ಕೈ ಭದ್ರಕೋಟೆಯಲ್ಲಿ ಬಿಜೆಪಿಗೆಷ್ಟು ಮತ?


Team Udayavani, Apr 22, 2019, 4:50 PM IST

kol-1

ಬಂಗಾರಪೇಟೆ: ಕೋಲಾರ ಲೋಕಸಭೆ ಕ್ಷೇತ್ರಕ್ಕೆ ಚುನಾವಣೆ ನಡೆದು ಮೂರು ನಾಲ್ಕು ದಿನಗಳು ಕಳೆದಿದ್ದು, ಫ‌ಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕು. ಈಗಾಗಲೇ ವಿಧಾನಸಭೆವಾರು ಎಷ್ಟೆಷ್ಟು ಮತದಾನವಾಗಿದೆ ಎಂಬ ಸ್ಪಷ್ಟ ಚಿತ್ರವೂ ಸಿಕ್ಕಿದೆ. ಇಷ್ಟು ದಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸ್ಥಳೀಯ ರಾಜಕೀಯ ಮುಖಂಡರು ಯಾವ ಪಕ್ಷಕ್ಕೆ ಎಷ್ಟು ಮತ ಬಂದಿರಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದಾರೆ.

ಬಂಗಾರಪೇಟೆ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 21ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿತ್ತು. ಜೆಡಿಎಸ್‌ 49 ಸಾವಿರ ಮತ ಪಡೆದು ಕಾಂಗ್ರೆಸ್‌ಗೆ ಪೈಪೋಟಿ ನೀಡಿ ಎರಡನೇ ಸ್ಥಾನ ಪಡೆದಿತ್ತು. ಬಿಜೆಪಿಯು ಕೇವಲ 33 ಸಾವಿರ ಮತ ಪಡೆದು ಮೂರನೇ ಸ್ಥಾನದಲ್ಲಿತ್ತು. ಎರಡನೇ ಬಾರಿಗೆ ಶಾಸಕರಾದ ಎಸ್‌.ಎನ್‌.ನಾರಾಯಣಸ್ವಾಮಿ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್‌ ಉಸ್ತುವಾರಿ ವಹಿಸಿದ್ದರು. ಕ್ಷೇತ್ರದ ಎಲ್ಲಾ ಗ್ರಾಪಂ ಕೇಂದ್ರಗಳಿಗೆ ಭೇಟಿ ನೀಡಿ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಪ್ರಚಾರ ನಡೆಸಿದ್ದರು. ಆದರೂ ಕಾಂಗ್ರೆಸ್‌ ಹವಾ ಕ್ಷೇತ್ರದಲ್ಲಿ ಎಲ್ಲೂ ಕಾಣಲಿಲ್ಲ.

ಕೈಗೆ ಜೆಡಿಎಸ್‌ ಓಟ್ ಬಂದಿದ್ಯಾ?: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇರುವುದರಿಂದ ಜೆಡಿಎಸ್‌ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲದೇ ಇದ್ದರೂ ಸ್ಥಳೀಯ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಕೆ.ಎಚ್.ಮುನಿಯಪ್ಪರಿಗೆ ಟಿಕೆಟ್ ತಪ್ಪಿಸಲು ಸ್ವೀಕರ್‌ ರಮೇಶ್‌ಕುಮಾರ್‌ ಜೊತೆ ಡೆಲ್ಲಿಯಲ್ಲಿ ಲಾಬಿ ಮಾಡಿದ್ದರು. ನಂತರ ನಡೆದ ವಿದ್ಯಾಮಾನಗಳಿಂದ ಕೆ.ಎಚ್.ಮುನಿಯಪ್ಪ ಹಾಗೂ ಎಸ್‌.ಎನ್‌.ನಾರಾಯಣಸ್ವಾಮಿ ಒಗ್ಗಟ್ಟು ಪ್ರದರ್ಶಿಸಿದರು. ಇದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಂದ ಮತಗಳು ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಬಂದಿವೆಯೇ, ಇದರ ಮೈತ್ರಿ ಪಕ್ಷ ಜೆಡಿಎಸ್‌ನ ಮತಗಳು ಮುನಿಯಪ್ಪಗೆ ಎಷ್ಟು ಬಂದಿರಬಹುದು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಮುಖಂಡರು ಮಗ್ನರಾಗಿದ್ದಾರೆ.

