ಜಾತ್ಯತೀತ ಪಕ್ಷಗಳಿಗೆ ಸಿಪಿಎಂ ಬೆಂಬಲ
Team Udayavani, Apr 4, 2019, 3:00 AM IST
ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಅ ಧಿಕಾರಕ್ಕೆ ಬರಲು ಸಿಪಿಐಎಂ ಕಾರ್ಯಕರ್ತರು ಪ್ರಚಾರ ಮಾಡಬೇಕು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಮಟ್ಟದ ರಾಜಕೀಯ ಸಮಾವೇಶ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಎಡಪಕ್ಷಗಳು ಹೆಚ್ಚಿನ ಸ್ಥಾನ ಗಳಿಸಬೇಕು, ದೇಶದ ಭವಿಷ್ಯವನ್ನು ಬದಲಾಯಿಸುವ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.
ಪಕ್ಷದ 22ನೇ ಅ ಧಿವೇಶನದಲ್ಲಿ ಗುರುತಿಸಿರುವಂತೆ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಜಾತ್ಯತೀತ, ಗಣತಂತ್ರ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಿರಂತರ ದಾಳಿ ಮಾಡಿ ಜನರಿಗೆ ಭಯದ ವಾತಾವರಣ ಸೃಷ್ಟಿಸಿದೆ. ಬಿಜೆಪಿ ನಿರ್ಣಾಯಕವಾಗಿ ಸೋಲಿಸಿ ಪ್ರಜಾಪ್ರಭುತ್ವ ರಾಷ್ಟ್ರವನ್ನು ಬಲಗೊಳಿಸಬೇಕಾಗಿದೆ ಎಂದು ಹೇಳಿದರು.
ಒಳ್ಳೆಯ ದಿನ ಬಂದಿಲ್ಲ: ಕಳೆದ 16ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಭರವಸೆ ನೀಡಿತ್ತು. 300 ಬಹಿರಂಗ ಸಭೆಗಳನ್ನು ನಡೆಸಿ ಮುಂದಿನ ದಿನಗಳು ಒಳ್ಳೆಯ ದಿನಗಳು ಎನ್ನುವ ಸಂದೇಶ ಜನರ ಬಳಿ ತಂದು ಮೋದಿ ಪ್ರಧಾನಿಯಾದರು. ಆದರೆ, ಬಡವರಿಗೆ ಇಂದಿಗೂ ಒಳ್ಳೆಯ ದಿನಗಳು ಬರಲಿಲ್ಲ ಎಂದು ವಿಷಾದಿಸಿದರು.
ವಿದೇಶದಲ್ಲಿ ಇರುವ ಕಪ್ಪು ಹಣ ಭಾರತಕ್ಕೆ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ. ಇದಕ್ಕಾಗಿ ಜನ ಧನ ಯೋಜನೆಯಲ್ಲಿ ಸಾರ್ವಜನಿಕರು ಸಾಲುಗಟ್ಟೆ ನಿಂತು ಖಾತೆ ತೆರೆದರು. ಆದರೆ, ಇದುವರೆಗೂ ಒಂದು ರೂ. ಖಾತೆಗೆ ಬರಲಿಲ್ಲ. ಈ ಚುನಾವಣೆಯಲ್ಲಿ ಕಪ್ಪು ಹಣದ ಪ್ರಸ್ತಾಪವೇ ಇಲ್ಲ ಎಂದರು.
ಕಪ್ಪುಹಣದ ಬಗ್ಗೆ ದೇಶದ ಜನತೆಗೆ ಮಾಡಿದ ದೊಡ್ಡ ಅಪಮಾನವಾಗಿದೆ. ನಾನು ಭ್ರಷ್ಟಾಚಾರ ಮಾಡಲ್ಲ ಜೊತೆಗೆ ಭ್ರಷ್ಟಾಚಾರ ಮಾಡಲು ಬಿಡಲ್ಲ ಅಂದವರು ಅ ಧಿಕಾರಕ್ಕೆ ಬಂದು ಐದು ವರ್ಷವಾದರೂ ಯಾಕೆ ತರಲಿಲ್ಲ. ನಿಮಗೂ ಕಪ್ಪು ಹಣ ಇಟ್ಟವರಿಗೂ ಇರುವ ಸಂಬಂಧ ಎಂತಹದು ಎಂದು ತೋರಿಸುತ್ತದೆ ಎಂದರು.
