ಜಿಪಂ ಸದಸ್ಯರಿಂದ ಅವ್ಯವಹಾರ ಆರೋಪ : ಅಧಿಕಾರಿಗಳ ತಂಡ ಭೇಟಿ

ಮಳೆ ನೀರು ಕೊಯ್ಲು ಕಾಮಗಾರಿ ಪರಿಶೀಲ! ಹಾಸ್ಟೆಲ್‌ಗ‌ಳಲ್ಲಿ ಅಳವಡಿಕೆ !

Team Udayavani, Mar 20, 2021, 5:08 PM IST

fgw

ಮಾಸ್ತಿ: ವಿದ್ಯಾರ್ಥಿ ನಿಲಯಗಳಿಗೆ ಅಳವಡಿಸಿರುವ ಮಳೆ ನೀರು ಕೊಯ್ಲು ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದರ ಜೊತೆಗೆ ಕಳಪೆ ಗುಣಮಟ್ಟದ್ದಾಗಿ ರುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ತಂಡದ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ ನೀಡಲು ಆದೇಶ: ಮಾಸ್ತಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಗೆ ಒಳಪಟ್ಟ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 2014-15ನೇ ಸಾಲಿನಲ್ಲಿ ಮಳೆ ನೀರು ಕೊಯ್ಲು ಅಳವಡಿಸಲಾಗಿತ್ತು. ಇದನ್ನು ಗಮನಿಸಿದ ಮಾಸ್ತಿ ಕ್ಷೇತ್ರದ ಜಿಪಂ ಸದಸ್ಯ ಎಚ್‌.ವಿ. ಶ್ರೀನಿವಾಸ್‌ ಅವರು ಜಿಪಂ ಸಾಮಾನ್ಯ ಸಭೆಗಳಲ್ಲಿ ವಿದ್ಯಾ ರ್ಥಿ ನಿಲಯಗಳಿಗೆ ಅಳವಡಿಸಿರುವ ಮಳೆ ನೀರು ಕೊಯ್ಲು ಕಾಮಗಾರಿಯಲ್ಲಿ ಬಾರಿ ಅವ್ಯವ ಹಾರ ನಡೆದಿದೆ. ಕಾಮಗಾರಿ ಕಳಪೆ ಗುಣಮಟ್ಟದ್ದಾಗಿ ರುತ್ತದೆ ಎಂದು ಆರೋಪ ಮಾಡುತ್ತಿದ್ದರು. ಈ ಹಿನ್ನೆಲೆ ಯಲ್ಲಿ ಅಧಿಕಾರಿಗಳ ತಂಡ ನಿಯೋಜನೆ ಮಾಡಿ, ಪರಿಶೀಲಿಸಿ ವರದಿ ನೀಡುವಂತೆ ಆದೇಶಿಸಲಾಗಿತ್ತು.

ಪರಿಶೀಲನೆ: ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಮಾಲೂರು ತಾಲೂಕಿನ ಶಿವಾರಪಟ್ಟಣ, ಚಿಕ್ಕಕುಂತೂರು ಬಾಲಕರ ವಿದ್ಯಾರ್ಥಿ ನಿಲಯ, ಮಾಸ್ತಿ ಗ್ರಾಮದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಗ್ರಾಮೀಣ ಕುಡಿವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಇಇ ಜಿ.ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಶಿವಕುಮಾರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಳೆ ಮಾಡಲಾಗುವುದು: ಬಳಿಕ ಮಾತನಾಡಿದ ಎಇಇ ಜೆ.ನಾರಾಯಣಸ್ವಾಮಿ, ಮಾಲೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಕಟ್ಟಡಗಳಿಗೆ ಬೆಂಗಳೂರಿನ ನಿರ್ಮಿತಿ ಕೇಂದ್ರದವರು ನಾಲ್ಕೈದು ವರ್ಷಗಳ ಹಿಂದೆ ಮಳೆ ನೀರು ಕೊಯ್ಲು ಕಾಮಗಾರಿ ಕೈಗೊಂಡಿದ್ದಾರೆ. ಮಾಲೂರು ತಾಲೂಕಿನಲ್ಲಿ ನಾಲ್ಕು ಕಟ್ಟಡಗಳಿವೆ. ಇದನ್ನು ಪರಿಶೀಲಿಸಲು ತಂಡ ರಚನೆ ಮಾಡಿ ವರದಿ ನೀಡಬೇಕೆಂದು ನೇಮಿಸಲಾಗಿದೆ. 2014-15ನೇ ಸಾಲಿನಲ್ಲಿ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ಅಂದಾಜು ಪಟ್ಟಿ ಮತ್ತಿತರ ಕುರಿತು ತಾಳೆ ಮಾಡಲಾಗುವುದು ಎಂದು ಪರಿಶೀಲಿಸಿದ ಬಳಿಕ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ: ಮಾಸ್ತಿ ಕ್ಷೇತ್ರದ ಜಿಪಂ ಸದಸ್ಯ ಎಚ್‌.ವಿ.ಶ್ರೀನಿವಾಸ್‌ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಕೋಟ್ಯಂತರ ರೂ.ವೆಚ್ಚದಲ್ಲಿ ಎಸ್ಸಿ, ಎಸ್‌ಟಿ ಹಾಸ್ಟೆಲ್‌ಗ‌ಳಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವೊಂದು ಹಾಸ್ಟೆಲ್‌ಗ‌ಳಲ್ಲಿ ಕಳಪೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ವಿಷಯವಾಗಿ ಜಿಪಂ ಸಾಮಾನ್ಯ ಸಭೆಯಲ್ಲಿ ಮೂರು ವರ್ಷದ ಹಿಂದೆ ಪ್ರಸ್ತಾಪ ಮಾಡಲಾಗಿತ್ತು. ಎಲ್ಲಾ ಜಿಪಂ ಸದಸ್ಯರು ಸೇರಿ ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಯವರಿಗೂ ಗಮನಕ್ಕೆ ತರಲಾಗಿತ್ತು ಎಂದರು.

ಗಮನಕ್ಕೆ ತರದೇ ಕಾಮಗಾರಿ: ಬೆಂಗಳೂರಿನಿಂದ ಏಕಾಏಕಿ ಬಂದ ಅಧಿಕಾರಿಗಳು ಹಾಸ್ಟೆಲ್‌ಗ‌ಳ ಮಾಹಿತಿ ಪಡೆದಿದ್ದಾರೆ. ನೇರವಾಗಿ ಕಾಮಗಾರಿ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿಗಳು, ಸಿಇಒ, ಶಾಸಕರು, ಎಂಪಿ, ಜಿಪಂ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಿಲ್ಲೆಯ ಅಧಿಕಾರಿಗಳು ಸೇರಿದಂತೆ ಯಾರ ಗಮನಕ್ಕೂ ತರದೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ವಿಷಯವನ್ನು ಜಿಪಂ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಕಳಪೆ ಕಾಮಗಾರಿ ವಿಷಯವಾಗಿಯೂ ಚರ್ಚೆ ನಡೆದಿತ್ತು ಎಂದರು. ಈ ಸಂದರ್ಭದಲ್ಲಿ ಮಾಸ್ತಿ ಗ್ರಾಮ ಪಂಚಾಯಿತಿ ಪಿಡಿಒ ಕಿಶೋರ್‌ಕುಮಾರ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.