![KND-Amber-greece](https://www.udayavani.com/wp-content/uploads/2024/12/KND-Amber-greece-415x249.jpg)
BJP: ಪ್ರಭಾವಿ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ
Team Udayavani, Aug 28, 2023, 4:05 PM IST
![BJP: ಪ್ರಭಾವಿ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ](https://www.udayavani.com/wp-content/uploads/2023/08/tdy-14-19-620x372.jpg)
ಬಂಗಾರಪೇಟೆ: ಮುಂಬರುವ ಜಿಪಂ ಚುನಾವಣೆಗೆ ಬಿಜೆಪಿ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಸ್ಪರ್ಧಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಇವರ ಸ್ಪರ್ಧೆಯಿಂದ ತಾಲೂಕಿನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಚುಣಾವಣೆ ಕಾವು ರಂಗೇರಲಿದೆ.
ಪಟ್ಟಣದ ಪುರಸಭೆಯಿಂದ ನಾಲ್ಕು ಬಾರಿ ಸತತವಾಗಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿ ಎರಡು ಬಾರಿ ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 20 ವರ್ಷ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದು, ರಾಜ್ಯ ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಕಟ್ಟಾ ಬೆಂಬಲಿಗ. ಸುಮಾರು 8 ವರ್ಷ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಎರಡು ವರ್ಷದ ಹಿಂದೆ ಕಾಂಗ್ರೆಸ್ ತೊರೆದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ತಾಲೂಕಿನಲ್ಲಿ ಚಿಕ್ಕಅಂಕಂಡಹಳ್ಳಿ, ದೊಡೂxರು ಕರಪನಹಳ್ಳಿ, ಕಾಮಸಮುದ್ರ ಹಾಗೂ ಬೂದಿಕೋಟೆ ಎಂಬ ನಾಲ್ಕು ಜಿಪಂ ಕ್ಷೇತ್ರಗಳಿದ್ದು, ರಾಜ್ಯದಲ್ಲಿ ಎರಡೂವರೆ ವರ್ಷಗಳಿಂದ ಜಿಪಂ ಚುನಾವಣೆ ಇಲ್ಲದೇ ಆಡಳಿತಾಧಿಕಾರಿಗಳ ಅಧಿಕಾರವಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸದೇ ನಿರ್ಲಕ್ಷ್ಯವಹಿಸಿದ್ದು, ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಜಿಪಂ ಹಾಗೂ ತಾಪಂ ಚುನಾವಣೆ ನಡೆಸಲು ನಿರ್ಧಾರ ಮಾಡುತ್ತಿದೆ. ಕ್ಷೇತ್ರ ಮರುವಿಂಗಡನೆ ಮಾಡುವುದರ ಬಗ್ಗೆ ರಾಜ್ಯ ಹೈ ಕೋರ್ಟಿನಲ್ಲಿ ಕೇಸ್ ನಡೆಯುತ್ತಿರುವುದನ್ನು ತೆರವು ಗೊಳಿಸಲು ಸಿದ್ಧತೆ ನಡೆಸಿದ್ದು, ಡಿಸೆಂಬರ್-ಜನವರಿ ಯಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಕಣಕ್ಕಿಳಿಸಲು ಸಿದ್ಧತೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಕ್ಷೇತ್ರದಲ್ಲಿ 3 ಬಾರಿ ಹ್ಯಾಟ್ರಿಕ್ ಸಾಧನೆ ಮಾಡಿರುವ ಶಾಸಕ ಎಸ್.