ನರಸಾಪುರ ಗ್ರಾಮದ ನಾಲ್ವರಿಗೆ ಕೋವಿಡ್ ಪಾಸಿಟಿವ್
Team Udayavani, Aug 10, 2020, 9:47 AM IST
ಕೋಲಾರ: ತಾಲೂಕಿನ ನರಸಾಪುರ ಗ್ರಾಮದಲ್ಲಿ ನಾಲ್ವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ. ತಿಗಳರ ಬೀದಿಯಲ್ಲಿ 2, ಹಳೆಯ ವಿಜಯ ಬ್ಯಾಂಕಿನ ಹತ್ತಿರ 1 ಹಾಗೂ ವೆಂಕಟೇಶ್ವರ ಮೆಡಿಕಲ್ ಸ್ಟೋರ್ ಮಾಲಿಕರಿಗೆ ಕೋವಿಡ್ ದೃಢಪಟ್ಟಿದೆ ಎಂದು ಗ್ರಾಮ ಪಂಚಾಯ್ತಿ ತಿಳಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳನ್ನು ಗ್ರಾಪಂ ಆಡಳಿತಾಧಿಕಾರಿ ಹಾಗೂ ಬಿಇಒ ಕೆ.ಎಸ್.ನಾಗರಾಜ್ ಗೌಡ ಪರಿಶೀಲಿಸಿದರು. ನರಸಾಪುರ ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣದಿಂದ ಇಡೀ ಗ್ರಾಮವನ್ನು ಸೀಲ್‌ಡೌನ್ ಮಾಡುವ ಸನ್ನಿವೇಶ ಎದುರಿಸಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಬೇಕು. ಆಗಾಗ್ಗೆ ಸೋಪು ಮತ್ತು ನೀರಿನಿಂದ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು ಎಂದು ತಿಳಿಸಿದರು. ನರಸಾಪುರ ಗ್ರಾಮದಲ್ಲಿ ಬೆಳಗ್ಗೆ 6 ರಿಂದ 2 ಗಂಟೆಯವರೆಗೆ ಮಾತ್ರ ಹಣ್ಣು ತರಕಾರಿ ದಿನಸಿ ಅಂಗಡಿಗಳು ತೆರೆಯಲು ಗ್ರಾಪಂ ಅನುಮತಿ ನೀಡಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್, ನಂದಿನಿ ಹಾಲಿನ ಪಾರ್ಲರ್ ಹೊರತು ಪಡಿಸಿ ಎಲ್ಲಾ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಎಂದು ಗ್ರಾಪಂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.