ಅಡ್ಡದಾರಿಯಲ್ಲಿ ಬಂದು ಮದ್ಯ ಖರೀದಿ
Team Udayavani, May 12, 2020, 1:18 PM IST
ಮುಳಬಾಗಿಲು: ತಾಲೂಕು ಗಡಿಗೆ ಹೊಂದಿಕೊಂಡ ಆಂಧ್ರದಲ್ಲಿ ಕೊರೊನಾ ಸೋಂಕಿತರು ಇದ್ದರೂ ಚೆಕ್ ಪೋಸ್ಟ್ ತಪ್ಪಿಸಿ ಅಡ್ಡದಾರಿಗಳಲ್ಲಿ ಬಂದು ಬಾರ್‌ಗಳಲ್ಲಿ ಮದ್ಯ ಖರೀದಿಸುತ್ತಿದ್ದಾರೆ. ಇದು ಸ್ಥಳೀಯರಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ. ಆಂಧ್ರದ ಚಿತ್ತೂರು ಜಿಲ್ಲೆಯ ವಿ.ಕೋಟೆ ವ್ಯಾಪ್ತಿ ಯಲ್ಲಿ 9 ಮತ್ತು ರಾಮಸಮುದ್ರಂ ವ್ಯಾಪ್ತಿಯಲ್ಲಿ ಮೂವರು ಕೊರೊನಾ ಸೋಂಕಿತರು ಇದ್ದಾರೆ.
ಗ್ರೀನ್ ಜೋನ್‌ನಲ್ಲಿರುವ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ತಾಲೂಕಿನ ಆಂಧ್ರ ಗಡಿಯಲ್ಲಿರುವ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ತಾಲೂಕು ಆಡಳಿತ ಲಾಕ್‌ಡೌನ್ ಮಾಡಿ ಕರ್ನಾಟಕದಿಂದ ಆಂಧ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸೇರಿದಂತೆ ಹಳ್ಳಿ ರಸ್ತೆಗಳಲ್ಲಿಯೂ ಚೆಕ್ ಪೋಸ್ಟ್ ಹಾಕಿ ಜನರ ಸಂಚಾರ ನಿರ್ಬಂಧಿಸಿದ್ದಾರೆ.
ಇಷ್ಟಾದರೂ ಆಂಧ್ರದ ಜನರು ತಾಲೂಕಿನ ಬಾರ್‌ಗಳಿಗೆ ಲಗ್ಗೆ ಇಡಲು ಶುರು ಮಾಡಿದ್ದಾರೆ. ಅಂತೆಯೇ ಭಾನು ವಾರ ಆಂಧ್ರದ ಪಲಮನೇರು ಜನರ ಕಡಿವಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ 75ರ ಅಂಚಿನ ಬಾರ್‌ಅನ್ನು ಅಬ ಕಾರಿ ಅಧಿಕಾರಿಗಳು ಮುಚ್ಚಿ ಸಿದ್ದಾರೆ. ಉಳಿದಂತೆ ತಾಯಲೂರು ಮತ್ತು ದೂಲಪಲ್ಲಿ ಗ್ರಾಪಂ ವ್ಯಾಪ್ತಿ ಯಲ್ಲಿನ ಹಳ್ಳಿಗಳಲ್ಲಿ ಸಾಕಷ್ಟು ಜನರೇ ಕಟ್ಟುನಿಟ್ಟಾಗಿ ಲಾಕ್‌ಡೌನ್ ಸೂಚನೆ ಪಾಲಿಸು ತ್ತಿದ್ದರೂ ಮಲ್ಲ ನಾಯ ಕನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ರುವ ಕೆಲವು ಹಳ್ಳಿಗಳಲ್ಲಿ ಮಾತ್ರ ಜನರು ನಿರ್ಲಕ್ಷಿಸು ತ್ತಿದ್ದಾರೆ.
ಗ್ರಾಮ ದಲ್ಲಿನ ಬಾರ್‌ಗೆ ದ್ವಿಚಕ್ರ ವಾಹನದಲ್ಲಿ ಮಾಸ್ಕ್ ಧರಿಸದೇ, ಸಾಮಾ ಜಿಕ ಅಂತರ ಕಾಯ್ದು ಕೊಳ್ಳದೇ ಮದ್ಯ ಖರೀ ದಿಸಿ, ಲುಂಗಿ ಮತ್ತು ಚೀಲದಲ್ಲಿ ತೆಗೆದು ಕೊಂಡು ಹೋಗು ತ್ತಿದ್ದು, ಜಿಲ್ಲಾಡಳಿತ ಕ್ರಮ ಕೈಗೊಳ್ಳ ಬೇಕೆಂದು ಮಲ್ಲನಾಯಕನಹಳ್ಳಿ ಗ್ರಾಪಂ ಗಸ್ತುದಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.