ಮಾವು ಮಾರುಕಟ್ಟೆ ಆರಂಭಕ್ಕೆ ತೀರ್ಮಾನ


Team Udayavani, May 27, 2020, 8:05 AM IST

maavu-marukatte

ಕೋಲಾರ: ಕೊರೊನಾ ಆತಂಕ ನಡುವೆಯೂ ರೈತರಿಗೆ ಅನುಕೂಲವಾಗಲು ಮುನ್ನಚ್ಚರಿಕೆ ಕ್ರಮ ಕೈಗೊಂಡು 2.36 ಲಕ್ಷ ಟನ್‌ ಮಾವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌  ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೀಸಿ, ಜಿಪಂ ಸಿಇಒ, ವಿವಿಧ ಇಲಾಖೆ ಅಧಿಕಾರಿಗಳು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಬಾರಿ ಫಸಲು ಕಡಿಮೆ  ಇದ್ದು, 2.36 ಲಕ್ಷ ಟನ್‌ ಸರಕು ಮಾರುಕಟ್ಟೆಗೆ ಬರುತ್ತದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 1.36 ಲಕ್ಷ ಟನ್‌ ಮಾವು ಪೊಸೆಸಿಂಗ್‌ ಯೂನಿಟ್‌ಗಳಿಗೆ ಹೋಗುತ್ತದೆ. ಉಳಿದ ಮಾವು ಮಾರಾಟವನ್ನು ದಿನಕ್ಕೆ ಇಷ್ಟು ಎಂದು ನಿಗದಿಗೊಳಿಸಿ  ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಲಾರಿ ನಿಲುಗಡೆಗೆ ಪ್ರತ್ಯೇಕ ಜಾಗ: ಹೊರ ರಾಜ್ಯದ ಲಾರಿಗಳಿಗೆ ಅವಕಾಶ ನೀಡುವುದಿಲ್ಲ, ಈಗಾಗಲೇ ಬೆಂಗಳೂರಿನ ಲಾರಿ ಮಾಲಿಕರ ಸಂಘದೊಂದಿಗೆ ಮಾತನಾಡಿದ್ದು, ಹೊರ ರಾಜ್ಯದ ಲಾರಿಗಳಿಗೆ ಪ್ರವೇಶ ನೀಡದಂತೆ ಚೆಕ್‌ಪೋಸ್ಟ್‌  ಬಿಗಿಗೊಳಿಸಲಾಗುವುದು. ದಿನಕ್ಕೆ 160 ಲಾರಿ ಬರಲಿದ್ದು, ವಹಿವಾಟು 6 ವಾರ ನಡೆಯಲಿದೆ. ಬರುವ ಲಾರಿಗಳ ನಿಲುಗಡೆಗೆ 10 ಎಕರೆ ಪ್ರತ್ಯೇಕ ಜಾಗ ನೀಡಲಿದ್ದು,

ಬರುವ ಲಾರಿ ಚಾಲಕರು, ಕ್ಲೀನರ್‌ಗಳು ಅಲ್ಲೇ ಇರಬೇಕು, ಅವರಿಗೆ  ಅಲ್ಲೇ ಊಟ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಮಾರುಕಟ್ಟೆಯಿಂದ ಯಾವ ಲಾರಿ ಬರ  ಬೇಕು ಎಂದು ಧ್ವನಿವರ್ಧಕದ ಮೂಲಕ ಸೂಚಿಸಿ ದ ನಂತರ ಆ ಲಾರಿ ಮಾತ್ರ ಮಾರುಕಟ್ಟೆಗೆ ಬಂದು ಮಾವು ಲೋಡ್‌  ಮಾಡಿಕೊಂಡು ಸಾಗಬೇಕು ಎಂದು ತಿಳಿಸಿದರು.

ಹೊರರಾಜ್ಯಗಳ ಮಾವಿಗೂ ನಿಷೇಧ: ನಮ್ಮ ಜಿಲ್ಲೆಯ ಮಾರುಕಟ್ಟೆಗಳಿಗೆ ಹೊರ ರಾಜ್ಯದ ಮಾವು ಬರಲು ಅವಕಾಶ ನೀಡುವುದಿಲ್ಲ, ನಮ್ಮ ರೈತರ ತೋಟಗಳಿಂದ ಬರುವುದಕ್ಕೆ ಆದ್ಯತೆ ನೀಡಲಾಗುವುದು. ಬರುವ ಲಾರಿಗಳಿಗೆ ಸೋಂಕು  ನಿವಾರಕ ಔಷಧಿ ಸಿಂಪಡಣೆ ಮಾಡಿಯೇ ಮಾರುಕಟ್ಟೆ ಒಳಕ್ಕೆ ಬಿಡಲಾಗುವುದು ಎಂದು ವಿವರಿಸಿದರು. ಸೋಂಕಿನ ಪ್ರಕರಣ ಮಾರುಕಟ್ಟೆ ವ್ಯಾಪ್ತಿ  ಯಲ್ಲಿ ಕಂಡು ಬಂದರೆ 2 ದಿನ ವಹಿವಾಟು ಬಂದ್‌ ಮಾಡಿ ನಂತರ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಟ್ರೇಡರ್ ಎಪಿಎಂಸಿ ಹಾಗೂ ತಾಲೂಕು ಆಡಳಿತದ ಬಳಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಸಂಸದ ಎಸ್‌.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ಎಡೀಸಿ ಶಿವ ಸ್ವಾಮಿ, ಜಿಪಂ ಸಿಇಒ ಎಚ್‌.ವಿ.ದರ್ಶನ್‌, ಎಸ್ಪಿ ಕಾರ್ತಿಕ್‌ರೆಡ್ಡಿ, ಎಸಿ ಸೋಮ ಶೇಖರ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕರು, ಮಾವು ಬೆಳೆಗಾರರ ಸಂಘದ ಅಧ್ಯಕ್ಷರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.