![ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ](https://www.udayavani.com/wp-content/uploads/2024/12/Ivan-D-415x296.jpg)
ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ
Team Udayavani, Oct 18, 2021, 4:43 PM IST
![ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ](https://www.udayavani.com/wp-content/uploads/2021/10/Untitled-1-348-620x372.jpg)
ಕೋಲಾರ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಮುಂಜಾನೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಜಗಳದಲ್ಲಿ ಹಲವರಿಗೆ ರಕ್ತ ಗಾಯಗಳಾಗಿದೆ.
ಅಪರಂಜಿ ನಾರಾಯಣಸ್ವಾಮಿ ಮತ್ತು ಗಂಗಾಧರ ಬಣಗಳ ಮಧ್ಯೆ ಜಗಳ ನಡೆದಿದೆ. ಇವರ ಪರವಾಗಿ ಅಮರ್ ಮತ್ತು ಬಾಲು ಗುಂಪಿನವರು ಹೊಡೆದಾಡಿ ಕೊಂಡಿದ್ದಾರೆ.
ಜಗಳದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಐವರು ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ದೂರು ನೀಡಲು ಬಂದ ವೇಳೆ ಆಸ್ಪತ್ರೆಯಲ್ಲಿಯೂ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳಿ ಅಲ್ಲಿಯೂ ಪರಸ್ಪರ ಹೊಡೆದಾಟ ನಡೆದಿದೆ.
ಎರಡು ಗುಂಪಿನ ಯುವಕರು ಆಸ್ಪತ್ರೆ ಸಿಬ್ಬಂದಿಯ ಬುದ್ಧಿಮಾತನ್ನು ಲೆಕ್ಕಿಸದೆ ತಳ್ಳಾಡಿ ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಘಟಕದ ಪೀಠೋಪಕರಣ ಗಳು ಹೊಡೆದಾಟಕ್ಕೆ ಬಳಕೆಯಾಗಿದೆ. ಇವೆಲ್ಲ ಘಟನಾವಳಿಗಳು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ಗುಂಪುಗಳ ಗಲಾಟೆಗೆ ಹಳೆಯ ವೈಷಮ್ಯ ಕಾರಣ ಎಂದು ತಿಳಿದುಬಂದಿದೆ.
ಈ ಗಲಾಟೆಯಿಂದಾಗಿ ಬೂದಿ ಮುಚ್ಚಿದ ಕೆಂಡದಂತ್ತಾಗಿರುವ ಕಠಾರಿಪಾಳ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ.
ಟಾಪ್ ನ್ಯೂಸ್
![ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ](https://www.udayavani.com/wp-content/uploads/2024/12/Ivan-D-415x296.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು](https://www.udayavani.com/wp-content/uploads/2024/12/14-5-150x90.jpg)
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
![Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು](https://www.udayavani.com/wp-content/uploads/2024/12/Suspend-5-150x98.jpg)
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
![Rain-1](https://www.udayavani.com/wp-content/uploads/2024/12/Rain-1-150x90.jpg)
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
![8](https://www.udayavani.com/wp-content/uploads/2024/11/8-27-150x90.jpg)
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.