ಹಣ ಹಂಚಿಕೆ ಮಾಡಿಲ್ಲ: ಮತದಾರರಿಗೆ ಕಾಂಗ್ರೆಸ್‌ನಿಂದ 200 ರೂ.ರಿಂದ 300 ರೂ.ವರೆಗೆ ಹಂಚಲಾಗಿದೆ ಎಂಬ ಮಾತು ಕೇಳಿಬಂದಿದೆ. ಅದೇರೀತಿ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಬೂದಿಕೋಟೆ ಹೋಬಳಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡದೇ ಮುಖಂಡರು ಜೇಬಿಗೆ ಹಾಕಿಕೊಂಡಿದ್ದಾರೆ ಆರೋಪವೂ ಕೇಳಿ ಬಂದಿದೆ. ಹೀಗಾಗಿ ಇಲ್ಲಿನ ಕೆಲವು ಓಟು ಬಿಜೆಪಿಗೆ ಹೋಗಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ ಹಣ, ಬಿಜೆಪಿಗೆ ಓಟು: ಬಂಗಾರಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಪರ ಹಣ ಹಂಚಿಕೆ ಮಾಡಿಲ್ಲ. ನಮ್ಮ ಕೈಗೆ ಹಣವೇ ಬರಲಿಲ್ಲ, ಹಂಚೋದು ಎಲ್ಲಿಂದ ಬಂತು ಮಾತು ಸ್ಥಳೀಯ ಬಿಜೆಪಿ ಮುಖಂಡರಿಂದ ಕೇಳಿ ಬರುತ್ತಿದೆ. ದೇಶದಲ್ಲಿ ಪ್ರಧಾನಿ ಮೋದಿಯವರ ಅಲೆ ಹೆಚ್ಚಾಗಿದೆ. ಹೀಗಾಗಿ ಕಾಂಗ್ರೆಸ್‌ ಎಷ್ಟೇ ಹಣ ಹಂಚಿದ್ದರೂ, ಜನ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿಗೆ ಮತ ಚಲಾಯಿಸಲಿದ್ದಾರೆ ಎಂದು ಮಾತುಗಳೂ ಕೇಳಿ ಬರುತ್ತಿದೆ.

ವಿರೋಧಿ ಅಲೆ ಮತಗಳು ಬಿಜೆಪಿ?: ಕೋಲಾರ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಏಳು ಬಾರಿ ಗೆದ್ದರೂ ಸಹ ಬಂಗಾರಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಮಾಡಿಲ್ಲ ಎಂದು ಕಾಂಗ್ರೆಸ್‌ ಪಕ್ಷದವರೇ ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯೇ ಬಿಜೆಪಿ ಅಲೆ ಹೆಚ್ಚಿಸಿಕೊಳ್ಳಲು ಮೂಲ ಕಾರಣವಾಗಿದೆ. ಕೆ.ಎಚ್.ಮುನಿಯಪ್ಪ ವಿರೋಧ ಅಲೆ ಹೆಚ್ಚಾಗಿರುವ ಕಾರಣ ಸಾಮಾನ್ಯ ಜನರೂ ಈ ಬಾರಿ ಬಿಜೆಪಿ ಮತ ಹಾಕುವ ಇಂಗಿತ ವ್ಯಕ್ತಪಡಿಸಿರುವುದರಿಂದ ಬಿಜೆಪಿಗೆ ಹೆಚ್ಚಿನ ಮತಗಳು ಬರಲಿದೆ ಎಂಬ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ.

ಬಂಗಾರಪೇಟೆ ಕ್ಷೇತ್ರದ 259 ಬೂತ್‌ಗಳ ಪೈಕಿ ಕೆಲವು ಕಾಂಗ್ರೆಸ್‌ ಮುಖಂಡರು ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್‌ ಪರ ಪ್ರಚಾರ ಮಾಡದೇ ಬಿಜೆಪಿಗೆ ಮತ ಹಾಕಿಸುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದರೂ ಬಂಗಾರಪೇಟೆ ಕ್ಷೇತ್ರವು ಕಾಂಗ್ರೆಸ್‌ ಭದ್ರಕೋಟೆಯಾಗಿರುವುದರಿಂದ ತಪ್ಪದೇ ಕಾಂಗ್ರೆಸ್‌ಗೆ ಮತಗಳು ಹೆಚ್ಚಾಗಿ ಬಂದಿವೆ ಹಾಗೂ ಬಿಜೆಪಿಯವರು ಬೂತ್‌ ಮಟ್ಟದ ಕಾರ್ಯಕರ್ತರು ಹಾಗೂ ಮುಖಂಡರು ಇಲ್ಲದೇ ಇರುವುದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಲೀಡ್‌ ಬರಲಿದೆ ಎಂಬ ವಿಶ್ವಾಸ ಸ್ಥಳೀಯ ಕೈಮುಖಂಡರಲ್ಲಿದೆ.

ಒಟ್ಟಾರೆಯಾಗಿ ತಾಲೂಕಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷ ನಾಮುಂದು ತಾಮುಂದು ಎಂದು ಹೇಳಿಕೊಳ್ಳುತ್ತಿದೆ. ಆದರೆ, ಮತದಾರ ಪ್ರಭು ಯಾವ ಪಕ್ಷಕ್ಕೆ ಹೆಚ್ಚಿನ ಮತ ನೀಡಿದ್ದಾರೆ ಎಂಬ ಫ‌ಲಿತಾಂಶ ತಿಳಿಯಲು ಮೇ 23ರವರೆಗೂ ಕಾಯಲೇಬೇಕು.

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.