ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ
Team Udayavani, Oct 13, 2020, 2:54 PM IST
ಕೋಲಾರ: ನಗರದಲ್ಲಿ ವಿವಿಧ ಅನುದಾನದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು ಸೋಮ ವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪ್ರದಕ್ಷಿಣೆ ನಡೆಸಿ ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಆದೇಶಿಸಿದರು.
ಮಳೆಗಾಲ ಪ್ರಾರಂಭವಾಗಿದ್ದು ಎಲ್ಲಿ ನೋಡಿದರೂ ರಸ್ತೆಯ ಗುಂಡಿಗಳದ್ದೇ ಸದ್ದು ಆಗಿದ್ದರ ಬಗ್ಗೆ ಸಾಕಷ್ಟು ದೂರುಗಳು ಬಂದ ಕಾರಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಗುಂಡಿಮಯ ರಸ್ತೆಗಳು, ಚರಂಡಿಗಳಿಂದ ಹೊರಗೆ ಹರಿಯುತ್ತಿದ್ದ ಕೊಳಚೆ ನೀರು ಹಾಗೂ ರಸ್ತೆ ಬದಿಯ ಕಸದ ರಾಶಿ ಕಂಡು ಅಸಮಾಧಾನಗೊಂಡರು.
ನೋಟಿಸ್ ನೀಡುವ ಎಚ್ಚರಿಕೆ: ನಗರಸಭೆ,ಒಳಚರಂಡಿ ಮತ್ತು ನೀರು ಸರಬರಾಜುಮಂಡಳಿ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಬೇಗ ಕೆಲಸ ಮುಗಿಸಿ, ಇಲ್ಲದಿದ್ದರೆ ನೋಟಿಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು. ನಗರದ ಅಂಬೇಡ್ಕರ್ ಸರ್ಕಲ್,ಕಾಲೇಜು ವೃತ್ತ, ಎಂ.ಜಿ ರಸ್ತೆ, ದೊಡ್ಡಪೇಟೆ ಸೇರಿದಂತೆ ಪ್ರಮುಖಸ್ಥಳಗಳಲ್ಲಿಸಂಚರಿಸಿದ ಜಿಲ್ಲಾಧಿಕಾರಿ ಸಾರ್ವಜನಿಕರ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡಿದರು. ಯುಜಿಡಿ ಸಮಸ್ಯೆ ಗಂಭೀರವಾಗಿದೆ. ಸ್ಥಳೀಯರು ಸಮಸ್ಯೆ ನೀವೇ ನೋಡುತ್ತಿದ್ದೀರಿ, ಹಾಳಾಗಿರುವ ಯುಜಿಡಿ ಮಾರ್ಗವನ್ನು ರಸ್ತೆಗೆ ಅನುಸಾರವಾಗಿರುವ ಹಾಗೇ ಶೀಘ್ರವೇ ದುರಸ್ತಿ ಮಾಡಿಸಿ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ಅವರಿಗೆ ಆದೇಶಿಸಿದರು.
ನಗರದ ಪ್ರಮುಖ ಪ್ರದೇಶವಾದ ಚಂಪಕ್ ವೃತ್ತದ ಪಕ್ಕದಲ್ಲಿ ನಗರಸಭೆ ವತಿಯಿಂದ ರಸ್ತೆ ಇದ್ದರೂ ಅದನ್ನು ಕೆಲವರು ಒತ್ತುವರಿಮಾಡಿಕೊಂಡಿದ್ದು, ತೆರವುಗೊಳಿಸಬೇಕು. ದೊಡ್ಡ ಪೇಟೆಯ ರಸ್ತೆ ಒತ್ತುವರಿ ಮಾಡಿಕೊಂಡಿದ್ದು, ತೆರವು ಮಾಡಲು ನೋಟಿಸ್ ನೀಡಿ ಜಾಗದ ಬಗ್ಗೆ ಗುರುತಿಸಬೇಕು ಎಂದರು.
ಯುಜಿಡಿ ಕಾಮಗಾರಿಗಾಗಿ ಬಡಾವಣೆಯ ಬಹುಪಾಲು ರಸ್ತೆಗಳನ್ನು ಅಗೆಯಲಾಗಿದೆ. ಕಾಮಗಾರಿ ಮುಗಿದರೂ ರಸ್ತೆ ದುರಸ್ತಿ ಮಾಡಿಲ್ಲ. ಅಮೃತ್‌ಸಿಟಿ, ನಗರೋತ್ಥಾನ- 3ರ ಅಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೆಲ ರಸ್ತೆಗಳು ಲೋಕೋಪಯೋಗಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುತ್ತವೆ. ಅನುದಾನದ ಸಮಸ್ಯೆ ಇಲ್ಲ. ಇರುವ ಅನುದಾನ ಮತ್ತಷ್ಟು ಅನುದಾನ ಕ್ರೋಢೀಕರಿಸಿ ರಸ್ತೆಗಳ ಡಾಂಬರೀಕರಣ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.