ರೈತರಿಗೆ, ಕಾರ್ಮಿಕರಿಗೆ ಒಳ್ಳೆಯ ದಿನಗಳು ಎಂದವರು ಸ್ವಾಮಿನಾಥನ್ ಆಯೋಗ ವರದಿಯ ಆಧಾರಿತ ಬೆಂಬಲ ಬೆಲೆಯನ್ನು ಜಾರಿ ಮಾಡದ ಪರಿಣಾಮವಾಗಿ ದಿನನಿತ್ಯ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು, ರೈತರ ಸಾಲಮನ್ನಾ ಮಾಡದೇ ಬಂಡವಾಳಗಾರರ ಸಾಲ ಮನ್ನಾ ಮಾಡುತ್ತಾರೆ ಎಂದರೆ ದೇಶದಲ್ಲಿ ಯಾರ ಪರವಾದ ಸರ್ಕಾರ ಇದೆ ಎಂದು ತಿಳಿಯುತ್ತದೆ ಎಂದರು.
ರೈತರಿಗೆ, ಬಡವರಿಗೆ ಬ್ಯಾಂಕುಗಳಲ್ಲಿ ಸಾಲ ಸಿಗದೆ, ಪರದಾಡುವ ಸ್ಥಿತಿ ಸೃಷ್ಟಿಸಿದ್ದಾರೆ. ಆದರೆ, ದೇಶದ ಅದಾನಿ, ಅಂಬಾನಿಯಂತಹ ಕಾಪೊರೇಟ್ ಸಂಸ್ಥೆಗಳ ಸಾವಿರಾರು ಕೋಟಿ ರೂ. ಸಾಲ ಮನ್ನಾದ ಜೊತೆಯಲ್ಲೇ ಮತ್ತೆ ಸಾಲವನ್ನು ನೀಡುತ್ತಿದ್ದಾರೆ. ಕೇಳಿದರೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಳಿ ದುಡ್ಡು ಇಲ್ಲ ಎನ್ನುತ್ತಾರೆ ಎಂದರು.
ಇತರೆ ಪಕ್ಷಗಳಿಗೆ ಬೆಂಬಲ: ರಾಜ್ಯದಲ್ಲಿ ಸಿಪಿಐಎಂ ಚಿಕ್ಕಬಳ್ಳಾಪುರ ಸೇರಿ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಬೆಂಗಳೂರು ಕೇಂದ್ರದ ಕ್ಷೇತ್ರದಲ್ಲಿ ಜನಪರ ಚಳವಳಿಯ ಪ್ರಕಾಶ್ ರೈಗೆ, ತುಮಕೂರಿನಲ್ಲಿ ಸಿಪಿಐ ಪಕ್ಷಕ್ಕೆ ನಮ್ಮ ಪಕ್ಷ ಬೆಂಬಲಿಸಿದೆ. ಉಳಿದ ಕಡೆ ಬಿಜೆಪಿ ಸೋಲಿಸುವ ಪಕ್ಷಗಳಿಗೆ ನಮ್ಮ ಬೆಂಬಲವಿದೆ ಎಂದರು.
ಪ್ರಚಾರ: ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಶ್ರೀನಿವಾಸ್ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನಮ್ಮ ಪಕ್ಷದ ಕೇಂದ್ರ ಸಮಿತಿಯ ತೀರ್ಮಾನವನ್ನು ಜಾರಿಮಾಡುವ ಜೊತೆಗೆ ನಮ್ಮ ಪಕ್ಷಕ್ಕೂ ಬೇರೆಪಕ್ಷಕ್ಕೂ ಇರುವ ವ್ಯತ್ಯಾಸವನ್ನು ಜನರ ಮಧ್ಯೆ ಪ್ರಚಾರ ಮಾಡಬೇಕಾಗಿದೆ ಎಂದರು.
ಸಮಾವೇಶದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂ ಧಿನಗರ ನಾರಾಯಣಸ್ವಾಮಿ, ಪಿ.ಆರ್.ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಜಿಲ್ಲಾ, ತಾಲೂಕು ಸಮಿತಿ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.