6ರಿಂದ 9ನೇ ತರಗತಿ ನಡೆಸಿದರೆ ಕ್ರಮ
Team Udayavani, Apr 7, 2021, 1:57 PM IST
ಕೋಲಾರ: ಕೋವಿಡ್-19 ಸರ್ಕಾರದ ಹೊಸಮಾರ್ಗಸೂಚಿಗಳನ್ನು ಕಡ್ಡಾಯವಾಗಿಪಾಲಿಸಬೇಕು.6ರಿಂದ 9ನೇ ತರಗತಿಯನ್ನುಭೌತಿಕವಾಗಿ ನಡೆಸಿದರೆ, ಶಿಸ್ತು ಕ್ರಮಜರುಗಿಸಬೇಕಾಗುತ್ತದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ನಗರದ ಮಹಿಳಾ ಸಮಾಜ ಶಾಲೆಯ ಸದಾಶಿವಸ್ಮಾರಕ ಭವನದಲ್ಲಿ ನಡೆದ ತಾಲೂಕಿನ ಖಾಸಗಿಪ್ರಾಥಮಿಕ, ಪ್ರೌಢಶಾಲೆಗಳ ಮುಖ್ಯಶಿಕ್ಷಕರುಹಾಗೂ ಆಡಳಿತ ಮಂಡಳಿಗಳ ಸಭೆಯಲ್ಲಿಮಾತನಾಡಿ, ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಎಲ್ಲಾ ಶಾಲೆಗಳುಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಈಗಾಗಲೇ 6 ರಿಂದ 9ನೇ ತರಗತಿಗಳಿಗೆ ಭೌತಿಕ ತರಗತಿ ನಡೆಸಬಾರದು ಎಂದುಸುತ್ತೋಲೆ ಹೊರಡಿಸಲಾಗಿದೆ. ಇದರನಡುವೆಯೂ ಖಾಸಗಿ ಶಾಲೆಗಳವರು ತರಗತಿನಡೆಸುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿಯೂ ತಿಳಿಸಿದ ಅವರು,ಪರೀಕ್ಷೆ ನಡೆಸಬೇಕೆ ಬೇಡವೇ ಎಂಬುದರಕುರಿತು ಸರ್ಕಾರದ ಆದೇಶದಂತೆ ಕ್ರಮವಹಿಸಲು ಸೂಚಿಸಿದರು.
ಶೇ.70ರಷ್ಟು ಶುಲ್ಕ ವಸೂಲಿ: ಖಾಸಗಿಶಾಲೆಗಳಲ್ಲಿ ಶೇ.70ರಷ್ಟು ಶುಲ್ಕ ವಸೂಲಿಮಾಡಬೇಕು ಎಂದು ಸರ್ಕಾರ ಆದೇಶೀಸಿದೆ.ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವಕುರಿತು ಪೋಷಕರಿಂದ ದೂರು ಬಂದರೆಆಡಳಿತ ಮಂಡಳಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.
ಆರ್‌ಟಿಇ ಶುಲ್ಕ ಮರುಪಾವತಿ ಕುರಿತುಒಂದೆರಡು ದಿನಗಳೊಳಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದ ಅವರು, ಎಲ್ಲಾಶಾಲೆಗಳಲ್ಲೂ ಜೂನಿಯರ್ ರೆಡ್‌ಕ್ರಾಸ್ ಸ್ಥಾಪನೆಗೆ ಸೂಚಿಸಿದರು.
ಶಾಲೆ ಉಳಿಸಿಕೊಳ್ಳುವ ಪ್ರಯತ್ನ: ಕಾಮ್ಸ್‌ಕೋಲಾರ ಜಿಲ್ಲಾಧ್ಯಕ್ಷ ಎ.ಸದಾನಂದಮಾತನಾಡಿ, ಶಿಕ್ಷಣ ಸಂಸ್ಥೆಗಳು ಇಲಾಖೆಯಆದೇಶಗಳನ್ನು ಪಾಲಿಸುತ್ತವೆ.ಪೋಷಕರೊಂದಿಗೂ ಉತ್ತಮ ಬಾಂಧವ್ಯಹೊಂದಿವೆ. ಆದರೆ, ಶಾಲೆಯನ್ನುಉಳಿಸಿಕೊಳ್ಳುವ ಪ್ರಯತ್ನವನ್ನು ನಾವಿಂದುಮಾಡಬೇಕಾಗಿದೆ. ಸರ್ಕಾರ ನಿಗ ಪಡಿಸಿದಶೇ.70ರಷ್ಟು ಶುಲ್ಕ ಮಾತ್ರ ವಸೂಲಿಮಾಡಬೇಕುಎಂಬುದನ್ನು ಒಪ್ಪಿಕೊಂಡಿದ್ದೇವೆ.ಅದರಂತೆಯೇ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕಟ್ಟುನಿಟ್ಟಿನ ಆದೇಶ ನೀಡಿ: ಕಾಮ್ಸ್ ಕೋಲಾರತಾಲೂಕು ಅಧ್ಯಕ್ಷ ಲಕ್ಷ್ಮೀನಾರಾಯಣಮಾತನಾಡಿ, ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಕಷ್ಟ ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ,ಸರ್ಕಾರ ನಿಗ ಗೊಳಿಸಿದ ಶೇ.70 ಶುಲ್ಕವನ್ನುಅನೇಕ ಪೋಷಕರು ಪಾವತಿಸುತ್ತಿಲ್ಲ. ಇದರ ವಸೂಲಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ,ನಮ್ಮ ಶಾಲೆಗಳನ್ನು ಉಳಿಸಿ ಎಂದು ಕೋರಿದರು.
ಸಭೆಯಲ್ಲಿ ಖಾಸಗಿ ಶಾಲೆಗಳ ಸಂಘದ ಬಸವೇಶ್ವರ ಜಗದೀಶ್, ಕಾಡುಗುರು ನಾಗಭೂಷಣ್, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ರಾಘವೇಂದ್ರ, ಆರ್.ಶ್ರೀನಿವಾಸನ್, ಬಿಆರ್‌ಪಿ ನಾಗರಾಜ್ ಮತ್ತಿತರರಿದ್ದರು.
ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ :
ಮಕ್ಕಳ ಸುರಕ್ಷತೆಗೆ ಒತ್ತು ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೆ„ಸರ್‌ಕಡ್ಡಾಯವಾಗಿ ಬಳಸಿ, ಎಲ್ಲಾ ಶಿಕ್ಷಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಕೊಠಡಿಗಳ ಸ್ಯಾನಿಟೈಸರ್ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.