ವೈನ್ಸ್ ಸ್ಟೋರ್ ಗಳಲ್ಲಿನ ದಾಸ್ತಾನು ಪರಿಶೀಲನೆ
ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವ ಬಾರ್ ಮಾಲಿಕರಲ್ಲಿ ಆತಂಕ
Team Udayavani, Apr 30, 2020, 5:17 PM IST
ಸಾಂದರ್ಭಿಕ ಚಿತ್ರ
ಕೆಜಿಎಫ್: ದುಬಾರಿ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರ ಜೊತೆಗೆ ಇತ್ತೀಚೆಗೆ ತಾಲೂಕಿನಲ್ಲಿ ಮದ್ಯದಂಗಡಿಗಳಿಗೆ ಕನ್ನಾ ಹಾಕುವ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಘಟನೆಗಳು ಕಳ್ಳರಿಂದಲೋ ಅಥವಾ ಬಾರ್ ಮಾಲಿಕರಿಂದ ನಡೆಯುತ್ತಿದೆಯೋ ಎಂಬ ಸಂಶಯ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಮಂಗಳವಾರದಿಂದ ನಗರದ ವಿವಿಧ ಬಾರ್ ಮತ್ತು ವೈನ್ಸ್ ಸ್ಟೋರ್‌ಗಳ ಮೇಲೆ ದಾಳಿ ನಡೆಸಿ, ಮದ್ಯ ದಾಸ್ತಾನು (ಸ್ಟಾಕ್) ಪರಿಶೀಲಿಸಲು ಮುಂದಾಗಿದ್ದು, ಅಂಗಡಿ ಮಾಲಿಕರೇ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿದೆ. ಇದರಿಂದ ರಾಜ್ಯ ಅಬಕಾರಿ ಆಯುಕ್ತರು ಎಲ್ಲಾ ಮದ್ಯದಂಗಡಿಗಳಲ್ಲಿರುವ ದಾಸ್ತಾನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಒಂದನೇ ಅಡ್ಡರಸ್ತೆಯಲ್ಲಿರುವ ಲಿಕ್ಕರ್ ಕಾರ್ನರ್ ಎಂಬ ವೈನ್ಸ್ ಸ್ಟೋರ್ಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು, ಕಡತ ಹಾಗೂ ಅಂಗಡಿಯಲ್ಲಿರುವ ಸ್ಟಾಕ್‌ಗಳ ಪರಿಶೀಲನೆ ನಡೆಸಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಸೀಲ್ ಮಾಡುವ ಸಂದರ್ಭದಲ್ಲಿ ಅಂಗಡಿಯಲ್ಲಿನ ದಾಸ್ತಾನು ಪಟ್ಟಿಯನ್ನು ತೆಗೆದುಕೊಂಡ ನಂತರ ಸೀಲ್ ಮಾಡಬೇಕು ಎಂಬ ನಿಯಮವಿದ್ದರೂ ಸೀಲ್ ಹಾಕುವ ವೇಳೆ ಸರ್ಕಾರದ ಆದೇಶವನ್ನು ಪಾಲಿಸದೆ, ಕೇವಲ ಅಂಗಡಿಗಳಿಗೆ ಸೀಲ್ ಮಾಡಲಾಗಿದೆ. ಆದ್ದರಿಂದ ಕೆಲವು ಅಂಗಡಿ ಮಾಲಿಕರು ಮದ್ಯದ ಬಾಟಲಿಗಳನ್ನು ಕಳ್ಳ ಮಾರ್ಗದಲ್ಲಿ ಹೊರ ತಂದು ಮಾರಾಟ ಮಾಡಲು ಅನುಕೂಲವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.