ಅತ್ಯಾಚಾರ ನಡೆದಿದ್ದು, ಪೋಕ್ಸೋ ಕಾಯ್ದೆ ಅಡಿಯಲ್ಲಿ 5 ಮಂದಿ ವಿರುದ್ಧ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಐವರು ಆರೋಪಿಗಳಾದ ಕಾಮುಕರು: ನಾಗರಾಜ್‌(25), ಲವಕುಮಾರ್‌(30), ನವೀನ್‌, ಶಬರೀಶ್‌, ಸುಮನ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಏನಿದು ಪ್ರಕರಣ: 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ದಲಿತ ಬಾಲಕಿಯನ್ನು ಟಿ.ಗೊಲ್ಲಹಳ್ಳಿ ಗ್ರಾಮದ ಪ್ರಮುಖ ಆರೋಪಿ ನಾಗರಾಜ್‌ ಹಲವು ತಿಂಗಳಿಂದ ಈಕೆಯನ್ನು ಪ್ರೀತಿಸುವುದಾಗಿ ನಾಟಕ ವಾಡಿ ದೈಹಿಕವಾಗಿ ಬಳಸಿಕೊಂಡಿದ್ದ ಎನ್ನಲಾಗಿದೆ. ನಂತರ ಪೋಷಕರಿಗೆ ವಿಷಯ ತಿಳಿದು ಗ್ರಾಮದಲ್ಲಿ ಪಂಚಾಯಿತಿ ಸಹ ಮಾಡಿದ್ದು, ಮದುವೆ ಮಾಡಿಕೊಳ್ಳಲು ಒಪ್ಪಿದ್ದರು ಎನ್ನಲಾಗಿದೆ.

4 ತಿಂಗಳ ಗರ್ಭಿಣಿ: ಇದೀಗ ಅಪ್ರಾಪ್ತ ಬಾಲಕಿ 4 ತಿಂಗಳ ಗರ್ಭಿಣಿಯಾಗಿದ್ದು, ಪಂಚಾಯಿತಿಯಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಪ್ರೇಮಿ ನಾಗರಾಜ್‌, ಇದೀಗ ಬಾಲಕಿ ಗರ್ಭಿಣಿಯ ವಿಷಯ ತಿಳಿಯುತ್ತಿದ್ದಂತೆಯೇ ಮದುವೆಗೆ ನಿರಾಕರಿಸಿದ್ದು, ನಂತರ ನಾಗರಾಜ್‌ ಜತೆ ನಾಲ್ಕು ಮಂದಿ ಸಹ ಸೇರಿಕೊಂಡು ಅತ್ಯಾಚಾರ ಮಾಡಿದ್ದಾರೆಂದು ಪೊಲೀಸರಿಗೆ ಬಾಲಕಿ ತಿಳಿಸಿದ್ದಾಳೆ.

ಸಂತ್ರಸ್ತೆ ತಾಯಿ ಬೇತಮಂಗಲ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 5 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಜೀವಂತವಾಗಿ ಸುಟ್ಟು ಹಾಕುತ್ತೇವೆಂದು ಬೆದರಿಕೆ : ಪ್ರೇಮಿ ನಾಗರಾಜ್‌ ಹಾಗೂ ಅದೇ ಗ್ರಾಮದ ನಾಲ್ಕು ಮಂದಿ ಯುವಕರು ಅಪ್ರಾಪ್ತೆಯನ್ನು ಬೆದರಿಸಿ ಕಳೆದ 9 ತಿಂಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ವಿಷಯ ಯಾರಿಗಾದರೂ ತಿಳಿಸಿದರೆ ಜೀವಂತವಾಗಿ ಸುಟ್ಟು ಹಾಕುತ್ತೇವೆಂದು ಬೆದರಿಸಿದ್ದಾರೆಂದು ತಿಳಿದು ಬಂದಿದೆ.

 

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.