ಖಾಸಗಿ ಶಾಲಾ ಶುಲ್ಕ ನಿಯಂತ್ರಣಕ್ಕೆ  ತಂಡ ರಚಿಸಿ


Team Udayavani, Apr 24, 2022, 3:07 PM IST

23bptph-2-2304bg-2

ಕೋಲಾರ: ಖಾಸಗಿ ಶಾಲಾ ಶುಲ್ಕ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಪೋಷಕರ ರಕ್ಷಣೆಗೆ ನಿಲ್ಲಬೇಕೆಂದು ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಕ್ಕಳಿಗೆ ಆಂಗ್ಲ ಮಾಧ್ಯಮ ಕಲಿಸುವ ನೆಪದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು 50 ಸಾವಿರದಿಂದ 1 ಲಕ್ಷದ ವರೆಗೂ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆಂಗ್ಲಮಾದ್ಯಮ ಸಿಬಿಎಸ್‌ಇ ಹೆಸರಿನಲ್ಲಿ ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಮಾಡಿ ಅನಧಿಕೃತ ಶಾಲೆಗಳನ್ನು ಪ್ರಾರಂಭ ಮಾಡುತ್ತಿದ್ದರೂ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದಾರೆ. ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಶಿಕ್ಷಣ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು.

ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳಿಂದ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ದುಡಿಯುವ ಕೈಗೆ ಕೆಲಸವಿಲ್ಲದೆ ಸಂಸಾರ ನಿರ್ವಹಣೆ ನಡೆಸಲು ಪರಿತಪ್ಪಿಸುತ್ತಿರುವ ಸಮಯದಲ್ಲಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮುಖಾಂತರ ಗಾಯದ ಮೇಲೆ ಬರೆ ಎಳೆದಂತೆ ಈಗ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿರುವ ಪೋಷಕರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೀಡುತ್ತಿರುವ ಡೊನೇಶನ್‌ ಪಟ್ಟಿ ನೋಡಿ ಶಿಕ್ಷಣವು ಬೇಡ ಜೀವನವು ಬೇಡ ಎಂಬ ಮಟ್ಟಕ್ಕೆ ಮನಸ್ಸು ರೋಶಿಹೋಗಿದೆ ಎಂದು ಅಪರ ಜಿಲ್ಲಾ ಧಿಕಾರಿಗಳಿಗೆ ಮನವರಿಕೆ ಮಾಡಿದರು.

ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಲಕ್ಷ ಲಕ್ಷ ಸಂಬಳ ಪಡೆದು ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಿ ಮಕ್ಕಳ ಹಾಜರಾತಿಯನ್ನು ಹೆಚ್ಚಳ ಮಾಡಲು ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಲು ಯೋಚಿಸುತ್ತಿದ್ದಾರೆ. ಜಾಗೃತಿ ಮೂಡಿಸುವಲ್ಲಿ ಶಿಕ್ಷಕರು ವಿಫಲರಾಗಿದ್ದು, ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳದೆ ಅನ್ಯಾಯ ಮಾಡುತ್ತಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾ ಧಿಕಾರಿ ಸ್ನೇಹಾ ರವರು ಕ್ರಮವಹಿಸುವ ಭರವಸೆ ನೀಡಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ, ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ, ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ, ಯುವ ರೈತ ಮುಖಂಡ ನವೀನ್‌, ವೇಣು, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಕಿಶೋರ್‌, ರಾಮಮೂರ್ತಿ ಅಣ್ಣೆಹಳ್ಳಿ ನಾಗರಾಜ, ಕೋಲಾರ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಾಲೂರು ಅಧ್ಯಕ್ಷ ಯಲ್ಲಣ್ಣ, ಫಾರೂಕ್‌ಪಾಷ, ಶ್ರೀನಿವಾಸಪುರ ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ಬಂಗಾರಿ ಮಂಜುನಾಥ, ಜುಬೇರ್‌, ವಕ್ಕಲೇರಿ ಹನುಮಯ್ಯ ಇತರರು ಇದ್ದರು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.