ಕಸ ಹಾಕುವ ಸ್ಥಳದಲ್ಲಿ ರಂಗೋಲಿ: ಜಾಗೃತಿ
ನಗರಸಭೆ ಅಧ್ಯಕ್ಷ, ಪೌರಾಯುಕ್ತ, ಸದಸ್ಯರಿಂದ ಸ್ವಚ್ಛತೆ ಅರಿವು
Team Udayavani, Feb 6, 2021, 2:50 PM IST
ಮುಳಬಾಗಿಲು: ನಗರದ ಸ್ವಚ್ಛತೆಗೆ ಆದ್ಯತೆ ನೀಡಲು ಮುಂದಾಗಿರುವ ನಗರಸಭೆ, ಅಧಿಕಾರಿಗಳು, ಪೌರಾಯುಕ್ತರು, ಅಧ್ಯಕ್ಷ ರಿಯಾಜ್ ಅಹಮದ್ ನೇತೃತ್ವದಲ್ಲಿ ಜನರು ಕಸ ಹಾಕುವ ಸ್ಥಳದಲ್ಲಿ ಸ್ವತ್ಛಗೊಳಿಸಿ ಸಗಣಿಯಿಂದ ಸಾರಿಸಿ ರಂಗೋಲಿ ಹಾಕುವ ಮೂಲಕ ವಿನೂತನ ಜನಜಾಗೃತಿ ಮೂಡಿ ಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ರಿಯಾಜ್ ಅಹಮದ್ ಮತ್ತು ಪೌರಾಯುಕ್ತ ಶ್ರೀನಿವಾಸಮೂರ್ತಿ, ನಗರಸಭೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಮನೆ, ಹೋಟೆಲ್, ಬೇಕರಿ, ಅಂಗಡಿಗಳು, ಮಾರುಕಟ್ಟೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕರು ರಸ್ತೆ,ಸಾರ್ವಜನಿಕ ಸ್ಥಳಗಳು ಅಥವಾ ಖಾಲಿ ನಿವೇಶನಗಳಲ್ಲಿ ಹಾಕಬಾರದು ಎಂದು ಹಲವು ಬಾರಿ ಸೂಚನೆ ನೀಡಿದ್ದರೂ ಕೆ.ಬೈಯಪಲ್ಲಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ತರಕಾರಿ ಮಾರಾಟಗಾರರು ಪ್ರತಿನಿತ್ಯ ರಸ್ತೆಯಲ್ಲಿ ಹಾಕುತ್ತಿದ್ದರು.
ಇದರಿಂದ ರಸ್ತೆಯಲ್ಲಿ ಕಸದ ರಾಶಿ ಹೆಚ್ಚಾಗಿ ವಾಹನಗಳ ಓಡಾಟಕ್ಕೆ ತೊಂದರೆ ಯಾಗುತ್ತಿದೆಯಲ್ಲದೇ ಕೊಳೆತ ತರಕಾರಿಗಳ ದುರ್ವಾಸನೆಯಿಂದ ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗುತ್ತಿದೆ.ಅರಿವು ಮೂಡಿಸಲು ಕಸ ಹಾಕುವ ಸ್ಥಳವನ್ನು ಸ್ವತ್ಛಗೊಳಿಸಿ ಸಗಣಿಯಿಂದ ಸಾರಿಸಿ ರಂಗೋಲಿ ಹಾಕುವ ಮೂಲಕ ಸ್ವಚ್ಚತೆ ಕುರಿತು ಅರಿವು ಮೂಡಿಸಿದರು.
ಇದನ್ನೂ ಓದಿ :ತಾಪಂ ಸದಸ್ಯರ ಸಾಮೂಹಿಕ ಗೈರು: ಸಭೆ ಮುಂದೂಡಿದ ಅಧ್ಯಕ್ಷೆ
ನಗರಸಭೆ ಅಧಿಕೃತ ವ್ಯಕ್ತಿಗಳು ಸಂಗ್ರಹಿಸುವವರಗೂ ಕಸವನ್ನು ತಮ್ಮ ಮನೆಗಳು ಮತ್ತು ಅಂಗಡಿಗಳ ಆವರಣದಲ್ಲೇ ಇಟ್ಟುಕೊಂಡು ಒಣಕಸ ಮತ್ತು ಹಸಿ ಕಸವನ್ನು ವಿಗಂಡಿಸಿ ನೀಡಬೇಕು ಎಂದು ಹೇಳಿದರು. ನಗರಸಭೆ ಎಇಇ ವೆಂಕಟೇಶ್,ನೋಡಲ್ ಅಧಿಕಾರಿ ಸುನೀಲ್‌ಕುಮಾರ್, ಕಿರಿಯ ಆರೋಗ್ಯ ನಿರೀಕ್ಷಕ ಮೇರಿ, ಪ್ರತಿಭಾ, ಶಿವಾರೆಡ್ಡಿ ಹಾಗೂ ಸಿಬ್ಬಂದಿ ಮತ್ತು ಕಾರ್ಮಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.