ಶಾಲಾ ಮಕ್ಕಳನ್ನು ಸುಸ್ಥಿತಿಯ ವಾಹನದಲ್ಲಿ ಸಾಗಿಸಿ

ಖಾಸಗಿ ಶಾಲಾ ಶಿಕ್ಷಣ ಮಂಡಳಿಗೆ ಎಸ್ಪಿ ಮಹಮ್ಮದ್‌ ಸುಜೀತ ಸೂಚನೆ

Team Udayavani, Jul 1, 2019, 3:05 PM IST

kolar-tdy-4..

ಬಂಗಾರಪೇಟೆ ದಿ ಜೈನ್‌ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಖಾಸಗಿ ಶಾಲಾ- ಕಾಲೇಜುಗಳ ವಾಹನಗಳ ಸುಸ್ಥಿತಿ ಬಗ್ಗೆ ಕೆಜಿಎಫ್ ಪೊಲೀಸ್‌ ಜಿಲ್ಲಾ ಎಸ್ಪಿ ಎಂ.ಎಸ್‌.ಮಹಮ್ಮದ್‌ ಸುಜೀತ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದರು.

ಬಂಗಾರಪೇಟೆ: ಶಾಲಾ ಮಕ್ಕಳನ್ನು ಕರೆದೊಯ್ಯಲು ಸುರಕ್ಷತವಲ್ಲದ, ಬಸ್‌, ಆಟೋ ಮತ್ತಿತರ ವಾಹನ ಬಳಕೆ ಮಾಡಿದ್ದಲ್ಲಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಕೆಜಿಎಫ್ ಪೊಲೀಸ್‌ ಜಿಲ್ಲಾ ಎಸ್ಪಿ ಎಂ.ಎಸ್‌.ಮಹಮ್ಮದ್‌ ಸುಜೀತ ಖಾಸಗಿ ಶಾಲೆಗಳ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ದಿ ಜೈನ್‌ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಖಾಸಗಿ ಶಾಲಾ-ಕಾಲೇಜುಗಳ ವಾಹನಗಳ ಸುಸ್ಥಿತಿಗಳ ಪರಿವೀಕ್ಷಣೆ ಹಾಗೂ ಆಡಳಿತ ಮಂಡಳಿಗಳಿಗೆ ತಿಳಿವಳಿಕೆ ನೀಡುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಏನೇ ತೊಂದರೆಯಾದ್ರೂ ಆ ಸಂಸ್ಥೆಗಳೇ ನೇರ ಹೊಣೆ ಎಂದು ಹೇಳಿದರು.

ಬಹುತೇಕ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಬಳಸುತ್ತಿರುವ ವಾಹನಗಳು ಹೊರರಾಜ್ಯಗಳಲ್ಲಿ ಖರೀದಿ ಮಾಡಿದ್ದಾಗಿವೆ. ಅವುಗಳು ಈಗಾಗಲೇ ಬಳಕೆ ಮಾಡಿ ಗುಜರಿಗೆ ಹಾಕಬೇಕಿರುವ ವಾಹನಗಳಾಗಿರುತ್ತವೆ. ಇದು ಮಕ್ಕಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಹೊಸ ಬಸ್‌ಗಳನ್ನು ಖರೀದಿ ಮಾಡಿ ಸಾಗಣೆ ಮಾಡಬೇಕು ಎಂದು ಸಲಹೆ ನೀಡಿದರು.

