ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ
Team Udayavani, Jun 26, 2020, 6:53 AM IST
ಬಂಗಾರಪೇಟೆ: ಮಾನದಂಡ ಉಲ್ಲಂಘಿಸಿ ಕಟ್ಟಡ ನಿರ್ಮಿಸಲಾಗುತ್ತಿದೆ. ಹೀಗಾಗಿ ಕೆಲಸ ಸ್ಥಗಿತಗೊಳಿಸಲು ಮುಂದಾದ ಪುರಸಭೆ ಅಧಿಕಾರಿಗಳು ಮತ್ತು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಆಡಳಿತ ಮಂಡಳಿ ನಡುವೆ ವಾಗ್ವಾದ ನಡೆಯಿತು. ಪಟ್ಟಣದ ಕೋಲಾರ ಮುಖ್ಯ ರಸ್ತೆಯಲ್ಲಿರುವ ಟಿಎಪಿಸಿಎಂಎಸ್, ಗೋಡೌನ್ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸುತ್ತಿದೆ.
ಆದರೆ, ಪುರಸಭೆಯಿಂದ 4 ಅಂಗಡಿಗಳಿಗೆ ಲೈಸನ್ಸ್ ಪಡೆದು, ಅಳತೆಗೂ ಮೀರಿ 12 ಮಳಿಗೆ ನಿರ್ಮಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ವಿ.ಶ್ರೀಧರ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸ್ಥಳದಲ್ಲಿದ್ದ ಟಿಎಪಿಸಿಎಂಎಸ್ ನಿರ್ದೇಶಕ ಎಂ.ಎಸ್.ಆನಂದ್, ಅಧ್ಯಕ್ಷ ಮಾರ್ಕಂಡೇಯಗೌಡ ನೇತೃತ್ವದ ಸದಸ್ಯರ ಸಮಿತಿ ತೀರ್ಮಾನದಂತೆ ಕಟ್ಟಡ ನಿರ್ಮಿಸಲಾಗುತ್ತಿದೆ. ಪುರಸಭೆಗೆ ಎಲ್ಲಾ ಶುಲ್ಕ ಕಟ್ಟಲಾಗಿದೆ.
ಆದರೂ ರಾಜಕೀಯ ಒತ್ತಡಗಳಿಗೆ ಮಣಿದು ತೊಂದರೆ ನೀಡುತ್ತಿದ್ದೀರಿ ಎಂದು ಗಂಭೀರ ಆರೋಪ ಮಾಡಿದರು. ಪುರಸಭೆ ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್ ಆರ್. ಜಗದೀಶರೆಡ್ಡಿ ಅವರನ್ನು ಕರೆಯಿಸಿ, ಕೆಲಸ ನಿಲ್ಲಿಸಲು ಹೇಳಿದರು. ಆದರೆ, ಕೆಲಸ ನಿಲ್ಲಿಸಲು ಸಾಧ್ಯವಿಲ್ಲ. ಈ ಸಂಬಂಧ ಆದೇಶ ಇದ್ದರೆ ಕೊಡಿ ಎಂದು ಆನಂದ್ ಕೇಳಿದಾಗ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಟಿಎಪಿಸಿಎಂಎಸ್, ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿರುವ ಮುಖ್ಯಾಧಿಕಾರಿ, ಮುಂದಿನ ಆದೇಶದವರೆಗೂ ಕಟ್ಟಡ ಕಾಮಗಾರಿ ನಡೆಯದಂತೆ ನೋಡಿಕೊಳ್ಳುವಂತೆ ತಿಳಿಸಿದರು. ಟಿಎಪಿಸಿಎಂಎಸ್ ಸಿಇಒ ಸಂಬಂಧಪಟ್ಟ ದಾಖಲೆಗಳನ್ನು ಪುರಸಭೆಗೆ ನೀಡುವಂತೆ ತಿಳಿಸಿದ ನಂತರ ಕಾಮಗಾರಿ ನಿಲ್ಲಿಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.