ಗ್ರಾಹಕರ ಮನೆ ಬಾಗಿಲಿಗೆ ಡಿಸಿಸಿ ಬ್ಯಾಂಕ್ ಸೇವೆ
Team Udayavani, Oct 27, 2020, 2:21 PM IST
ಕೋಲಾರ: ದುರ್ಗಾಮಾತೆಯ ಪ್ರತಿರೂಪದಂತಿರುವ ನಗರದೇವತೆ ಕೋಲಾರಮ್ಮನ ಕೃಪೆಯಿಂದ ನಷ್ಟದಲ್ಲಿದ್ದ ಡಿಸಿಸಿ ಬ್ಯಾಂಕ್‌ನ್ನು ಜನಮಾನಸದಲ್ಲಿ ಶಾಶ್ವತವಾಗಿ ನಿಲ್ಲುವಂತೆ ಮಾಡಿ ಬಡ ಮಹಿಳೆಯರು, ರೈತರ ಆರ್ಥಿಕಾಭಿವೃದ್ಧಿಗೆ ನೆರವು ಒದಗಿಸಿದ ಸಂತೃಪ್ತಿ ಇದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.
ಸೋಮವಾರ ಬ್ಯಾಂಕ್‌ನ ಆವರಣದಲ್ಲಿ ನಡೆದ ಆಯುಧಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಅಧ್ಯಕ್ಷನಾಗಿದ್ದೇನೆ ಎಂಬ ಅಹಂಇಲ್ಲ, ಆದರೆ ನನಗೆ ಸಿಕ್ಕಿರುವ ಅವಕಾಶದಲ್ಲಿ ದಿವಾಳಿಯಾಗಿ, ಬಡವರಿಗೆ ನೆರವಾಗುವ ಶಕ್ತಿಕಳೆದುಕೊಂಡಿದ್ದ ಬ್ಯಾಂಕ್‌ಗೆ ಶಕ್ತಿ ತುಂಬಿದ್ದೇನೆ ಎಂದರು.
ಪಾರದರ್ಶಕತೆ ಬಲಗೊಳಿಸಲು ಬ್ಯಾಂಕ್ ವ್ಯಾಪ್ತಿಯ 200 ಸೊಸೈಟಿಗಳ ಗಣಕೀಕರಣ, ಮೈಕ್ರೋ ಎಟಿಎಂ ಮೂಲಕ ಮಹಿಳೆಯರು, ರೈತರಮನೆಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸಿದ್ದೇವೆ.ಆಡಳಿತ ಮಂಡಳಿ ಶ್ರಮ, ಸಿಬ್ಬಂದಿಯ ಕರ್ತವ್ಯನಿಷ್ಠೆ, ಎರಡೂ ಜಿಲ್ಲೆಗಳ ಶಾಸಕರು, ವಿಧಾನಪರಿಷತ್ ಸದಸ್ಯರೂ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ಪ್ರೀತಿ, ವಿಶ್ವಾಸ, ನಬಾರ್ಡ್, ಅಪೆಕ್ಸ್ ಬ್ಯಾಂಕ್ ಸಹಕಾರದಿಂದಾಗಿ ದ್ವೇಷ ರಾಜಕಾರಣ ಮೆಟ್ಟಿನಿಂತು ಬ್ಯಾಂಕ್ ಬಡವರ,ಮಹಿಳೆಯರ ಬ್ಯಾಂಕಾಗಿ ಉಳಿದಿದೆ ಎಂದು ತಿಳಿಸಿದರು.
ದಿವಾಳಿಯಾದಾಗ ಮಾತನಾಡಲಿಲ್ಲ: ಬ್ಯಾಂಕ್ ದಿವಾಳಿಯಿಂದಾಗಿ ಬಡ್ಡಿಮನ್ನಾ, ಕಡಿಮೆ ಬಡ್ಡಿ ಸಾಲ, ಸಾಲಮನ್ನಾದಂತಹ ಸೌಲಭ್ಯಗಳಿಂದ ಜಿಲ್ಲೆಯ ಜನತೆ ವಂಚಿತರಾಗಿದ್ದ ಸಂದರ್ಭದಲ್ಲಿ ಯಾರೂ ಬ್ಯಾಂಕ್ ಬಗ್ಗೆ ಮಾತನಾಡಲೇ ಇಲ್ಲ, ಬ್ಯಾಂಕ್ ಉಳಿಸುವ ಪ್ರಯತ್ನವೂ ಮಾಡಲಿಲ್ಲ. ಆದರೆ ಇದೀಗ ನಮ್ಮ ಆಡಳಿತ ಮಂಡಳಿ ನಡೆಸಿದ ಪ್ರಾಮಾಣಿಕ ಪ್ರಯತ್ನದಿಂದ ಬ್ಯಾಂಕ್ ಉಳಿದಿದೆ. ಸಾಲ ಮನ್ನಾ ಯೋಜನೆಗಳಿಂದ ಬ್ಯಾಂಕ್ ಗ್ರಾಹಕ ರೈತರಿಗೆ 330 ಕೋಟಿ ರೂ. ಲಾಭವಾಗಿದೆ ಎಂದು ತಿಳಿಸಿದರು.
44 ಕೋಟಿ ನಷ್ಟದಲ್ಲಿದ್ದ ಬ್ಯಾಂಕ್ ಕಥೆ ಮುಗಿಯಿತು, ಬೆಂಗಳೂರು ಜಿಲ್ಲಾ ಡಿಸಿಸಿ ಬ್ಯಾಂಕ್‌ಜತೆ ವಿಲೀನ ಕೂಗು ಎಲ್ಲೆಡೆ ಮಾರ್ಧನಿಸುತ್ತಿದ್ದ ಸಂದರ್ಭದಲ್ಲಿ ನಮ್ಮ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎಂಬುದು ಉಳಿದಿದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗಿರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ರವಿ, ಸಹಕಾರಿ ಯೂನಿಯನ್ ನಿರ್ದೇಶಕ ಉರಿಗಿಲಿ ರುದ್ರಸ್ವಾಮಿ, ಮುಖಂಡರಾದ ಶ್ರೀನಿವಾಸ್, ಬ್ಯಾಂಕ್‌ನ ಅಧಿಕಾರಿಗಳಾದ ಖಲೀಮುಲ್ಲಾ, ನಾಗೇಶ್, ಹುಸೇನ್‌ಸಾಬ್ ದೊಡ್ಡಮನಿ, ಪದ್ಮಮ್ಮ, ತಿಮ್ಮಯ್ಯ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.