ಕೇಂದ್ರದಿಂದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು


Team Udayavani, Nov 15, 2022, 2:55 PM IST

tdy-14

ಬಂಗಾರಪೇಟೆ: ಕೇಂದ್ರ ಬಿಜೆಪಿ ಸರ್ಕಾರವು ದೇಶದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ದೇಶದಲ್ಲಿ ಪ್ರತಿ ವರ್ಷವೂ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಶಾಲಾ ಕಟ್ಟಡಗಳನ್ನು ನಿರ್ಮಿ ಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಹೇಳಿದರು.

ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಸೋಮವಾರ ಮಕ್ಕಳ ದಿನದ ಅಂಗವಾಗಿ ಗ್ರಾಪಂ ಸದಸ್ಯ ಎಚ್‌.ಆರ್‌.ಶ್ರೀನಿವಾಸ್‌ ಹಾಗೂ ಸುರೇಶ್‌ ಬಾಬು ಅವರು ನೀಡಿ ರುವ ಉಚಿತ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದರು. ಎಲ್ಲಾ ದಾನಗಳಿಗಿಂತ ವಿದ್ಯಾದಾನ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ಪೈಪೋಟಿಯಾಗಿ ಬಡ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಇಂದಿನ ಆಧುನಿಕ ಯುಗದಲ್ಲಿ ಮುಖ್ಯವಾಗಿ ಮಕ್ಕಳು ಮೊಬೈಲ್‌ ವ್ಯಾಮೋಹವನ್ನು ಬದಿಗಿಟ್ಟು ಹೆಚ್ಚು ಹೆಚುÌ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ತಾಲೂಕಿನಲ್ಲಿಯೂ ಸಹ 21 ಶಾಲೆಗಳಲ್ಲಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್‌ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನದ ಮಂಜೂರು ಆಗುತ್ತಿದೆ. ಶಾಲಾ ಕೊಠಡಿಗಳ ರಿಪೇರಿ ಕಾರ್ಯಕ್ಕೆ 2.5 ಲಕ್ಷ ಅನುದಾನವನ್ನು ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆಯೇ ಕೆಲಸವನ್ನು ಆರಂಭಿಸಿ ಎಂದು ಹೇಳಿದರು.

ಗ್ರಾಪಂ ಸದಸ್ಯ ಹುಣಸನಹಳ್ಳಿ ಎಚ್‌.ಆರ್‌. ಶ್ರೀನಿವಾಸ್‌, ಹುಲಿಬೆಲೆ ಎಂ.ಸುರೇಶ್‌, ಕೀಲುಕೊಪ್ಪ ಸುರೇಂದ್ರ, ವಿಎಸ್‌ಎಸ್‌ಎನ್‌ ಅಧ್ಯಕ್ಷ ಮುನಿಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್‌, ಹಾಲು ಡೇರಿ ಅಧ್ಯಕ್ಷ ರಮೇಶ್‌, ಮುಖ್ಯ ಶಿಕ್ಷಕಿ ಪ್ರೇಮಲತಾ, ಶಿಕ್ಷಕಿರಾದ ಸರಸ್ವತಿ, ಅನಿತಾ, ಸತ್ಯಲೀಲಾ, ನಾಗರತ್ನಮ್ಮ, ನಿವೃತ್ತ ಶಿಕ್ಷಕಿ ರಾಣಿ ಜಲಜ, ಮುಖಂಡರಾದ ಸುರೇಶ್‌ಬಾಬು, ಸತೀಶ್‌ಗೌಡ, ಸಿ.ರಾಮಚಂದ್ರ, ಕೃಷ್ಣಪ್ಪ, ಕಾರ್ಯದರ್ಶಿ ಶ್ರೀನಿವಾಸ್‌, ಆನಂದ್‌, ರಾಜು, ಮೂರ್ತಿ ಇತರರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.