ಸಣ್ಣ ವಾಹನ ಬಳಸಿ: ಕೆಲವು ಶಿಕ್ಷಣ ಸಂಸ್ಥೆಗಳು ಪಟ್ಟಣದಲ್ಲಿನ ವಿದ್ಯಾರ್ಥಿಗಳನ್ನು ಕರೆದೊಯ್ಯಲು ದೊಡ್ಡ ಬಸ್‌ಗಳನ್ನು ಬಳಕೆ ಮಾಡುತ್ತಿವೆ. ಇದರಿಂದ ಪಟ್ಟಣದಲ್ಲಿನ ಕಿರಿದಾದ ರಸ್ತೆಗಳಲ್ಲಿ ಹೋಗಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಟ್ರಾಫಿಕ್‌ ಸಮಸ್ಯೆ ಉಂಟಾಗಿ ಜನರ ಓಡಾಟಕ್ಕೂ ತೊಂದರೆಯಾಗುತ್ತದೆ. ಹೀಗಾಗಿ ಸಣ್ಣ ವಾಹನಗಳನ್ನು ಬಳಕೆ ಮಾಡುವಂತೆ ಕಿವಿಮಾತು ಹೇಳಿದರು.

ದಾಖಲೆ ಸರಿ ಇರಲಿ: ಒಂದು ಆಟೋದಲ್ಲಿ 6 ಮಕ್ಕಳನ್ನು ಮಾತ್ರ ಸಾಗಿಸಬೇಕು. ನಿಯಮಿತವಾಗಿ, ಸುಸ್ಥಿತಿಯಲ್ಲಿರುವ ವಾಹನದಲ್ಲಿ, ಅದರಲ್ಲೂ ಎಲ್ಲಾ ದಾಖಲೆಗಳು, ಕಡ್ಡಾಯವಾಗಿ ವಿಮೆ ಮಾಡಿರಬೇಕು. ಎಫ್ಸಿ ಮಾಡಿಸಿರಬೇಕು, ತಪ್ಪಿದ್ದಲ್ಲಿ ಅಂತಹ ಆಟೋ ಚಾಲಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 18 ವರ್ಷದೊಳಗಿನ ಮಕ್ಕಳಿಗೆ ವಾಹನಗಳನ್ನು ಕೊಡಬಾರದು ಎಂದು ಹೇಳಿದರು. ಜೈನ್‌ ಇಂಟರ್‌ ನ್ಯಾಷನಲ್ ಶಾಲಾ ಆವರಣದಲ್ಲಿ ಕೆಜಿಎಫ್ ಪೊಲೀಸ್‌ ಜಿಲ್ಲಾ ಅಧಿಕಾರಿಗಳು ಖಾಸಗಿ ಶಾಲೆಗಳ ಎಲ್ಲಾ ವಾಹನಗಳನ್ನು ಪರಿವೀಕ್ಷಣೆ ಮಾಡಿದರು. ಕೆಲವು ಶಾಲೆಗಳ ಬಸ್‌ಗಳು ತೀವ್ರ ಹಳೆಯದಾಗಿದ್ದು, ಸುರಕ್ಷತೆ ಇಲ್ಲದೇ ಇರುವ ಬಸ್‌ಗಳನ್ನು ನೋಡಿ ಎಸ್ಪಿ ಎಂ.ಎಸ್‌.ಮಹಮ್ಮದ್‌ ಸುಜೀತ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳೇ ಗೈರು: ಪಟ್ಟಣದ 25ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪರಿವೀಕ್ಷಣೆಗೆ ಬಂದಿದ್ದ ಬಸ್‌, ಆಟೋಗಳ ಚಾಲಕರು ಹಾಜರಿದ್ದರೂ ಮುಖ್ಯವಾಗಿ ಬರಬೇಕಿದ್ದ ಸಾರಿಗೆ ಅಧಿಕಾರಿಗಳೇ ಗೈರಾಗಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಎಸ್ಪಿ ಸುಜೀತ ಅಸಮಾಧಾನ ವ್ಯಕ್ತಪಡಿಸಿದರು.

ಕೆಜಿಎಫ್ ಜಿಲ್ಲಾ ಡಿವೈಎಸ್‌ಪಿ ಬಿ.ಎಲ್.ಶ್ರೀನಿವಾಸಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ, ಶಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣ, ಸಬ್‌ಇನ್ಸ್‌ಪೆಕ್ಟರ್‌ ಆರ್‌.ದಯಾನಂದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.