ರೈತ ಸಂಘಕ್ಕೆ ಕೋಡಿಹಳ್ಳಿ ರಾಜೀನಾಮೆ ನೀಡಲಿ
Team Udayavani, May 28, 2022, 3:40 PM IST
ಕೋಲಾರ: ರೈತ ಸಂಘದ ನಾಯಕ ಎಂದು ಹೇಳಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಮೇಲೆಹೊತ್ತಿರುವ ಬಹುಕೋಟಿ ಲಂಚದ ಆರೋಪ ಮುಕ್ತವಾಗುವ ತನಕ ಯಾವುದೇ ಕಾರಣಕ್ಕೂ ಹಸಿರುಶಾಲು ಹಾಕಬಾರದು. ಜೊತೆಗೆ ರೈತ ಸಂಘಕ್ಕೆರಾಜೀನಾಮೆ ಕೊಟ್ಟು ಸಾರ್ವಜನಿಕ ಜೀವನದಿಂದಹೊರಗಿರಬೇಕು. ಇಲ್ಲವಾದರೆ ಅವರು ಭಾಗವಹಿಸುವ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮುತ್ತಿಗೆಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಎಚ್ಚರಿಕೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ನಡೆದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯುವ ಸಲುವಾಗಿ 35 ಕೋಟಿ ಲಂಚ ಪಡೆದು ನೌಕರರಿಗೆ ಮತ್ತುರೈತ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಅದೇ ರೀತಿಬೆಂಗಳೂರು ಸಿಟಿ ಮಾರುಕಟ್ಟೆಯ ಸೊಪ್ಪಿನಹೋರಾಟದಿಂದ ತಿಂಗಳಿಗೆ 60 ಸಾವಿರ ಪಡೆಯುತ್ತಾಇದ್ದು, ಇದು ದಾಖಲೆ ಸಮೇತ ರೈತರು ಬಹಿರಂಗ ಪಡಿಸಿದ್ದರು. ಇಂತಹವರು ರೈತರ ಹೆಸರು ಹೇಳುವುದಕ್ಕೂ ಯೋಗ್ಯತೆ ಇಲ್ಲ ಎಂದರು.
ಲಂಚಕ್ಕಾಗಿ ಮಾತ್ರ ಹೋರಾಟ: ಬರೀ ಲಂಚಕ್ಕಾಗಿ ಮಾತ್ರ ಹೋರಾಟಗಳನ್ನು ಮಾಡುವ ಕೋಡಿಹಳ್ಳಿ ಚಂದ್ರಶೇಖರ್ ಸಾವಿರಾರು ಸಾರಿಗೆ ನೌಕರರು ಬೀದಿಗೆ ಬೀಳುವಂತೆ ಮಾಡಿದ್ದಲ್ಲದೆ, ಓರ್ವ ನೌಕರ ಅಮಾನುಷವಾಗಿ ಬಲಿಪಡೆದುಕೊಂಡಿದ್ದಲ್ಲದೆ ನಾಲ್ಕು ನಿಗಮದಲ್ಲಿ ಸುಮಾರು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಹೊಣೆಗಾರರಾಗಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಆರಂಭದಲ್ಲಿ ರಸ್ತೆ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷನಾಗಿ ನೇತೃತ್ವ ವಹಿಸಿಕೊಂಡು ಭ್ರಷ್ಟಾಚಾರಮಾಡಿದ್ದಾರೆ. ಸಾರಿಗೆ ನೌಕರರಿಗೂ ರೈತ ಮುಖಂಡ ಎನಿಸಿಕೊಂಡಿರುವ ಕೋಡಿಹಳ್ಳಿಗೂ ಯಾವುದೇ ಸಂಬಂಧ ಇಲ್ಲ. ಆದರೂ, ಹಣಕ್ಕಾಗಿ ಹೋರಾಟದ ನೇತೃತ್ವವನ್ನು ವಹಿಸಿದ್ದ ಎಂದು ಆರೋಪಿಸಿದರು.
ಕಾನೂನು ಕ್ರಮಕೈಗೊಳ್ಳಿ: ಇತ್ತಿಚಿಗೆ ಖಾಸಗಿ ಸುದ್ದಿವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸತತವಾಗಿ ದೆಹಲಿಯ ನಾಲ್ಕು ಗಡಿಗಳಲ್ಲಿ ಸುಮಾರು 1 ವರ್ಷಕ್ಕೂ ಹೆಚ್ಚು ಕಾಲ ನಡೆದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸುಪಡೆಯುವಂತಾ ಹೋರಾಟದಲ್ಲಿ ಸುಮಾರು 3000 ಕೋಟಿ ನೀಡಿದರೆ, ಅಲ್ಲಿಯ ಹೋರಾಟವನ್ನುಸ್ಥಗಿತಗೊಳಿಸಲು ನಾನು ಸಿದ್ಧನಿದ್ದೇನೆ. ಈಗಾಗಲೇ ನಾನು ಅಲ್ಲಿನ ರೈತ ಹೋರಾಟಗಾರರನ್ನು ಮಾತನಾಡಿದ್ದೇನೆ ಎಂದು ಹೇಳಿರುವುದು ಖಂಡನೀಯ.
ರೈತ ಸಂಘದ ಮುಂಚೂಣಿ ನಾಯಕನಾಗಿ ರೈತ ಸಮುದಾಯಕ್ಕೆಹಸಿರು ಶಾಲುಗಳಿಗೆ ಅವಮಾನ ಮಾಡಿದ್ದಾನೆ. ಇವನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಮಾಲೂರುತಾಲೂಕು ಅಧ್ಯಕ್ಷ ಹರೀಶ್, ಬಂಗಾರಪೇಟೆ ತಾಲೂಕುಅಧ್ಯಕ್ಷ ತಿಮ್ಮಾರೆಡ್ಡಿ, ಮುಖಂಡರಾದ ಕೃಷ್ಣಮೂರ್ತಿ, ಸುಕನ್ಯಾ, ಗುರಪ್ಪ ಹಾಜರಿದ್ದರು.
ಕೋಡಿಹಳ್ಳಿ ಚಂದ್ರಶೇಖರ್ ಹೋರಾಟ ಪ್ರಾರಂಭ ಮಾಡುತ್ತಾರೆ, ಹೋರಾಟದಿಂದ ಜಯ ಸಿಗುವ ತನಕ ಮಾಡಲ್ಲ. ಬರೀ ಲಂಚದ ಹೋರಾಟಗಳಾಗಿವೆ. ನಾವು ಹಸಿರು ಶಾಲು ಸಮಾಜಿಕ ಕಳಕಳಿಯಿಂದ ಹಾಕಿಕೊಂಡು ರೈತರ ಸಮಸ್ಯೆಗಳಿಗೆ ಹೋರಾಟ ಮಾಡಿದರೆ, ಇನ್ನೂ ಕೆಲವರು ಸಂಪಾದನೆಗಾಗಿ ಹಸಿರು ಶಾಲುಗಳನ್ನು ಹಾಕಿಕೊಂಡಿದ್ದಾರೆ.-ಬೆಡಶೆಟ್ಟಿಹಳ್ಳಿ ರಮೇಶ್, ರೈತ ಸಂಘದ ಜಿಲ್ಲಾ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.