ಎನ್. ನಾರಾಯಣಸ್ವಾಮಿಯೂ ತಾಲೂಕಿನ ನಾಲ್ಕು ಕ್ಷೇತ್ರ ಗಳು ಹಾಗೂ ವಿಧಾನಸಭೆ ಕ್ಷೇತ್ರಕ್ಕೆ ಸೇರಿರುವ ಕೋಲಾರ ತಾಲೂಕಿನ ಹುತ್ತೂರು ಜಿಪಂ ಕ್ಷೇತ್ರ ದಲ್ಲಿಯೂ ಸಹ ಪ್ರಭಾವಿ ಮುಖಂಡರನ್ನು ಕಣಕ್ಕಿಳಿಸಿ ರಂಗ ತಾಲೀಮು ಮಾಡುತ್ತಿರುವ ಬೆನ್ನಲ್ಲೆ, ಬಿಜೆಪಿ ಪಕ್ಷವು ಸಹ ತಾಲೂಕಿನಲ್ಲಿ ಪ್ರಭಾವಿ ಮುಖಂಡರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಸ್ಪರ್ಧಿಸುವುದು ಖಚಿತ: ಬಿಜೆಪಿ ಪ್ರಭಾವಿ ಮುಖಂಡ ಕೆ.ಚಂದ್ರಾರೆಡ್ಡಿ ಪುರಸಭೆ ಬಿಟ್ಟು ಮುಂಬರುವ ಜಿಪಂ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದು, ತಾಲೂಕಿನ ಕಾಮಸಮುದ್ರ ಹಾಗೂ ಬೂದಿಕೋಟೆ ಜಿಪಂಗಳಲ್ಲಿ ಮೀಸಲಾತಿ ಪ್ರಕಟಗೊಂಡ ಬಳಿಕ ಯಾವು ದಾರೂ ಒಂದರಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಮ್ಮೆ ಜಿಪಂ ಮೀಸಲಾತಿ ಪ್ರಕಟಣೆಗೊಂಡಿದ್ದು, ಇದರ ಪ್ರಕಾರ ಬೂದಿಕೋಟೆ ಕ್ಷೇತ್ರವನ್ನು ಸಾಮಾನ್ಯಕ್ಕೆ ಮೀಸಲಿ ರಿಸಿದೆ. ಈ ಎಲ್ಲಾ ರೂಪರೇಷಗಳನ್ನು ಈಗಿನ ಕಾಂಗ್ರೆಸ್ ಸರ್ಕಾ ರವು ರದ್ದು ಮಾಡಿದ್ದು, ಹೊಸದಾಗಿ ಮೀಸಲಾತಿ ಪ್ರಕಟಿಸಲು ಸಿದ್ಧತೆ ನಡೆಸಿದ್ದು, ತಾಲೂಕಿನ ಕಾಮ ಸಮುದ್ರ ಅಥವಾ ಬೂದಿಕೋಟೆ ಕ್ಷೇತ್ರವು ಸಾಮಾನ್ಯಕ್ಕೆ ಮೀಸಲಿರಿಸುವುದು ಗ್ಯಾರಂಟಿ ಎಂದು ಹೇಳಲಾ ಗುತ್ತಿದೆ. ಇವರೆಡರ ಪೈಕಿ ಒಂದರಲ್ಲಿ ಕೆ.ಚಂದ್ರಾರೆಡ್ಡಿ ಸ್ಪರ್ಧಿಸುವುದು ಖಚಿತವಾಗಿದೆ ಎನ್ನಲಾಗುತ್ತಿದೆ.
ಬಿಜೆಪಿ ಸಂಘಟನೆ ಶೂನ್ಯ: ಕೋಲಾರ ಸಂಸದ ಎಸ್.ಮುನಿಸ್ವಾಮಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಪ್ರಭಾವವನ್ನು ವಿಸ್ತರಣೆ ಮಾಡಿದ್ದರೂ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಒಂದು ಸ್ಥಾನ ಗೆಲ್ಲಿಕೊಳ್ಳಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಬಂಗಾರಪೇಟೆ ಕ್ಷೇತ್ರವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಆಭ್ಯರ್ಥಿ ಎಂ. ನಾರಾಯಣಸ್ವಾಮಿ ಮತದಾನದಿಂದ ದೂರ ಉಳಿದಿದ್ದ ರಿಂದ ಇದರ ಎಫೆಕ್ಟ್ ಸಂಸದ ಎಸ್.ಮುನಿಸ್ವಾಮಿಗೂ ಹೊಡೆತ ಬಿದ್ದಿದೆ. ಪ್ರಸ್ತುತ ಕ್ಷೇತ್ರದಲ್ಲಿ ಬಹುತೇಕ ಬಿಜೆಪಿ ಮುಖಂಡರು ಮುನಿಸಿಕೊಂಡಿರು ವುದರಿಂದ ಬಿಜೆಪಿ ಪಕ್ಷದ ಸಂಘಟನೆ ಶೂನ್ಯವಾಗಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೇ ಹೇಳಲಾಗುತ್ತಿದೆ.
ಚುನಾವಣೆ ಪೈಪೋಟಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪಕ್ಷಗಳಿಗಿಂತ ಅಭ್ಯರ್ಥಿಗಳ ವ್ಯಕ್ತಿತ್ವನ್ನು ನಿರ್ಧಾರ ಕೈಗೊಳ್ಳುವುದರಿಂದ ಮುಂಬರುವ ಜಿಪಂ ಚುನಾವಣೆಗೆ ಬಿಜೆಪಿ ಮುಖಂಡ ಕೆ.ಚಂದ್ರಾರೆಡ್ಡಿ ಸ್ಪರ್ಧಿಸುವುದರಿಂದ ಚುನಾವಣಾ ಕಣವು ರಂಗೇರಿಲಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹುಡುಕಾಟ ಅಗತ್ಯವಿಲ್ಲ. ಈಗಾಗಲೇ ಪ್ರತಿ ಕ್ಷೇತ್ರದಲ್ಲೂ ಇಬ್ಬರಿಗಿಂತ ಹೆಚ್ಚು ಪ್ರಭಾವಿ ಅಭ್ಯರ್ಥಿ ಇರುವುದರಿಂದ ಭಿನ್ನಮತ ಎದುರಿಸುತ್ತಿರುವ ಹಿನ್ನೆಲೆ ಬಿಜೆಪಿ ಸಹ ಪ್ರಭಾವಿಗಳನ್ನು ಕಣಕ್ಕಿಳಿಸಿದರೆ ಚುನಾವಣೆಯ ಪೈಪೋಟಿ ಹೆಚ್ಚಾಗಲಿದೆ.
ಬಿಜೆಪಿಯಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ:
ತಾಲೂಕಿನಲ್ಲಿ ಕಳೆದ ವಿಧಾನಸಭೆ ಚನಾವಣೆಯ ವೇಳೆ ಬಿಜೆಪಿ ಅಭ್ಯರ್ಥಿ ನಡೆದುಕೊಂಡ ರೀತಿಯಿಂದ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಬೇಸರಗೊಂಡಿದ್ದಾರೆ. ಮತದಾನಕ್ಕೂ ಮುನ್ನಾ ಬಿಜೆಪಿ ಅಭ್ಯರ್ಥಿಯಾಗಿ ಎಂ. ನಾರಾಯಣಸ್ವಾಮಿ ನಡೆದುಕೊಂಡ ರೀತಿಯಿಂದ ಬಿಜೆಪಿ ಪಕ್ಷವು ತನ್ನ ಅಸ್ತಿತ್ವವನ್ನು ಮೇಲ್ನೋಟಕ್ಕೆ ಕಳೆದುಕೊಂಡಿದ್ದು, ತಾಲೂಕಿನಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಭಾವಿಗಳಾಗಿದ್ದ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಇವರ ಪುತ್ರ ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್, ಎಂ. ನಾರಾಯಣಸ್ವಾಮಿ ಬೆಂಬಲಿಗ ಮುಖಂಡರು ಸದ್ಯಕ್ಕೆ ತಟಸ್ಥರಾಗಿ ರುವುದರಿಂದ ಮುಂಬರುವ ಜಿಲ್ಲಾ ಮತ್ತು ತಾಪಂ ಚುನಾವಣೆಯನ್ನು ಎದರಿಸಲು ಒಗ್ಗಟ್ಟಿನ ಮಂತ್ರವನ್ನು ಜಪಿಸಬೇಕಾಗುತ್ತದೆ.
ರಾಜಕೀಯ ನಿಂತ ನೀರಲ್ಲ. ಹಣೆಬರಹ ಬರೆ ದಿದ್ದರೇ ಚುನಾವಣೆಯಲ್ಲಿ ಏನು ಬೇಕಾದರೂ ಆಗಬಹುದಾಗಿದೆ. ಕ್ಷೇತ್ರದಲ್ಲಿ ಶಾಸಕರಾಗಿರುವವರು ತಾನು ಶಾಸಕರಾಗುತ್ತೇವೆ, ಸಂಸದರಾಗುತ್ತೇವೆಂದು ಬಂದಿಲ್ಲ. ಚುನಾವಣೆ ವೇಳೆಯಲ್ಲಿ ಆಗುವಂತಹ ಬದಲಾವಣೆಯಿಂದ ಯಾರ್ಯಾರಿಗೆ ಅಧಿಕಾರ ಸಿಗಲಿದೆ ಎನ್ನುವುದು ನಿಗೂಢವಾಗಿದ್ದು, ಮುಂಬರುವ ಜಿಪಂ ಚುನಾವಣೆಗೆ ಬೂದಿಕೋಟೆ ಅಥವಾ ಕಾಮಸಮುದ್ರ ಕ್ಷೇತ್ರದಲ್ಲಿ ಅವಕಾಶ ಸಿಕ್ಕಿದರೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.-ಕೆ.ಚಂದ್ರಾರೆಡ್ಡಿ, ಬಿಜೆಪಿ ಹಿರಿಯ ಮುಖಂಡ
– ಎಂ. ಸಿ. ಮಂಜುನಾಥ್
ಟಾಪ್ ನ್ಯೂಸ್
![KND-Amber-greece](https://www.udayavani.com/wp-content/uploads/2024/12/KND-Amber-greece-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು](https://www.udayavani.com/wp-content/uploads/2024/12/14-5-150x90.jpg)
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
![Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು](https://www.udayavani.com/wp-content/uploads/2024/12/Suspend-5-150x98.jpg)
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
![Rain-1](https://www.udayavani.com/wp-content/uploads/2024/12/Rain-1-150x90.jpg)
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
![8](https://www.udayavani.com/wp-content/uploads/2024/11/8-27-150x90.jpg)
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
![KND-Amber-greece](https://www.udayavani.com/wp-content/uploads/2024/12/KND-Amber-greece-150x90.jpg)
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
![Vidhana-Parishat](https://www.udayavani.com/wp-content/uploads/2024/12/Vidhana-Parishat-150x90.jpg)
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
![GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?](https://www.udayavani.com/wp-content/uploads/2024/12/ZOMETO-150x94.jpg)
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
![Surthkal-Spota](https://www.udayavani.com/wp-content/uploads/2024/12/Surthkal-Spota-150x90.jpg)
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.